‘ನಾನು ಒಪ್ಪಿಕೊಂಡ ಕಾರ್ಯಕ್ರಮ ತಪ್ಪಿಸಿದವನಲ್ಲ’; ವಾಲ್ಮೀಕಿ ಜಾತ್ರೆಗೆ ಗೈರಾದ ಬಗ್ಗೆ ಸುದೀಪ್ ಸ್ಪಷ್ಟನೆ

Kichcha Sudeep: ಕಿಚ್ಚ ಸುದೀಪ್ ಅವರು ಬರುತ್ತಾರೆ ಎಂದು ಭಾವಿಸಿ ಅವರ ಅಭಿಮಾನಿಗಳು ವಾಲ್ಮೀಕಿ ಜಾತ್ರೆಯಲ್ಲಿ ನೆರೆದಿದ್ದರು. ವೇದಿಕೆ ಕಾರ್ಯಕ್ರಮದಲ್ಲಿ ಹಾಜರಿ ಹಾಕಿ ಕಿಚ್ಚ ಸುದೀಪ್ ಎಂದು ಘೋಷಣೆ ಕೂಗುತ್ತಿದ್ದರು.

‘ನಾನು ಒಪ್ಪಿಕೊಂಡ ಕಾರ್ಯಕ್ರಮ ತಪ್ಪಿಸಿದವನಲ್ಲ’; ವಾಲ್ಮೀಕಿ ಜಾತ್ರೆಗೆ ಗೈರಾದ ಬಗ್ಗೆ ಸುದೀಪ್ ಸ್ಪಷ್ಟನೆ
ಸುದೀಪ್ ಗೆ ದೊಡ್ಡ ಮಟ್ಟದ ಫ್ಯಾನ್ ಫಾಲೋಯಿಂಗ್ ಪಕ್ಷಕ್ಕೆ ಲಾಭ
Follow us
|

Updated on:Feb 10, 2023 | 9:49 AM

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ (Kichcha Sudeep) ಅವರು ಗೈರಾಗಿದ್ದರು. ಇದರಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು. ಸುದೀಪ್ ಕಾರ್ಯಕ್ರಮಕ್ಕೆ ಹಾಜರಿ ಹಾಕದೆ ಇರುವುದು ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಇದಕ್ಕೆ ಈಗ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಏನಿದು ಘಟನೆ?

ಕಿಚ್ಚ ಸುದೀಪ್ ಅವರು ಬರುತ್ತಾರೆ ಎಂದು ಭಾವಿಸಿ ಅವರ ಅಭಿಮಾನಿಗಳು ವಾಲ್ಮೀಕಿ ಜಾತ್ರೆಯಲ್ಲಿ ನೆರೆದಿದ್ದರು. ವೇದಿಕೆ ಕಾರ್ಯಕ್ರಮದಲ್ಲಿ ಹಾಜರಿ ಹಾಕಿ ಕಿಚ್ಚ ಸುದೀಪ್ ಎಂದು ಘೋಷಣೆ ಕೂಗುತ್ತಿದ್ದರು. ಇದರಿಂದ ಇತರೆ ಕಾರ್ಯಕ್ರಮಕ್ಕೆ ಕಿರಿಕಿರಿ ಆಯಿತು. ವಾಲ್ಮೀಕಿ ಪೀಠಾಧಿಪತಿ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಶಾಂತಿಯಿಂದ ಇರುವಂತೆ ಸುದೀಪ್ ಅಭಿಮಾನಿಗಳ ಬಳಿ ಕೋರಿದರು. ಅಲ್ಲದೆ, ಸುದೀಪ್ ಬರುತ್ತಿದ್ದಾರೆ ಎನ್ನುವ ಭರವಸೆ ನೀಡಿದರು. ಕಿಚ್ಚ ಸುದೀಪ್ ಬಾರದ ಕಾರಣ ಅಭಿಮಾನಿಗಳು ದಾಂಧಲೆ ನಡೆಸಿ, ಕುರ್ಚಿಗಳನ್ನು ಪುಡಿಪುಡಿ ಮಾಡಿದರು.

ಇದನ್ನೂ ಓದಿ
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
Kichcha Sudeep: ‘ಕನ್ನಡ್​’ ಎಂದರೆ ಸಹಿಸಲ್ಲ ಸುದೀಪ್​; ಹಿಂದಿ ಮಂದಿಗೆ ಕಿಚ್ಚ ಖಡಕ್​ ತಿರುಗೇಟು ನೀಡಿದ ವಿಡಿಯೋ ವೈರಲ್​
Image
Bigg Boss OTT: ಬಿಗ್​​ ಬಾಸ್​ ಶೋ ಹಿಂದೆ ಸುದೀಪ್​ಗೆ ಹಲವು ಚಾಲೆಂಜ್​; ವೇದಿಕೆಯಲ್ಲಿ ಎಲ್ಲವನ್ನೂ ವಿವರಿಸಿದ ಕಿಚ್ಚ
Image
Kichcha Sudeep: ಕಿಚ್ಚನ ಹೃದಯವಂತಿಕೆ; ಹಾರ್ಟ್​ ಸಮಸ್ಯೆ ಹೊಂದಿರುವ ಪುಟ್ಟ ಬಾಲಕನನ್ನು ಭೇಟಿಯಾದ ಸುದೀಪ್​

ಸುದೀಪ್ ಸ್ಪಷ್ಟನೆ

ಕಾರ್ಯಕ್ರಮಕ್ಕೆ ಗೈರಾದ ಬಗ್ಗೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ಸ್ನೇಹಿತರಿಗೆ ನಮಸ್ಕಾರ. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು. ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ. ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ, ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಅತೀವ ಆಸೆ . ಮುಂದೆ ಖಂಡಿತ ಬರುವೆ. ಪ್ರೀತಿ ಇರಲಿ. ಶಾಂತರೀತಿಯಿಂದ ವರ್ತಿಸಿ. ಪ್ರೀತಿಯೊಂದಿಗೆ  ನಿಮ್ಮ ಕಿಚ್ಚ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಆಹ್ವಾನ ನೀಡಿದ್ದ ಫೋಟೋ ವೈರಲ್​

ಆಯೋಜಕರಿಂದ ಆಹ್ವಾನ ಇರಲಿಲ್ಲ ಎಂದು ಸುದೀಪ್​ ಟ್ವೀಟ್​ ಮಾಡಿದ ಬೆನ್ನಲ್ಲೇ ಈ ಮೊದಲು ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಲು ಹೋಗಿದ್ದ ಫೋಟೋ ವೈರಲ್ ಆಗಿದೆ. ಸುದೀಪ್​​ ನಿವಾಸಕ್ಕೆ ಹೋಗಿ ಆಹ್ವಾನ ನೀಡಿದ್ದ ಫೋಟೋ ಇದಾಗಿದೆ. ಸುದೀಪ್ ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಕೈಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಿದ್ದರು. ಆಹ್ವಾನ ವಿಚಾರದಲ್ಲಿ ಸಾಕಷ್ಟು ಗೊಂದಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:01 am, Fri, 10 February 23

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ