Prakash Raj: ‘ಸುದೀಪ್ ನಿರ್ಧಾರದಿಂದ ಬೇಸರ ಮತ್ತು ಶಾಕ್ ಆಗಿದೆ’; ಪ್ರಕಾಶ್ ರಾಜ್​

‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸುದೀಪ್ ಒಟ್ಟಾಗಿ ಸುದ್ದಿಗೋಷ್ಠಿ ನಡೆಸಿದರು.

Prakash Raj: ‘ಸುದೀಪ್ ನಿರ್ಧಾರದಿಂದ ಬೇಸರ ಮತ್ತು ಶಾಕ್ ಆಗಿದೆ’; ಪ್ರಕಾಶ್ ರಾಜ್​
ಪ್ರಕಾಶ್ ರಾಜ್​-ಸುದೀಪ್
Follow us
|

Updated on: Apr 06, 2023 | 10:52 AM

ಸುದೀಪ್ ಹಾಗೂ ಪ್ರಕಾಶ್​ ರಾಜ್ (Prakash Raj) ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇದೆ. ಆದರೆ, ಇಬ್ಬರ ರಾಜಕೀಯ ನಿಲುವುಗಳು ಬೇರೆಬೇರೆ. ಸುದೀಪ್ ತೆಗೆದುಕೊಂಡ ನಿರ್ಧಾರದಿಂದ ಪ್ರಕಾಶ್​​ ರಾಜ್​ಗೆ ಬೇಸರ ಆಗಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಸದ್ಯ ಈ ಬಗ್ಗೆ ಪರ-ವಿರೋಧ ಚರ್ಚೆ ಆಗುತ್ತಿದೆ. ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬುದು ಅವರವರಿಗೆ ಬಿಟ್ಟ ನಿರ್ಧಾರ ಎಂದು ಅನೇಕರು ಹೇಳಿದ್ದಾರೆ.

ಸುದೀಪ್ ಅವರು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಚುನಾವಣೆಯಲ್ಲಿ ಸುದೀಪ್ ಅವರು ಬಿಜೆಪಿಯನ್ನು ಬೆಂಬಲಿಸುತ್ತಾರೆ, ಪಕ್ಷ ಸೇರಲ್ಲ ಎಂದು ಕೆಲವರು ಹೇಳಿದರು. ಈ ಎಲ್ಲಾ ಬೆಳವಣಿಗೆ ಬಗ್ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದರು. ‘ಕರ್ನಾಟಕದಲ್ಲಿ ಹತಾಶರಾದ, ಸೋತ ಬಿಜೆಪಿಯಿಂದ ಹರಡಿದ ಸುಳ್ಳು ಸುದ್ದಿ ಇದು ಎಂದು ನಾನು ಬಲವಾಗಿ ನಂಬುತ್ತೇನೆ. ಕಿಚ್ಚ ಸುದೀಪ್ ಪ್ರಜ್ಞಾವಂತ ವ್ಯಕ್ತಿ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು.

ಇದಾದ ಕೆಲವೇ ಗಂಟೆಗಳಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸುದೀಪ್ ಒಟ್ಟಾಗಿ ಸುದ್ದಿಗೋಷ್ಠಿ ನಡೆಸಿದರು. ಬಸವರಾಜ ಬೊಮ್ಮಾಯಿ ಪರ ನಿಲ್ಲುವುದಾಗಿ ಸುದೀಪ್ ಹೇಳಿದರು. ಈ ಮೂಲಕ ಹರಿದಾಡುತ್ತಿದ್ದ ಸುದ್ದಿ ನಿಜ ಆಯಿತು. ಈ ಬಗ್ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಮಾತು ತಪ್ಪದ ಯಶ್, ಪ್ರಕಾಶ್ ರೈ ಜೊತೆ ಸೇರಿ ಅಪ್ಪು ಹೆಸರಲ್ಲಿ ಆಂಬುಲೆನ್ಸ್ ವಿತರಣೆ

‘ಸುದೀಪ್ ಹೇಳಿಕೆಯಿಂದ ನನಗೆ ಶಾಕ್ ಹಾಗೂ ಬೇಸರ ಆಗಿದೆ’ ಎಂದು ಪ್ರಕಾಶ್ ರಾಜ್ ಹೇಳಿರುವುದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 2019ರಲ್ಲಿ ಪ್ರಕಾಶ್ ರಾಜ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ, ಅವರು ಸೋತಿದ್ದರು.

ಇದನ್ನೂ ಓದಿ:  ‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’; ಸುದೀಪ್ ಬಿಜೆಪಿ ಸೇರ್ತಾರೆ ಎನ್ನುವ ವಿಚಾರದಲ್ಲಿ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಪ್ರಕಾಶ್ ರಾಜ್ ಅವರು ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಾಗೂ ಬಲ ಪಂಥೀಯ ಚಿಂತನೆಗಳನ್ನು ಖಂಡಿಸುತ್ತಲೇ ಬರುತ್ತಿದ್ದಾರೆ. ಈಗ ಸುದೀಪ್ ಅವರು ಬಿಜೆಪಿ ಪರ ನಿಂತಿದ್ದಾರೆ ಎನ್ನುವ ವಿಚಾರ ಕೇಳಿ ಸಹಜವಾಗಿಯೇ ಅವರಿಗೆ ಬೇಸರ ಆಗಿದೆ. ಈ ವಿಚಾರದಲ್ಲಿ ಸುದೀಪ್ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು