AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್

ನಟ ಸುದೀಪ್ ವಿರುದ್ಧ ಸತೀಶ್ ನಿರಂತರವಾಗಿ ಟೀಕೆ ಮಾಡುತ್ತಿದ್ದು, ಇದಕ್ಕೆ ರಜತ್ ಹಾಗೂ ವಿನಯ್ ಸುದೀಪ್ ಪರವಾಗಿ ನಿಂತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಜತ್, ಸುದೀಪ್ ಬಗ್ಗೆ ಕೆಟ್ಟದಾಗಿ ಯೋಚಿಸುವ ಮೊದಲು "ಯಮ ಕಿಂಕರರನ್ನು" ದಾಟಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಸುದೀಪ್ ಜೊತೆಗಿನ ಫೋಟೋ ಹಂಚಿಕೊಂಡು, ತಾವು ಸದಾ ಕಿಚ್ಚನ ಬೆಂಬಲಕ್ಕೆ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ.

‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್
ವಿನಯ್, ಸುದೀಪ್,ರಜತ್
ರಾಜೇಶ್ ದುಗ್ಗುಮನೆ
|

Updated on: Mar 10, 2026 | 10:46 AM

Share

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ನಟ ಸುದೀಪ್ ಮೇಲೆ ನಿರಂತರವಾಗಿ ಟೀಕೆಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಈ ಪ್ರಕರಣದಲ್ಲಿ ಸುದೀಪ್ ಪರವಾಗಿ ವಿನಯ್ ಹಾಗೂ ರಜತ್ ಮಾತನಾಡುತ್ತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲು ಮಾಡಿದ್ದಾರೆ. ಹೀಗಿರುವಾಗಲೇ ರಜತ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​​ನಲ್ಲಿ ತಾವು ಯಾವಾಗಲೂ ಸುದೀಪ್ ಪರ ನಿಲ್ಲೋದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಜೊತೆಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಹಾಕಿದ್ದಲ್ಲದೆ, ‘ದಾದಾ ಯಾರ್ ಗೊತ್ತಾ’ ಹಾಡನ್ನು ಪೋಸ್ಟ್ ಮಾಡಿದ್ದರು. ಇದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಆ ಬಳಿಕ ಸತೀಶ್ ಅವರನ್ನು ರಜತ್ ಪ್ರಶ್ನೆ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆಯನ್ನು ಸಹ ನೀಡಿದ್ದರು. ಅಲ್ಲದೆ, ವಿನಯ್ ಕೂಡ ರಜತ್ ಬೆಂಬಲಕ್ಕೆ ನಿಂತು, ಸತೀಶ್​​ಗೆ ಎಚ್ಚರಿಕೆ ನೀಡಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸತೀಶ್ ರಜತ್ ಹಾಗೂ ವಿನಯ್ ಮೇಲೆ ಕೇಸ್ ಹಾಕಿದ್ದಾರೆ.

View this post on Instagram

A post shared by Rajath kishan G (@bujjjjii)

ಈ ಬೆನ್ನಲ್ಲೇ ಪೋಸ್ಟ್ ಮಾಡಿರೋ ರಜತ್ ಅವರು, ‘ನಮ್ಮ ಬಾದ್​​ಶಾ ಕಿಚ್ಚ ಸರ್ ಬಗ್ಗೆ ಮಾತಾಡೋದು ಅಲ್ಲ, ಕೆಟ್ಟದಾಗಿ ಯೋಚನೆ ಮಾಡ್ಬೇಕು ಅಂದರೂನೂ ಈ ಯಮ ಕಿಂಕರರನ ಮೊದಲು ದಾಟಬೇಕು. ವಿ ಲವ್​ ಯೂ ಸರ್’ ಎಂದು ಸುದೀಪ್ ಜೊತೆ ಇರೋ ಫೋಟೋನ ವಿನಯ್ ಹಾಗೂ ರಜತ್ ಕೊಲ್ಯಾಬರೇಷನ್ ಅಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ’: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್

ರಜತ್ ಅವರು ಸುದೀಪ್ ಅಭಿಮಾನಿ. ಬಿಗ್ ಬಾಸ್​​​​ಗೆ ಬಂದ ಬಳಿಕ ಸುದೀಪ್ ಅವರ ಜೊತೆ ಒಳ್ಳೆಯ ನಂಟು ಬೆಳೆಯಿತು. ವಿನಯ್ ಹಾಗೂ ರಜತ್ ಮಚ್ಚಿನ ಕೇಸ್​ ಅಲ್ಲಿ ಒಳಕ್ಕೆ ಹೋದಾಗ, ಅವರನ್ನು ಬಿಡಿಸಿ ಕರೆದುಕೊಂಡು ಬಂದಿದ್ದು ಸುದೀಪ್ ಎನ್ನಲಾಗಿದೆ. ಈ ವಿಷಯವನ್ನು ರಜತ್ ಅವರು ಅನೇಕ ಬಾರಿ ಹೇಳಿದ್ದರು. ಈ ಕಾರಣದಿಂದ ಸುದೀಪ್​​​ ಬಗ್ಗೆ ಯಾರೋ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದಾಗ ಅದನ್ನು ಇವರು ವಿರೋಧಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪುಟಿನ್​ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ
ಪುಟಿನ್​ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಸಿಎಂ
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಸಿಎಂ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ