AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್

ಟೋಕಿಯೋ ಒಲಿಂಪಿಕ್ಸ್ -2020ರಲ್ಲಿ ನೀರಜ್ ಚೋಪ್ರಾ ಅವರು ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಖ್ಯಾತಿ ದೇಶದ ಮೂಲೆಮೂಲೆಗೂ ತಲುಪಿದೆ.

ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್
ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 01, 2021 | 2:02 PM

Share

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್ ಜತೆ​​ಗೂ ಸುದೀಪ್​ಗೂ ಉತ್ತಮ ಫ್ರೆಂಡ್​ಶಿಪ್​ ಇದೆ. ಇದರ ಜತೆ ಅನೇಕ ಸೆಲೆಬ್ರಿಟಿಗಳ ಜತೆ ಸುದೀಪ್​ ಒಳ್ಳೆಯ ನಂಟು ಹೊಂದಿದ್ದಾರೆ. ಟೋಕಿಯೋ ಒಲಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್​ ಚೋಪ್ರಾ ಅವರು ಸುದೀಪ್​ ಜನ್ಮದಿನಕ್ಕೆ ಹಾಗೂ ‘ವಿಕ್ರಾಂತ್​ ರೋಣ’ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ -2020ರಲ್ಲಿ ನೀರಜ್ ಚೋಪ್ರಾ ಅವರು ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಖ್ಯಾತಿ ದೇಶದ ಮೂಲೆಮೂಲೆಗೂ ತಲುಪಿದೆ. ಅವರು ಸುದೀಪ್​ಗೆ ಬರ್ತ್​ಡೇ ವಿಶ್​ ಮಾಡಿರೋದು ವಿಶೇಷ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ.

ನಾಳೆ (ಸೆಪ್ಟೆಂಬರ್​ 2) ‘ಡೆಡ್​ ಮ್ಯಾನ್​ ಆ್ಯಂಥಮ್​’ ರಿಲೀಸ್​ ಆಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ‘ವಿಕ್ರಾಂತ ರೋಣ’ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ನೀರಜ್​ ಚೋಪ್ರಾ ಅವರು ಸುದೀಪ್​ಗೆ ಬರ್ತ್​ಡೆ ವಿಶ್​ ಮಾಡಿದ್ದಾರೆ. ಜತೆಗೆ ಅವರ ಸಿನಿಮಾಗೂ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಖುಷಿ ಜತೆ ಅಚ್ಚರಿ ಕೂಡ ಹೊರ ಹಾಕಿದ್ದಾರೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ ನಿಜ. ಆದರೆ, ಮೂರನೇ ಅಲೆ ಬರುವ ಮುನ್ಸೂಚನೆ ಸಿಕ್ಕಿದೆ. ಈ ಕಾರಣಕ್ಕೆ ಸುದೀಪ್​ ಅವರು ಅಭಿಮಾನಿಗಳನ್ನು ಭೇಟಿ ಆಗುತ್ತಿಲ್ಲ. ‘ನನ್ನೆಲ್ಲ ಅಭಿಮಾನಿ ಸ್ನೇಹಿತರಲ್ಲಿ ಮನವಿ. ಕೊವಿಡ್​ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ನಿಮ್ಮೆಲ್ಲರನ್ನು ಭೇಟಿ ಆಗಲು ಆಗುತ್ತಿಲ್ಲ. ಕ್ಷಮೆ ಇರಲಿ. ಮುಂದೆ ಪರಿಸ್ಥಿತಿ ಸುಧಾರಿಸಿದ ನಂತರ ನಿಮ್ಮೆಲ್ಲರನ್ನೂ ಭೇಟಿ ಆಗುತ್ತೇನೆ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ’ ಎಂದು ಸುದೀಪ್​ ಅವರು ‘ಕಿಚ್ಚ ಕ್ರಿಯೇಷನ್​’ ಟ್ವಿಟರ್​ ಖಾತೆ ಮೂಲಕ ಸಂದೇಶ ನೀಡಿದ್ದರು.

ಇದನ್ನೂ ಓದಿ: ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ

Kichcha Sudeep: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕಿಚ್ಚ ಸುದೀಪ್​; ಫೋಟೋ ವೈರಲ್​

Published On - 12:08 pm, Wed, 1 September 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ