ರಿಷಬ್​ನ ತಮ್ಮ ಎಂದು ಕರೆದ ಸುದೀಪ್; ಕಿಚ್ಚನ ಮಾತಿಗೊಂದು ಅರ್ಥವಿದೆ..

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಆದರೂ ಅವರಿಗೆ ಸುದೀಪ್ ಅವರ ಮೇಲಿರುವ ಪ್ರೀತಿ, ಅಭಿಮಾನ ಕಡಿಮೆ ಆಗಿಲ್ಲ. ಈಗ ಸುದೀಪ್ ಅವರು ಕೂಡ ರಿಷಬ್ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.

ರಿಷಬ್​ನ ತಮ್ಮ ಎಂದು ಕರೆದ ಸುದೀಪ್; ಕಿಚ್ಚನ ಮಾತಿಗೊಂದು ಅರ್ಥವಿದೆ..
ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on: Sep 25, 2024 | 10:44 AM

ಕಿಚ್ಚ ಸುದೀಪ್ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಒಳ್ಳೆಯ ಆಪ್ತತೆ ಇದೆ. ರಿಷಬ್ ಶೆಟ್ಟಿ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದರೂ ತಮಗೆ ಸ್ಫೂರ್ತಿ ತುಂಬಿದ, ಏನೂ ಇಲ್ಲದಾಗಲೂ ಬೆಂಬಲಿಸಿದ ಸುದೀಪ್ ಅವರನ್ನು ಮರೆತಿಲ್ಲ. ಎಷ್ಟೇ ಬೆಳೆದರೂ ಸುದೀಪ್ ಅವರನ್ನು ನೆನಪಿನಲ್ಲಿ ಇಟ್ಟುಕೊಳ್ಳೋದಾಗಿ ಅವರು ಹೇಳಿದ್ದಾರೆ. ಈಗ ಸುದೀಪ್ ಅವರು ಕೂಡ ರಿಷಬ್ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಅವರು ಈ ಬಾರಿಯ ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎನ್ನುವ ಸುದ್ದಿ ಹರಿದಾಡಿತ್ತು. ರಿಷಬ್ ಅವರು ‘ಬಿಗ್ ಬಾಸ್’ ನಿರೂಪಣೆಗೆ ಇರುವ ಮುಂದಿನ ಆಯ್ಕೆ ಎಂಬ ಮಾತುಗಳು ಕೂಡ ಇದ್ದವು. ಇತ್ತೀಚೆಗೆ ನಡೆದ ಬಿಗ್ ಬಾಸ್ ಸುದ್ದಿಗೋಷ್ಠಿಯಲ್ಲಿ ಸುದೀಪ್​ಗೆ ಈ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ರಿಷಬ್ ಹೆಸರು ಕೇಳಿ ಬಂದಿತ್ತಲ್ಲ’ ಎಂದು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅವರು, ‘ಕೇಳಿ ಬರ್ಲಿ ಬಿಡಿ. ಒಳ್ಳೆಯ ಹೆಸರು ತಾನೇ ಕೇಳಿ ಬಂದಿತ್ತು. ನಮ್ಮ ತಮ್ಮಂದೇ ಬಂದಿದ್ದು, ಒಳ್ಳೆಯದಾಗಲಿ’ ಎಂದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ರಿಷಬ್ ಹಾಗು ಸುದೀಪ್ ಮಧ್ಯೆ ಇರುವ ಗೆಳೆತನವನ್ನು ಎಲ್ಲರೂ ಕೊಂಡಾಡಿದ್ದಾರೆ.

ಇದನ್ನೂ ಓದಿ: ಜೂ.ಎನ್​ಟಿಆರ್​ ಹಾಗೂ ಪ್ರಶಾಂತ್​ ನೀಲ್​ಗೆ ಹುಟ್ಟೂರು ಪರಿಚಯಿಸಿದ ರಿಷಬ್ ಶೆಟ್ಟಿ

ಇತ್ತೀಚೆಗೆ ರಿಷಬ್ ಅವರು ಮಾತನಾಡಿದ್ದರು. ಈ ವೇಳೆ ‘ಕಾಂತಾರಾದ ಅಪ್ಪನಂಥ ಸಿನಿಮಾ ಮಾಡಿದರೂ ನಾನು ಸುದೀಪ್ ಅಭಿಮಾನಿ’ ಎಂದು ಹೇಳಿದ್ದರು. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ರಿಷಬ್ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ನಿರೂಪಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ರಾಮಾಯಣ ಮತ್ತು ಮಹಾಭಾರತಕ್ಕೆ ಮೋದಿ ಸಹಿ
ರಾಮಾಯಣ ಮತ್ತು ಮಹಾಭಾರತಕ್ಕೆ ಮೋದಿ ಸಹಿ
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್