AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ್ ಸಿನಿಮಾದ ಟೈಟಲ್ ಟೀಸರ್ ಶೂಟ್ ಮಾಡಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಪ್ರೇಮ್ ಅವರು 'ದಿ ವಿಲನ್' ಚಿತ್ರದ ಬಳಿಕ ಮತ್ತೊಮ್ಮೆ ಜೊತೆಯಾಗುತ್ತಿದ್ದು, ಹೊಸ ಸಿನಿಮಾದ ಟೈಟಲ್ ಟೀಸರ್ ಶೂಟಿಂಗ್ ಆರಂಭಿಸಿದ್ದಾರೆ. ಬಿಗ್ ಬಾಸ್ ಶೋನ ಜೊತೆಗೆ ಸಿನಿಮಾಗಳಲ್ಲಿ ಬ್ಯುಸಿ ಇರುವ ಸುದೀಪ್, ಪ್ರೇಮ್ ಜೊತೆಗಿನ ಹೊಸ ಪ್ರಾಜೆಕ್ಟ್ ಬಗ್ಗೆ ಸುಳಿವು ನೀಡಿದ್ದು, ಈ ಜೋಡಿ ಈ ಬಾರಿ ಬಾಕ್ಸ್ ಆಫೀಸ್‌ನಲ್ಲಿ ಗೆಲುವು ಸಾಧಿಸಲಿದೆಯೇ ಎಂಬ ಕುತೂಹಲ ಮೂಡಿಸಿದೆ.

ಪ್ರೇಮ್ ಸಿನಿಮಾದ ಟೈಟಲ್ ಟೀಸರ್ ಶೂಟ್ ಮಾಡಿದ ಕಿಚ್ಚ ಸುದೀಪ್
ಸುದೀಪ್-ಪ್ರೇಮ್
ರಾಜೇಶ್ ದುಗ್ಗುಮನೆ
|

Updated on: Oct 12, 2026 | 12:25 PM

Share

ಮುಖ್ಯಾಂಶಗಳು

  • ಮತ್ತೊಮ್ಮೆ ಒಂದಾದ ಪ್ರೇಮ್-ಸುದೀಪ್
  • ಹೊಸ ಸಿನಿಮಾದ ಟೈಟಲ್ ಟೀಸರ್ ಶೂಟಿಂಗ್ ಶುರು
  • ನಿರೀಕ್ಷೆ ಮೂಡಿಸಿರುವ ಕಾಂಬಿನೇಷನ್

ನಟ ಕಿಚ್ಚ ಸುದೀಪ್ ಹಾಗೂ ಜನಪ್ರಿಯ ನಿರ್ದೇಶಕ ಪ್ರೇಮ್ ಅವರ ಕಾಂಬಿನೇಷನ್ ಬಗ್ಗೆ ಸಿನಿಮಾ ರಂಗದಲ್ಲಿ ಭಾರೀ ನಿರೀಕ್ಷೆ ಹಾಗೂ ಕುತೂಹಲ ಮೂಡಿದೆ. ‘ದಿ ವಿಲನ್’ ಚಿತ್ರದ ಬಳಿಕ ಈ ಇಬ್ಬರೂ ದಿಗ್ಗಜರು ಮತ್ತೊಮ್ಮೆ ಒಂದಾಗುತ್ತಿದ್ದು, ಹೊಸ ಸಿನಿಮಾದ ಟೈಟಲ್ ಟೀಸರ್ ಗಾಗಿ ಶೂಟಿಂಗ್ ಆರಂಭಿಸಿದ್ದಾರೆ. ಬಿಗ್ ಬಾಸ್ 13 ಸೆಟ್​ನಿಂದ ಸುದೀಪ್ ಅವರು ಫೋಟೋವೊಂದನ್ನು ಹಂಚಿಕೊಳ್ಳುವುದರ ಜೊತೆಗೆ, ಪ್ರೇಮ್ ಅವರೊಂದಿಗೆ ಮತ್ತೊಮ್ಮೆ ಕೆಲಸ ಮಾಡುತ್ತಿರುವುದಕ್ಕೆ ಖುಷಿಯನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಈ ಜೋಡಿಯಿಂದ ಬಂದಿದ್ದ ‘ದಿ ವಿಲನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಆ ಚಿತ್ರದ ಬಳಿಕ ಮತ್ತೆ ಈ ಕಾಂಬಿನೇಷನ್ ಒಂದಾಗುತ್ತಿರುವುದರಿಂದ, ಈ ಬಾರಿ ಇವರು ಯಾವ ರೀತಿಯ ಮ್ಯಾಜಿಕ್ ಮಾಡಲಿದ್ದಾರೆ ಎಂಬ ಕುತೂಹಲ ಕನ್ನಡಿಗರಲ್ಲಿ ಹೆಚ್ಚಾಗಿದೆ. ಸಿನಿಪ್ರಿಯರು ಈ ಹೊಸ ಪ್ರಾಜೆಕ್ಟ್ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆಗಳನ್ನುಟ್ಟುಕೊಂಡಿದ್ದಾರೆ. ರೊಮ್ಯಾಂಟಿಕ್ ಹಾಗೂ ಕಾಮಿಡಿ ಶೈಲಿಯಲ್ಲಿ ಸಿನಿಮಾ ಬರಲಿದೆಯಂತೆ.

ನಟ ಕಿಚ್ಚ ಸುದೀಪ್ ಅವರು ವೃತ್ತಿಜೀವನದಲ್ಲಿ ಈಗಾಗಲೇ ಹಲವು ಬ್ಯುಸಿ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ಮಾರ್ಕ್’ ಸಿನಿಮಾ ಬಳಿಕ ಅವರು ‘ಬಿಲ್ಲ ರಂಗ ಭಾಷಾ’ ಚಿತ್ರದ ಕೆಲಸಗಳಲ್ಲಿ ಅವರು ಸಕ್ರಿಯರಾಗಿದ್ದಾರೆ. ಇದರ ನಡುವೆ ಅವರು ಪ್ರೇಮ್ ಚಿತ್ರದ ಶೂಟ್ ಮಾಡಲಿದ್ದಾರೆ. ಅವರು ಈ ಹೊಸ ಸಿನಿಮಾದ ಪ್ರೋಮೋ ಶೂಟ್‌ನಲ್ಲಿ ಭಾಗಿಯಾಗಿರುವುದು ಅಭಿಮಾನಿಗಳಿಗೆ ಮತ್ತಷ್ಟು ಉತ್ಸಾಹ ತಂದಿದೆ.

ಇದನ್ನೂ ಓದಿ: ಮಂಜ ಒಬ್ಬನನ್ನೆ ಹೊರಗೆ ಕಳಿಸಿದ್ದು ನನಗೆ ಇಷ್ಟ ಆಗ್ಲಿಲ್ಲ: ಸುದೀಪ್

ಪ್ರೇಮ್ ಮತ್ತು ಸುದೀಪ್ ಅವರ ಈ ಹೊಸ ಸಿನಿಮಾದ ಟೈಟಲ್ ಟೀಸರ್ ಶೂಟಿಂಗ್ ಮುಗಿದ ಬಳಿಕ ಚಿತ್ರದ ಕುರಿತಾದ ಹೆಚ್ಚಿನ ಮಾಹಿತಿಗಳು ಹೊರಬೀಳಲಿವೆ. ಈ ದಿಗ್ಗಜರ ಹೊಸ ಮೈತ್ರಿ ಸ್ಯಾಂಡಲ್‌ವುಡ್‌ನಲ್ಲಿ ಹೊಸ ದಾಖಲೆಗಳನ್ನು ಬರೆಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇನ್ನು, ಸಿನಿಮಾಗಳ ಚಿತ್ರೀಕರಣ ಹಾಗೂ ಬ್ಯುಸಿ ಶೆಡ್ಯೂಲ್ ನಡುವೆಯೂ ಕಿಚ್ಚ ಸುದೀಪ್ ಅವರು ಎಂದಿನಂತೆ ವೀಕೆಂಡ್‌ನಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಅನ್ನು ಯಶಸ್ವಿಯಾಗಿ ನಿರೂಪಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ
ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ
​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ
​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ