Kiccha 46 Teaser: ‘ನಾನು ಮನುಷ್ಯ ಅಲ್ಲ, ರಾಕ್ಷಸ’: ‘ಕಿಚ್ಚ 46’ ಟೀಸರ್​ನಲ್ಲಿ ಸುದೀಪ್​ ಆರ್ಭಟ

Kichcha Sudeep: ಸುದೀಪ್​ ಅವರ ಹೊಸ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ‘ಕಿಚ್ಚ 46’ ಟೀಸರ್​ ನೋಡಲು ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಕಾದಿದ್ದರು.

Kiccha 46 Teaser: ‘ನಾನು ಮನುಷ್ಯ ಅಲ್ಲ, ರಾಕ್ಷಸ’: ‘ಕಿಚ್ಚ 46’ ಟೀಸರ್​ನಲ್ಲಿ ಸುದೀಪ್​ ಆರ್ಭಟ
ಕಿಚ್ಚ ಸುದೀಪ್​
Follow us
ಮದನ್​ ಕುಮಾರ್​
|

Updated on:Jul 02, 2023 | 12:15 PM

ಕಿಚ್ಚ ಸುದೀಪ್​ (Kichcha Sudeep) ಅವರ 46ನೇ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಟೀಸರ್​ ಬಿಡುಗಡೆ ಮಾಡಲಾಗಿದೆ. ‘ವಿಕ್ರಾಂತ ರೋಣ’ ಸಿನಿಮಾ ಬಳಿಕ ಸುದೀಪ್​ ಅವರು ಒಪ್ಪಿಕೊಂಡ ಚಿತ್ರ ಇದು. ಈ ಸಿನಿಮಾಗೆ ‘ವಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಕಲೈಪುಲಿ ಎಸ್​. ಧಾನು (Kalaippuli S Thanu) ಅವರು ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರ ಸೆಟ್ಟೇರಿತು. ಪ್ರೊಮೋ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರ ಬಗ್ಗೆ ಕಿಚ್ಚ ಸುದೀಪ್​ ಅವರು ಅಪ್​ಡೇಟ್​ ನೀಡಿದ್ದರು. ಈಗ ಟೀಸರ್​ ರಿಲೀಸ್​ ಆಗಿ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ #Kichcha46 ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಸುದೀಪ್​ ಅಭಿಮಾನಿಗಳ ವಲಯದಲ್ಲಿ ಈ ಟೀಸರ್​ (Kiccha 46 Teaser) ವೈರಲ್​ ಆಗಿದೆ.

‘ಕಿಚ್ಚ 46’ ಚಿತ್ರದ ಟೀಸರ್​ ನೋಡಲು ಅಭಿಮಾನಿಗಳು ಮಾತ್ರವಲ್ಲದೇ ಚಂದನವನದ ಅನೇಕ ಸೆಲೆಬ್ರಿಟಿಗಳು ಕೂಡ ಕಾದಿದ್ದರು. ಡಾಲಿ ಧನಂಜಯ್​, ನಿರೂಪ್​ ಭಂಡಾರಿ, ವಾಸುಕಿ ವೈಭವ್​, ಸಪ್ತಮಿ ಗೌಡ, ಅನೂಪ್​ ಭಂಡಾರಿ, ಡಾರ್ಲಿಂಗ್​ ಕೃಷ್ಣ, ಅಮೃತಾ ಅಯ್ಯಂಗಾರ್​, ನವೀನ್​ ಶಂಕರ್​ ಮುಂತಾದವರು ಪ್ರೊಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಕೌತುಕ ಹೆಚ್ಚಿಸಿದ್ದರು.

ಹಲವು ಪ್ರಾಜೆಕ್ಟ್​ಗಳಿಗೆ ಕಿಚ್ಚ ಸುದೀಪ್​ ಅವರು ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಮೂರು ಬ್ಯಾಕ್​ ಟು ಬ್ಯಾಕ್​ ಸಿನಿಮಾವನ್ನು ಒಪ್ಪಿಕೊಂಡಿರುವುದಾಗಿ ತಿಳಿಸುವ ಮೂಲಕ ಅವರು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದರು. ಆ ಚಿತ್ರಗಳಲ್ಲಿ ಮೊದಲು ಸೆಟ್ಟೇರಿರುವುದು ‘ವಿ ಕ್ರಿಯೇಷನ್ಸ್​’ ಜೊತೆಗಿನ ಸಿನಿಮಾ. ಹಲವು ಕಾರಣಗಳಿಂದಾಗಿ ಈ ಚಿತ್ರ ವಿಶೇಷ ಎನಿಸಿಕೊಂಡಿದೆ.

ಇದನ್ನೂ ಓದಿ: ಜೂ ಕಿಚ್ಚನ ಪರಿಚಯಿಸಿದ ಶಿವರಾಜ್ ಕುಮಾರ್ ಮತ್ತು ರವಿಚಂದ್ರನ್

ತುಂಬ ರಗಡ್​ ಆಗಿ ‘ಕಿಚ್ಚ 46’ ಟೀಸರ್​ ಮೂಡಿಬಂದಿದೆ. ಈ ಸಿನಿಮಾದ ಮೇಕಿಂಗ್​ ಕ್ವಾಲಿಟಿ ಬಗ್ಗೆ ಕೆಲವರಿಗೆ ಅನುಮಾನ ಇತ್ತು. ಅದಕ್ಕೆ ತಕ್ಕ ಉತ್ತರ ನೀಡುವ ರೀತಿಯಲ್ಲಿ, ಬಹಳ ಅದ್ದೂರಿಯಾಗಿ ಟೀಸರ್​ ಚಿತ್ರೀಕರಿಸಲಾಗಿದೆ. ಇದರಲ್ಲಿನ ಡೈಲಾಗ್​ಗಳು ಗಮನ ಸೆಳೆಯುತ್ತಿವೆ. ‘ನಾನು ಯುದ್ಧಕ್ಕೆ ಇಳಿದ ಮೇಲೆ ದಯೆ, ಕ್ಷಮೆ, ಸಂಧಾನ ಇದು ಯಾವುದೂ ಇರೋದಿಲ್ಲ. ನಾನು ಮನುಷ್ಯ ಅಲ್ಲ. ನಾನು ರಾಕ್ಷಸ’ ಎಂದು ಟೀಸರ್​ನ ಕೊನೆಯಲ್ಲಿ ಸುದೀಪ್​ ಹೇಳುವ ಡೈಲಾಗ್​ ಟ್ರೆಂಡ್​ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:09 pm, Sun, 2 July 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ