‘ಬಿಲ್ಲ ರಂಗ ಬಾಷಾ’ ಚಿತ್ರದ ಹೊಸ ಪೋಸ್ಟರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ 'ಬಿಲ್ಲ ರಂಗ ಬಾಷಾ' ಸಿನಿಮಾದ ಧಮಾಕಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಅನೂಪ್ ಭಂಡಾರಿ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರದಲ್ಲಿ ಸುದೀಪ್ ರಗಡ್ ಲುಕ್‌ನಲ್ಲಿ ಮಿಂಚಿದ್ದು, ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಚಿತ್ರದ ಮೇಲೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ.

ಬಿಲ್ಲ ರಂಗ ಬಾಷಾ ಚಿತ್ರದ ಹೊಸ ಪೋಸ್ಟರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಸುದೀಪ್
ಸುದೀಪ್
Image Credit source: Sudeep

Updated on: Sep 02, 2026 | 8:53 AM

ಮುಖ್ಯಾಂಶಗಳು

  • ಹಿಮದ ಸಾಮ್ರಾಜ್ಯದಲ್ಲಿ ರಗಡ್ ಲುಕ್‌ನಲ್ಲಿ ಮಿಂಚಿದ ಕಿಚ್ಚ
  • 'ವಿಕ್ರಾಂತ್ ರೋಣ' ಕಾಂಬಿನೇಷನ್ ರಿಪೀಟ್
  • ಅನೂಪ್ ಭಂಡಾರಿ-ಸುದೀಪ್ ಜುಗಲ್ಬಂದಿ

ಹಿಮಾಚ್ಛಾದಿತ ಪ್ರದೇಶ. ಅಲ್ಲಿ ವೇಗವಾಗಿ ಚಲಿಸುತ್ತಿರೋ ಬೈಕ್. ಮೇಲ್ಭಾಗದಲ್ಲಿ ಹಾರುತ್ತಿರೋ ಹೆಲಿಕಾಪ್ಟರ್. ಬೈಕ್​ ಮೇಲೆ ಕುಳಿತು ರೈಡ್ ಮಾಡ್ತಿರೋದು ಬೇರೆ ಯಾರೂ ಅಲ್ಲ ಬರ್ತ್​ಡೇ ಬಾಯ್ ಕಿಚ್ಚ ಸುದೀಪ್. ಸುದೀಪ್ ಅವರ 53ನೇ ಜನ್ಮದಿನದ ಸಂದರ್ಭದಲ್ಲಿ’ಬಿಲ್ಲ ರಂಗ ಬಾಷಾ’ ಸಿನಿಮಾದ ಭರ್ಜರಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಪೋಸ್ಟರ್ ಅಭಿಮಾನಿಗಳ ಗಮನ ಸೆಳೆದಿದೆ.

ಪೋಸ್ಟರ್‌ನಲ್ಲಿ ಕಿಚ್ಚ ಸುದೀಪ್ ಅವರು ಹಿಂದೆಂದೂ ಕಾಣಿಸಿಕೊಂಡಿರದ ಅತ್ಯಂತ ರಗಡ್ ಹಾಗೂ ಫ್ಯೂಚರಿಸ್ಟಿಕ್ ಲುಕ್‌ನಲ್ಲಿ ಮಿಂಚಿದ್ದಾರೆ. ಹಿಮದಿಂದ ಆವೃತವಾದ ಹಿನ್ನೆಲೆಯಲ್ಲಿ ಬೈಕ್ ಚಲಾಯಿಸುತ್ತಾ, ಕಣ್ಣಿಗೆ ಗಾಗಲ್ಸ್ ಮತ್ತು ವಿಶಿಷ್ಟ ಶೈಲಿಯ ಕೋಟ್ ಧರಿಸಿರುವ ಅವರ ಮಾಸ್ ಲುಕ್ ಅಭಿಮಾನಿಗಳ ಹುಚ್ಚೆಬ್ಬಿಸಿದೆ. ಹಿನ್ನೆಲೆಯಲ್ಲಿ ವಿಮಾನ ಹಾಗೂ ರೈಲು ಪಲ್ಟಿಯಾಗುತ್ತಿರುವ ದೃಶ್ಯಗಳು ಇವೆ. ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದರ ಸೂಚನೆ ನೀಡಿದೆ.

ಇದನ್ನೂ ಓದಿ: ‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್

‘ವಿಕ್ರಾಂತ್ ರೋಣ’ ಯಶಸ್ಸಿನ ನಂತರ ನಟ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಪ್ರೈಮ್ ಶೋ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಿಸುತ್ತಿದ್ದು, ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ.

‘ಬಿಲ್ಲ ರಂಗ ಬಾಷಾ’ ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಗಿದೆ. ಜೂನ್ ತಿಂಗಳಲ್ಲಿ ಸಿನಿಮಾದ ಶೂಟ್ ಮತ್ತೆ ಶುರುವಾಗಿದೆ.  ಈ ಬಿಗ್ ಬಜೆಟ್ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಮುಂದಿನ ವರ್ಷ (2027) ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಪೋಸ್ಟರ್ ರಿಲೀಸ್ ಆಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಿನಿಮಾದ ಮೇಲಿನ ನಿರೀಕ್ಷೆ ಇಮ್ಮಡಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us