AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudeep Birthday: ಕಿಚ್ಚ ಸುದೀಪ್‌ ಜನ್ಮದಿನ; 4 ಹೊಸ ಅನೌನ್ಸ್​ಮೆಂಟ್​​ಗೆ ಕೌಂಟ್​ಡೌನ್

Kichcha Sudeep Birthday: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಾಯಿಯ ಅಗಲಿಕೆಯಿಂದಾಗಿ ಅಭಿಮಾನಿಗಳ ಜೊತೆಗಿನ ನೇರ ಆಚರಣೆಗೆ ಬ್ರೇಕ್ ಹಾಕಿರುವ ಸುದೀಪ್, ಹುಟ್ಟುಹಬ್ಬದ ಅಂಗವಾಗಿ 4 ಹೊಸ ಸಿನಿಮಾಗಳ ಭರ್ಜರಿ ಅನೌನ್ಸ್‌ಮೆಂಟ್ ನೀಡಿ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಲಿದ್ದಾರೆ.

Sudeep Birthday: ಕಿಚ್ಚ ಸುದೀಪ್‌ ಜನ್ಮದಿನ; 4 ಹೊಸ ಅನೌನ್ಸ್​ಮೆಂಟ್​​ಗೆ ಕೌಂಟ್​ಡೌನ್
ಸುದೀಪ್ Image Credit source: Sudeep
ಮಂಗಳ ರಾಜ್
| Edited By: |

Updated on:Sep 02, 2026 | 7:02 AM

Share

ಮುಖ್ಯಾಂಶಗಳು

  • ಕಿಚ್ಚ ಸುದೀಪ್ ಜನ್ಮದಿನ
  • ತಾಯಿಯ ನೆನಪಿನಲ್ಲಿ ಕಿಚ್ಚ
  • ಅಭಿಮಾನಿಗಳ ಜೊತೆಗಿನ ಆಚರಣೆಗೆ ಬ್ರೇಕ್

ಕನ್ನಡ ಚಿತ್ರರಂಗದ ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ (Kichcha Sudeep) ಇಂದು ತಮ್ಮ 53ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಪ್ರಪಂಚಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭ ಹಾರೈಸುತ್ತಿದ್ದಾರೆ. ಆದರೆ, ಈ ಬಾರಿ ಸುದೀಪ್ ಅವರು ಅಭಿಮಾನಿಗಳ ಜೊತೆ ನೇರ ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ತಾಯಿ ನಿಧನದ ಬಳಿಕ ಅವರಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ಆಸಕ್ತಿಯೇ ಹೋಗಿದೆ.

ಸಾಧಾರಣ ಹಿನ್ನೆಲೆಯಿಂದ ಬಂದು ತಮ್ಮ ಸ್ವಂತ ಪರಿಶ್ರಮ ಹಾಗೂ ಅದ್ಭುತ ನಟನೆಯಿಂದ ಸುದೀಪ್ ಇಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ನಾಯಕ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಹಾಗೂ ಯಶಸ್ವಿ ನಿರೂಪಕನಾಗಿ ಚಿತ್ರರಂಗದಲ್ಲಿ ತಮ್ಮದೇ ಆದ ಸಾಮ್ರಾಜ್ಯ ಕಟ್ಟಿದ್ದಾರೆ. ಇಂದು ಭಾರತೀಯ ಚಿತ್ರರಂಗವೇ ತಿರುಗಿ ನೋಡುವ ಮಟ್ಟಿಗೆ ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ತಾವು ಓರ್ವ ಹೀರೋ ಮಾತ್ರ ಅಲ್ಲ, ಉತ್ತಮ ವಿಲನ್ ಕೂಡ ಹೌದು ಎಂಬುದನ್ನು ಅನೇಕ ಸಿನಿಮಾಗಳ ಮೂಲಕ ಅವರು ಸಾಬೀತು ಮಾಡಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಸಾಲು ಸಾಲು ಸಿನಿಮಾಗಳ ಉಡುಗೊರೆ ಸಿಗುತ್ತಿದೆ. ಇಂದು ಸುದೀಪ್ ಅಭಿನಯದ ಒಟ್ಟು ನಾಲ್ಕು ಹೊಸ ಸಿನಿಮಾಗಳ ಅಧಿಕೃತ ಘೋಷಣೆಯಾಗಲಿದೆ. ಇದು ಅವರ ಅಭಿಮಾನಿಗಳ ಉತ್ಸಾಹವನ್ನು ಇಮ್ಮಡಿಗೊಳಿಸಿದೆ.

ಬೆಳಿಗ್ಗೆ 08.08 ನಿಮಿಷಕ್ಕೆ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಬಾಷಾ’ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆಯಾಗಲಿದೆ. ಜೊತೆಗೆ ‘ಸ್ಕೂಲ್ ಬಸ್’ ಚಿತ್ರತಂಡದಿಂದ ಕಿಚ್ಚ ಸುದೀಪ್‌ಗೆ ಗೌರವ ಸಲ್ಲಿಸಲು ಸ್ಪೆಷಲ್ ವಿಡಿಯೋ ಒಂದನ್ನು ರಿಲೀಸ್ ಮಾಡಲಾಗುತ್ತಿದೆ.

ಇದನ್ನೂ ಓದಿ: ನಾಲ್ಕು ಬಡ ಕುಟುಂಬಗಳ ಬಾಳಿಗೆ ಬೆಳಕಾದ ಕಿಚ್ಚ ಸುದೀಪ್

ಇದರ ಜೊತೆಗೆ ಲೆನಿನ್ ಕ್ರಿಯೇಷನ್ಸ್ ಹಾಗೂ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಬಗ್ಗೆಯೂ ಮಾಹಿತಿ ಹೊರಬರಲಿದೆ. ಖ್ಯಾತ ನಟ-ನಿರ್ದೇಶಕ ಸಮುದ್ರಖಣಿ ನಿರ್ದೇಶನದ ಸಿನಿಮಾದ ಅನೌನ್ಸ್‌ಮೆಂಟ್ ಕೂಡ ಇಂದೇ ನಡೆಯಲಿದೆ. ಆದರೆ, ಈ ಸಿನಿಮಾಗಳಲ್ಲಿ ಸುದೀಪ್ ಅವರ ಪಾತ್ರ ಏನು ಎಂಬುದನ್ನು ಚಿತ್ರತಂಡ ಸದ್ಯಕ್ಕೆ ಸಸ್ಪೆನ್ಸ್ ಆಗಿ ಇಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Wed, 2 September 26

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್