‘ಮ್ಯಾಕ್ಸ್’ ಗೆದ್ದಿದ್ದಕ್ಕೆ ಸುದೀಪ್ ಹಾಗೂ ತಂಡದ ‘ಮ್ಯಾಕ್ಸಿಮಮ್’ ಸಂಭ್ರಮಾಚರಣೆ

Kichcha Sudeep: ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಕನ್ನಡ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೆ ಸುದೀಪ್, ‘ಮ್ಯಾಕ್ಸ್’ ಚಿತ್ರತಂಡದ ಜೊತೆಗೆ ತಮ್ಮ ಮನೆಯಲ್ಲಿ ಪಾರ್ಟಿ ಮಾಡಿದ್ದು, ‘ಮ್ಯಾಕ್ಸ್’ ಗೆಲುವನ್ನು ಸಂಭ್ರಮಿಸಿದ್ದಾರೆ.

‘ಮ್ಯಾಕ್ಸ್’ ಗೆದ್ದಿದ್ದಕ್ಕೆ ಸುದೀಪ್ ಹಾಗೂ ತಂಡದ ‘ಮ್ಯಾಕ್ಸಿಮಮ್’ ಸಂಭ್ರಮಾಚರಣೆ
Sudeep Max
Follow us
ಮಂಜುನಾಥ ಸಿ.
|

Updated on:Dec 26, 2024 | 6:59 AM

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ನಿನ್ನೆ ಬಿಡುಗಡೆ ಆಗಿದ್ದು ಸಿನಿಮಾದ ಬಗ್ಗೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಸಹ ‘ಮ್ಯಾಕ್ಸ್’ ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳು ಪ್ರಕಟವಾಗಿದ್ದು, ಸಿನಿಮಾ ಭಿನ್ನವಾಗಿದೆ, ಚೆನ್ನಾಗಿದೆ, ಸುದೀಪ್​ಗೆ ಹೇಳಿ ಮಾಡಿಸಿದ ಸಿನಿಮಾ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ. ಮೊದಲ ದಿನವೇ ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳು ವ್ಯಕ್ತವಾಗಿರುವ ಕಾರಣ ಸುದೀಪ್, ‘ಮ್ಯಾಕ್ಸ್’ ಚಿತ್ರತಂಡದೊಂದಿಗೆ ಸೇರಿ ಗೆಲುವಿನ ಸೆಲೆಬ್ರೇಷನ್ ಮಾಡಿದ್ದಾರೆ.

ಸುದೀಪ್ ಮನೆಯಲ್ಲಿ ‘ಮ್ಯಾಕ್ಸ್’ ತಂಡಕ್ಕೆ ಪ್ರತ್ಯೇಕ ಪಾರ್ಟಿ ಕೊಟ್ಟಿದ್ದಾರೆ ಸುದೀಪ್. ಚಿತ್ರತಂಡದ ಜೊತೆಗೆ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಸುದೀಪ್, ಪ್ರಿಯಾ ಹಾಗೂ ಪಾರ್ಟಿಗೆ ಹಾಜರಾಗಿದ್ದ ಎಲ್ಲರೂ ‘ಮ್ಯಾಕ್ಸ್’ ಹೆಸರಿನ ಟಿ-ಶರ್ಟ್​ಗಳನ್ನು ಧರಿಸಿ ಭಾಗಿಯಾಗಿದ್ದರು. ಕೇಕ್​ಗಳನ್ನು ಕತ್ತರಿಸಿ, ಒಟ್ಟಿಗೆ ಸಿನಿಮಾ ಗೆದ್ದ ಸೆಲೆಬ್ರೇಷನ್ ಮಾಡಿದ್ದಾರೆ. ಎಲ್ಲರೂ ಒಟ್ಟಿಗೆ ಚಿತ್ರಗಳನ್ನು ಸಹ ತೆಗೆಸಿಕೊಂಡಿದ್ದಾರೆ.

ಇದನ್ನೂ ಓದಿ:ಮ್ಯಾಕ್ಸ್ ಚಿತ್ರದಲ್ಲಿ ಸುದೀಪ್ ಜೊತೆ ಮಿಂಚಿದ ಉಗ್ರಂ ಮಂಜು

ಪಾರ್ಟಿಯ ಚಿತ್ರಗಳು ವಿಡಿಯೋಗಳು ವೈರಲ್ ಆಗುತ್ತಿದ್ದು, ಸುದೀಪ್ ಹಾಗೂ ಅವರ ಪತ್ನಿ ಪ್ರಿಯಾ ಅವರು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡು ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಮಾಡಿರುವ ಸಿಗ್ನೇಚರ್ ಮೂವ್ ಒಂದನ್ನು ಮಾಡಿರುವ ಕ್ಯೂಟ್ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸುದೀಪ್ ಅಭಿಮಾನಿಗಳು ‘ಮ್ಯಾಕ್ಸ್’ ಪಾರ್ಟಿಯ ಚಿತ್ರ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ವೈರಲ್ ಮಾಡುತ್ತಿದ್ದಾರೆ.

ನಿನ್ನೆ ಬಿಡುಗಡೆ ಆಗಿರುವ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಒಂದೇ ರಾತ್ರಿಯಲ್ಲಿ ನಡೆಯುವ ಕತೆಯಾಗಿದ್ದು, ಕತೆಯಲ್ಲಿ ಒಳ್ಳೆಯ ವೇಗವಿದೆ. ಸುದೀಪ್ ನಟನೆ ಸಹ ಬಹಳ ಚೆನ್ನಾಗಿದೆ ಎನ್ನಲಾಗುತ್ತಿದೆ. ಸಿನಿಮಾದ ಆಕ್ಷನ್ ಮತ್ತು ಸಂಗೀತದ ಬಗ್ಗೆಯೂ ಪ್ರಶಂಸೆ ವ್ಯಕ್ತವಾಗುತ್ತಿದೆ. ‘ಮ್ಯಾಕ್ಸ್’ ಸಿನಿಮಾ ಅನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಖ್ಯಾತ ತಮಿಳು ನಿರ್ಮಾಪಕ ಕಲೈಪುಲಿ ಎಸ್ ಥನು ಮತ್ತು ಸ್ವತಃ ಸುದೀಪ್. ಸಂಗೀತ ನೀಡಿರುವುದು ಅಜನೀಶ್ ಲೋಕನಾಥ್. ಸಿನಿಮಾದ ವಿತರಣೆ ಮಾಡಿರುವುದು ಕೆಆರ್​ಜಿ ಸ್ಟುಡಿಯೋಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 am, Thu, 26 December 24

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ