ಅದ್ಧೂರಿಯಾಗಿರಲಿದೆ ಕಿಚ್ಚನ ಹುಟ್ಟುಹಬ್ಬ, ಈ ಬಾರಿ ಅಭಿಮಾನಿಗಳೊಟ್ಟಿಗೆ ಸಂಭ್ರಮ: ಎಲ್ಲಿ? ಯಾವಾಗ?

Kichcha Sudeep: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಇನ್ನು ಕೆಲವೇ ದಿನಗಳಷ್ಟೆ ಉಳಿದಿವೆ. ಸುದೀಪ್ ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ತಮ್ಮ ಮೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ಸಜ್ಜಾಗಿದ್ದಾರೆ.

ಅದ್ಧೂರಿಯಾಗಿರಲಿದೆ ಕಿಚ್ಚನ ಹುಟ್ಟುಹಬ್ಬ, ಈ ಬಾರಿ ಅಭಿಮಾನಿಗಳೊಟ್ಟಿಗೆ ಸಂಭ್ರಮ: ಎಲ್ಲಿ? ಯಾವಾಗ?
ಸುದೀಪ್
Follow us
ಮಂಜುನಾಥ ಸಿ.
|

Updated on: Aug 27, 2023 | 10:08 PM

ಸ್ಯಾಂಡಲ್​ವುಡ್​ನಲ್ಲಿ (Sandalwood) ಹುಟ್ಟುಹಬ್ಬದ ಸಂಭ್ರಮ ಜೋರಾಗಿ ನಡೆಯುತ್ತಿವೆ. ಒಬ್ಬರಾದ ಮೇಲೊಬ್ಬ ನಟರುಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಮೊದಲಿಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅದ್ಧೂರಿಯಾಗಿ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಇತ್ತೀಚೆಗೆ ನಟ ಡಾಲಿ ಧನಂಜಯ್ (Daali Dhananjay) ಸಹ ನಂದಿ ಲಿಂಕ್ ಗ್ರೌಂಡ್ಸ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಅದಾದ ಬಳಿಕ ಖಾಸಗಿ ಹೋಟೆಲ್​ನಲ್ಲಿ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳೊಟ್ಟಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ನಿನ್ನೆಯಷ್ಟೆ ನಟಿ, ಸಂಸದೆ ಸುಮಲತಾ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಇದೀಗ ಮತ್ತೊಬ್ಬ ಸ್ಟಾರ್ ನಟನ ಹುಟ್ಟುಹಬ್ಬ ಹತ್ತಿರವಾಗಿದ್ದು ಮತ್ತೊಂದು ಅದ್ಧೂರಿ ಆಚರಣೆಗೆ ಸ್ಯಾಂಡಲ್​ವುಡ್ ರೆಡಿಯಾಗಿದೆ.

ಸೆಪ್ಟೆಂಬರ್ 2 ರಂದು ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬವಿದ್ದು ಅಭಿನಯ ಚಕ್ರವರ್ತಿಯ ಹುಟ್ಟುಹಬ್ಬವನ್ನೂ ಹಿಂದೆಂದೂ ಮಾಡಿರದಷ್ಟು ಅದ್ಧೂರಿಯಾಗಿ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಸಜ್ಜಾಗಿದ್ದಾರೆ. ವಿವಿಧ ಕಾರಣಗಳಿಂದ ಕಳೆದ ಕೆಲ ವರ್ಷಗಳಿಂದ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದಿದ್ದ ನಟ ಸುದೀಪ್ ಸಹ ಈ ಬಾರಿ ಮನಸ್ಸು ಮಾಡಿ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಜ್ಜಾಗಿದ್ದಾರೆ.

ಇದನ್ನೂ ಓದಿ:‘ವೀರ ಮದಕರಿ’ಯಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲಕಿ ಈಗ ನಾಯಕಿ; ಎಷ್ಟು ಕ್ಯೂಟ್ ನೋಡಿ

ರಿಷಬ್ ಶೆಟ್ಟಿ, ಡಾಲಿ ಧನಂಜಯ್ ಅವರುಗಳು ಅಭಿಮಾನಿಗಳೊಡನೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಅದೇ ನಂದಿ ಲಿಂಕ್ ಗ್ರೌಂಡ್ಸ್​ನಲ್ಲಿ ಸುದೀಪ್ ಸಹ ಹುಟ್ಟುಹಬ್ಬ ಆಚರಣೆ ಮಾಡಲು ಅವರ ಅಭಿಮಾನಿಗಳು ಸಜ್ಜಾಗಿದ್ದಾರೆ. ಇದಕ್ಕಾಗಿ ಈಗಿನಿಂದಲೂ ತಯಾರಿ ಆರಂಭವಾಗಿದೆ. ಸೆಪ್ಟೆಂಬರ್ 1ರ ರಾತ್ರಿ 10 ರಿಂದ 12ರ ವರೆಗೆ ಸುದೀಪ್ ನಂದಿ ಲಿಂಕ್ ಗ್ರೌಂಡ್ಸ್​ನಲ್ಲಿ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಿದ್ದಾರೆ. 12 ಗಂಟೆಗೆ ಅಭಿಮಾನಿಗಳೊಡನೆ ಕೇಕ್ ಕತ್ತರಿಸಿ ಸಂಭ್ರಮಿಸಲಿದ್ದಾರೆ. ಸೆಪ್ಟೆಂಬರ್ 2 ರಂದು ನಿವಾಸದ ಬಳಿಕ ಮಧ್ಯಾಹ್ನದ ವರೆಗೆ ಅಭಿಮಾನಿಗಳಿಂದ ಶುಭಾಶಯ ಸ್ವೀಕರಿಸಲಿದ್ದಾರೆ.

ಸುದೀಪ್ ಹುಟ್ಟುಹಬ್ಬ ಸಂದರ್ಭಕ್ಕಾಗಿ ವಿಶೇಷ ಸಿಡಿಪಿ (ಕಾಮನ್ ಡಿಪಿ) ಬಿಡುಗಡೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ನದಾನ, ರಕ್ತದಾನ ಕಾರ್ಯಕ್ರಮಗಳನ್ನು ಸಹ ಅಭಿಮಾನಿಳು ಆಯೋಜನೆ ಮಾಡಲಿದ್ದಾರೆ. ಅದೇ ದಿನ ಸುದೀಪ್ ನಟನೆಯ ಕೆಲ ಹೊಸ ಸಿನಿಮಾಗಳ ಘೋಷಣೆ, ಪೋಸ್ಟರ್ ಬಿಡುಗಡೆ, ಪ್ರಸ್ತುತ ನಟಿಸುತ್ತಿರುವ ಕಿಚ್ಚ 46 ಸಿನಿಮಾದ ಹೆಸರು ಹಾಗೂ ಟೀಸರ್ ಬಿಡುಗಡೆ ಇನ್ನೂ ಕೆಲವು ಅಪ್​ಡೇಟ್​ಗಳ ಘೋಷಣೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ