AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಸ್ನೇಹದ ಸಂದೇಶ ಸಾರಲಿದೆ ಸುದೀಪ್​-ಪುನೀತ್​ ಕಟೌಟ್​; ಭರ್ಜರಿಯಾಗಿ ನಡೆದಿದೆ ಪ್ಲ್ಯಾನ್​

Kichcha Sudeep | Puneeth Rajkumar: ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. ‘ವಿಕ್ರಾಂತ್​ ರೋಣ’ ಚಿತ್ರದ ಬಿಡುಗಡೆ ಪ್ರಯುಕ್ತ ಅವರಿಬ್ಬರ ವಿಶೇಷ ಕಟೌಟ್​ ತಯಾರಾಗುತ್ತಿದೆ.

Puneeth Rajkumar: ಸ್ನೇಹದ ಸಂದೇಶ ಸಾರಲಿದೆ ಸುದೀಪ್​-ಪುನೀತ್​ ಕಟೌಟ್​; ಭರ್ಜರಿಯಾಗಿ ನಡೆದಿದೆ ಪ್ಲ್ಯಾನ್​
ಸುದೀಪ್​, ಪುನೀತ್​ ರಾಜ್​ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Jul 22, 2022 | 8:15 AM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಚಿತ್ರರಂಗದ ಎಲ್ಲರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದರು. ಎಲ್ಲರನ್ನೂ ಅವರು ಗೌರವದಿಂದ ಕಾಣುತ್ತಿದ್ದರು. ಹಿರಿಯರು-ಕಿರಿಯರು ಎಂಬ ಭೇದ ತೋರದೇ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದರು. ಆ ಕಾರಣಕ್ಕಾಗಿ ಅಪ್ಪು ಎಂದರೆ ಎಲ್ಲರಿಗೂ ಸಖತ್​ ಅಭಿಮಾನ. ಇಂದು ಭೌತಿಕವಾಗಿ ಅವರು ನಮ್ಮ ಜೊತೆ ಇಲ್ಲ. ಆದರೆ ಹಲವು ವಿಚಾರಗಳ ಮೂಲಕ ಮತ್ತೆ ಮತ್ತೆ ನೆನಪಾಗುತ್ತಾರೆ. ಅಭಿಮಾನಿಗಳು ಪುನೀತ್​ ರಾಜ್​ಕುಮಾರ್ ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅದೇ ರೀತಿ ಚಿತ್ರರಂಗದವರು ಕೂಡ ಅಪ್ಪು ನೆನಪನ್ನು ಸದಾ ಹಸಿರಾಗಿ ಇಟ್ಟುಕೊಳ್ಳುತ್ತಾರೆ. ಈಗ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ಕಿಚ್ಚ ಸುದೀಪ್​ (Kichcha Sudeep) ಮತ್ತು ಪುನೀತ್​ ಅವರ ಕಟೌಟ್​ಗಳು ಥಿಯೇಟರ್​ ಮುಂಭಾಗದಲ್ಲಿ ರಾರಾಜಿಸಲಿವೆ.

ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. ಬಾಲ್ಯದಿಂದಲೂ ಅವರು ಪರಿಚಿತರು. ವೇದಿಕೆ ಕಾರ್ಯಕ್ರಮವೊಂದರಲ್ಲಿ ಇಬ್ಬರು ಜೊತೆಯಾಗಿ ಪೋಸ್​ ನೀಡಿದ ಈ ಫೋಟೋಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದೇ ಫೋಟೋ ಈಗ ಕಟೌಟ್​ ರೂಪದಲ್ಲಿ ಸಿದ್ಧವಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ಸ್ನೇಹವನ್ನು ಸಾರುವ ಈ ಕಟೌಟ್​ಗಳನ್ನು ಚಿತ್ರಮಂದಿರಗಳ ಮುಂದೆ ನಿಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

‘ವಿಕ್ರಾಂತ್​ ರೋಣ’ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಮತ್ತು ಹಾಡುಗಳಿಂದಾಗಿ ಸಿನಿಮಾ ಮೇಲಿನ ಕ್ರೇಜ್​ ಹೆಚ್ಚಿದೆ. ಗ್ರ್ಯಾಂಡ್​ ಆಗಿ ‘ವಿಕ್ರಾಂತ್​ ರೋಣ’ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಸುದೀಪ್​-ಪುನೀತ್​ ಕಟೌಟ್​ ಕೂಡ ಹೈಲೈಟ್​ ಆಗಲಿದೆ.

ಇದನ್ನೂ ಓದಿ
Image
Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​
Image
Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
Image
ಪುನೀತ್​ ಪುತ್ಥಳಿ ಅನಾವರಣದ ವೇಳೆ ಬಿಕ್ಕಿ ಬಿಕ್ಕಿ ಅತ್ತ ರಾಘವೇಂದ್ರ ರಾಜ್​ಕುಮಾರ್​ ಪತ್ನಿ ಮಂಗಳಾ

ಈ ಸಿನಿಮಾದಲ್ಲಿ ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಸಂಗೀತ ನೀಡಿರುವ ಹಾಡುಗಳು ಸೂಪರ್ ಹಿಟ್​ ಆಗಿವೆ. 3ಡಿಯಲ್ಲಿ ಮೂಡಿಬರುತ್ತಿರುವ ಈ ಚಿತ್ರ ದಾಖಲೆ ಪ್ರಮಾಣದಲ್ಲಿ ಓಪನಿಂಗ್​ ಪಡೆಯುವ ನಿರೀಕ್ಷೆ ಇದೆ. ‘ವಿಕ್ರಾಂತ್​ ರೋಣ’ನಿಗೆ ಅದ್ದೂರಿ ಸ್ವಾಗತ ನೀಡಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು