Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್​; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ

ಕಿಚ್ಚ ಸುದೀಪ್​ ಚಾರಿಟೆಬಲ್ ಟ್ರಸ್ಟ್​ ವತಿಯಿಂದ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಲಾಗುತ್ತಿದೆ. ಈಗ ಸ್ಯಾಂಡಲ್​ವುಡ್ ಹಿರಿಯ ಪೋಷಕ ನಟ ಮತ್ತು ನಟಿಯರ ಆರೋಗ್ಯ ವಿಚಾರಿಸಿ ಫುಡ್ ಕಿಟ್ ವಿತರಣೆ ಮಾಡಿದ್ದಾರೆ

Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್​; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ
ಕಿಚ್ಚ ಸುದೀಪ್​

Updated on: May 19, 2021 | 8:13 PM

ಕೊರೊನಾ ವೈರಸ್​ ಹರಡುವಿಕೆ ಮಿತಿ ಮೀರಿದೆ. ಇಂಥ ಸಂದರ್ಭದಲ್ಲಿ ಸಾಕಷ್ಟು ಸ್ಟಾರ್​ಗಳು ಹಿರಿಯ ನಟರ ಸಹಾಯಕ್ಕೆ ನಿಂತಿದ್ದಾರೆ. ಹಿರಿಯ ಕಲಾವಿದರಿಗೆ ಬೇಕಿರುವ ಅಗತ್ಯ ವಸ್ತುಗಳನ್ನು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮೊದಲಿನಿಂದಲೂ ಹಿರಿಯ ನಟರ ಬೆಂಬಲಕ್ಕೆ ನಿಂತಿರುವ ಕಿಚ್ಚ ಸುದೀಪ್​, ಕೊವಿಡ್​ ಸಂದರ್ಭದಲ್ಲೂ ಅವರ ಸಹಾಯಕ್ಕೆ ಮುಂದಾಗಿದ್ದಾರೆ. ಹಿರಿಯ ನಟರಿಗೆ ಪತ್ರದ ಜತೆಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಿದ್ದಾರೆ.

ಕಿಚ್ಚ ಸುದೀಪ್​ ಚಾರಿಟೆಬಲ್ ಟ್ರಸ್ಟ್​ ವತಿಯಿಂದ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಲಾಗುತ್ತಿದೆ. ಈಗ ಸ್ಯಾಂಡಲ್​ವುಡ್ ಹಿರಿಯ ಪೋಷಕ ನಟ ಮತ್ತು ನಟಿಯರ ಆರೋಗ್ಯ ವಿಚಾರಿಸಿ ಫುಡ್ ಕಿಟ್ ವಿತರಣೆ ಮಾಡಿದ್ದಾರೆ. ಈ ಕಿಟ್​ನಲ್ಲಿ ಕಿಚ್ಚ ಸುದೀಪ್ ಅವರ ಒಂದು ಪತ್ರವಿದೆ. ಈ ಪತ್ರದಲ್ಲಿ ‘ನನ್ನ ಕುಟುಂಬದ ಹಿರಿಯರು ನೀವು, ನೀವೆಲ್ಲ ಹೇಗಿದ್ದೀರಿ? ಪ್ರೀತಿಯಿಂದ ನಿಮ್ಮ ಕಿಚ್ಚ ಸುದೀಪ’ ಎಂದು ಬರೆಯಲಾಗಿದೆ.

ಕನ್ನಡದ ನೂರಕ್ಕೂ ಹೆಚ್ಚು ಪೋಷಕ ಕಲಾವಿದರಿಗೆ ಕಿಚ್ಚನ ಯೋಗಕ್ಷೇಮದ ಪತ್ರ ತಲುಪಿದೆ. ಜತೆಗೆ ಅಗತ್ಯವಿರುವ ರೇಷನ್​ ಕಿಟ್​ ಕೂಡ ಅವರ ಮನೆ ಸೇರಿದೆ. ಸದ್ಯ, ಕಿಚ್ಚ ಸುದೀಪ್​ ಮಾಡಿದ ಕೆಲಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಹಾಯ ಕೇಳಿಕೊಂಡು ಬಂದವರಿಗೆ ತಮ್ಮ ಕೈಲಾದ ನೆರವನ್ನು ನೀಡುವುದು ಸುದೀಪ್​ ಜಾಯಮಾನ. ಇತ್ತೀಚೆಗೆ ಅವರು ಬಿಗ್ ಬಾಸ್​ ಸೀಸನ್​ 6ರ ಸ್ಪರ್ಧಿ ಸೋನು ಪಾಟೀಲ್​ಗೆ ಸಹಾಯ ಮಾಡಿದ್ದರು. ಸೋನು ಪಾಟೀಲ್​ ಅವರ ತಾಯಿಗೆ ತೀವ್ರ ಅನಾರೋಗ್ಯವಾಗಿದ್ದು, ಅವರ ಚಿಕಿತ್ಸೆಗೆ ಸುದೀಪ್​ ಲಕ್ಷಾಂತರ ರೂಪಾಯಿ ನೀಡಿದ್ದರು. ಈ ವಿಷಯವನ್ನು ವಿಡಿಯೋ ಮೂಲಕ ಸ್ವತಃ ಸೋನು ಪಾಟೀಲ್​ ಹೇಳಿಕೊಂಡಿದ್ದರು.

‘ಧನ್ಯವಾದಗಳು ಅಣ್ಣ. ಯಾಕೆಂದರೆ ಈ ಸಮಯದಲ್ಲಿ ದುಡ್ಡು ಹೊಂದಿಸುವುದು ನಮಗೆ ಬಹಳ ಕಷ್ಟ ಆಗುತ್ತಿತ್ತು. ನನಗೆ ಏನು ಹೇಳಬೇಕು ಎಂಬುದು ತಿಳಿಯುತ್ತಿಲ್ಲ. ನಾನು ಸಾಯುವವರೆಗೆ ನಿಮ್ಮ ಋಣವನ್ನು ಮರೆಯುವುದಿಲ್ಲ. ಇವತ್ತಿನ ಸಂದರ್ಭದಲ್ಲಿ ಯಾರ ಬಳಿಯೂ ದುಡ್ಡು ಇಲ್ಲ. ದುಡ್ಡು ಇದ್ದವರು ಕೊಡಲು ಮುಂದೆ ಬರುವುದಿಲ್ಲ. ಎಲ್ಲರೂ ಕೈಬಿಟ್ಟರೂ ಸುದೀಪ್​ ಅಣ್ಣ ನಮ್ಮ ಕೈ ಬಿಡಲಿಲ್ಲ. ಫ್ಯಾಮಿಲಿ ಎಂದು ಹೇಳಿದ್ದರು. ಇಂದಿಗೂ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ನನಗೆ ಮಾತ್ರವಲ್ಲ, ಕೊವಿಡ್​ ಸಂದರ್ಭದಲ್ಲಿ ಕಷ್ಟಪಡುತ್ತಿರುವ ಅನೇಕರಿಗೆ ಸುದೀಪ್​ ಚಾರಿಟೆಬಲ್​ ಟ್ರಸ್ಟ್​ನಿಂದ ಸಹಾಯ ಮಾಡುತ್ತಿದ್ದಾರೆ. ನನ್ನ ಆಯಷ್ಯವನ್ನೂ ಆ ದೇವರು ನಿಮಗೆ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ ಅಣ್ಣ’ ಎಂದು ಸೋನು ಪಾಟೀಲ್​ ಹೇಳಿದ್ದರು.

ಇದನ್ನೂ ಓದಿ: Kichcha Sudeep: ಕೊರೊನಾದಿಂದ ಸುದೀಪ್​ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?

Published On - 8:12 pm, Wed, 19 May 21

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us