AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ರಾಜೀವ್ ಸಿನಿಮಾದಲ್ಲಿ ಕಿಚ್ಚ ಸುದೀಪ್: ‘ಉಸಿರೇ-ಉಸಿರೇ’

Kichcha Sudeep: ಬಿಗ್​ಬಾಸ್ ಖ್ಯಾತಿಯ ರಾಜೀವ್ ನಟನೆಯ 'ಉಸಿರೇ ಉಸಿರೇ' ಸಿನಿಮಾದಲ್ಲಿ ನಟ ಕಿಚ್ಚ ಸುದೀಪ್ ನಟಿಸಿದ್ದಾರೆ.

ಬಿಗ್​ಬಾಸ್ ರಾಜೀವ್ ಸಿನಿಮಾದಲ್ಲಿ ಕಿಚ್ಚ ಸುದೀಪ್: 'ಉಸಿರೇ-ಉಸಿರೇ'
ಸುದೀಪ್-ರಾಜೀವ್
ಮಂಜುನಾಥ ಸಿ.
|

Updated on:Aug 02, 2023 | 11:24 PM

Share

ಸುದೀಪ್ (Sudeep) ತಮ್ಮ ವಾರಗೆಯ, ತಮಗಿಂತ ಕಿರಿಯ ನಟ, ನಿರ್ದೇಶಕರಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಬಿಗ್​ಬಾಸ್ ನಿರೂಪಣೆ ಮಾಡುವ ಸುದೀಪ್, ಬಿಗ್​ಬಾಸ್​ನ ಸ್ಪರ್ಧಿಗಳು ಮನೆಯಿಂದ ಹೊರಬಂದ ಮೇಲೆಯೂ ಅವರ ಮೇಲೆ ಅದೇ ಪ್ರೀತಿ ಕಾಳಜಿ ತೋರುತ್ತಾ ಬಂದಿದ್ದಾರೆ. ಹಲವು ಬಿಗ್​ಬಾಸ್ ಸ್ಪರ್ಧಿಗಳಿಗೆ ತಮ್ಮದೇ ರೀತಿಯಲ್ಲಿ ಸಹಾಯ ಮಾಡುತ್ತಾ ಬಂದಿದ್ದಾರೆ. ಹಲವರ ವೃತ್ತಿ ಜೀವನಕ್ಕೆ ನೆರವಾಗಿದ್ದಾರೆ. ಇದೀಗ ಬಿಗ್​ಬಾಸ್ (Bigg Boss) ಖ್ಯಾತಿಯ ರಾಜೇಶ್​ ಹೊಸ ಸಿನಿಮಾದಲ್ಲಿ ನಟಿಸಿದ್ದು, ಆ ಸಿನಿಮಾದಲ್ಲಿ ನಟಿಸುವ ಮೂಲಕ ಸುದೀಪ್ ಮತ್ತೊಮ್ಮೆ ತಮ್ಮ ದೊಡ್ಡತನ ಮೆರೆದಿದ್ದಾರೆ.

‘ಉಸಿರೇ ಉಸಿರೇ’ ಹೆಸರಿನ ಸಿನಿಮಾದಲ್ಲಿ ಬಿಗ್​ಬಾಸ್ ಖ್ಯಾತಿಯ ರಾಜೇಶ್ ನಟಿಸಿದ್ದಾರೆ. ಪ್ರೇಮಕವಿ ಕೆ.ಕಲ್ಯಾಣ್ ಈ ಸಿನಿಮಾಕ್ಕಾಗಿ ಬರೆದಿರುವ ‘ಉಸಿರೇ ನನ್ನ ಉಸಿರೇ’ ಎಂಬ ಶೀರ್ಷಿಕೆ ಗೀತೆಯನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಮಾಡಿ ವಾಸುಕಿ ವೈಭವ್ ಹಾಡಿರುವ ಈ ಹಾಡನ್ನು ಹಿರಿಯ, ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ಹಾಗೂ ಭೀಮ ಜ್ಯುಯಲರ್ಸ್ ನ ಮಾಲೀಕ ವಿಷ್ಣು ಭಟ್ ರಿಲೀಸ್ ಮಾಡಿದ್ದಾರೆ.

ಸಿನಿಮಾದ ಬಗ್ಗೆ ಮಾತನಾಡಿದ ನಾಯಕ ರಾಜೀವ್, ಇದೊಂದು ಸರಳ ಪ್ರೇಮಕಥೆ. ಪ್ರೇಮಕ್ಕೆ ಜಾತಿಯಿಲ್ಲ ಎಂದು ಹೇಳುವ ಕತೆ. ನಮ್ಮ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ‌. ಬಳ್ಳಾರಿಯ ರೇಣುಕಾಂಬ ಜಾತ್ರೆ ಮತ್ತು ಮಂತ್ರಾಲಯದ ಗುರು ರಾಯರ ಸನ್ನಿಧಿಯಲ್ಲಿ ಸಿನಿಮಾದ ಟೀಸರ್ ಬಿಡುಗಡೆ‌ ಮಾಡಿದೆವು. ಇದೀಗ ಮೊದಲ ಹಾಡು ಬಿಡುಗಡೆ ಆಗಿದೆ. ಸಾಮಾನ್ಯವಾಗಿ ಮೊದಲು ಯುಗಳ ಗೀತೆ ರಿಲೀಸ್ ಮಾಡುತ್ತಾರೆ. ಆದರೆ ನಾವು ಭಾವುಕ ಹಾಡು ಬಿಡುಗಡೆ ಮಾಡಿದ್ದೀವಿ. ಈಗ ಬಿಡುಗಡೆ ಆಗಿರುವ ಈ ಹಾಡಿನಲ್ಲಿ ಇಡೀ ಸಿನಿಮಾದ ಕಥೆಯಿದೆ. ಹಾಡನ್ನು ಏಕಾಗ್ರತೆಯಿಂದ ಕೇಳಿದರೆ ಸಿನಿಮಾದ ಕತೆ ಅರ್ಥ ಆಗುತ್ತದೆ ಎಂದರು.

ಇದನ್ನೂ ಓದಿ:ತಿರುಪತಿಗೆ ಸುದೀಪ್ ಭೇಟಿ: ಅಭಿಮಾನಿಗಳ ಸೆಲ್ಫಿಗೆ ಕಿಚ್ಚನ ಸ್ಮೈಲ್

ನಾನು ಸಿನಿಮಾ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಅವರೆ ಕಾರಣ ಅವರನ್ನು ಸ್ಪೂರ್ತಿಯಾಗಿ ಪಡೆದುಕೊಂಡು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದೀನಿ. ಅವರು ನನ್ನ ಬೆಂಬಲವಾಗಿ ಇದ್ದಾರೆ ಅಷ್ಟು ಮಾತ್ರವೇ ಅಲ್ಲದೆ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟನೆ ಸಹ ಮಾಡಿದ್ದಾರೆ. ಸಿನಿಮಾದ ಕೊನೆಯಲ್ಲಿ ಸುದೀಪ್ ನಟನೆಯ ಸುಮಾರು 18 ನಿಮಿಷಗಳು ಇವೆ ಎಂದರು ‘ಉಸಿರೇ ಉಸಿರೇ’ ಸಿನಿಮಾದ ನಿರ್ಮಾಪಕ ಪ್ರದೀಪ್ ಯಾದವ್.

ಸಿನಿಮಾದ ನಿರ್ದೇಶಕ ವಿಜಯ್ ಮಾತನಾಡಿ, ಸಿನಿಮಾದ ಶೂಟಿಂಗ್ ಅಂತ್ಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ಸೆಪ್ಟೆಂಬರ್ ನಲ್ಲಿ ಸಿನಿಮಾ ಬಿಡುಗಡೆ ಮಾಡುತ್ತೇವೆ. ನಾಯಕಿಯಾಗಿ ಶ್ರೀಜಿತ ಕಾಣಿಸಿಕೊಂಡಿದ್ದಾರೆ. ನಟ ಕಿಚ್ಚ ಸುದೀಪ್ ವಿಶೇಷವಾದ ಪಾತ್ರದಲ್ಲಿ ನಟಿಸಿದ್ದಾರೆ. ತೆಲುಗಿನ ಜನಪ್ರಿಯ ನಟ ಆಲಿ ಹಾಗೂ ಬ್ರಹ್ಮಾನಂದಂ ಮೊದಲ ಬಾರಿಗೆ ಕನ್ನಡದಲ್ಲಿ ಒಟ್ಟಿಗೆ ನಟಿಸಿರುವುದು ನಮ್ಮ ಸಿನಿಮಾದಲ್ಲಿಯೇ. ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು, ಜಗಪ್ಪ, ಸುಶ್ಮಿತಾ ಇನ್ನೂ ಮುಂತಾದವರ ತಾರಾಬಳಗವಿದೆ. ಸಿನಿಮಾದ ಟ್ರೈಲರ್ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Wed, 2 August 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ