ಸುದೀಪ್ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್ ರೋಣ’ ಪೋಸ್ಟರ್; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ
ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಎಷ್ಟು ಕ್ರೇಜ್ ಇದೆ ಎಂಬುದಕ್ಕೆ ಈ ಪೋಸ್ಟರ್ ಸಾಕ್ಷಿ ಒದಗಿಸುತ್ತಿದೆ. ಅದನ್ನು ಕಂಡು ಸುದೀಪ್ ಅವರು ‘ಅದ್ಭುತವಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.
ಕೊವಿಡ್-19 ಹಾವಳಿ ಹೆಚ್ಚುವುದಕ್ಕೂ ಮುನ್ನ ನಟ ಕಿಚ್ಚ ಸುದೀಪ್ ಅವರು ಅನೇಕ ಸಿನಿಮಾ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ವಿಕ್ರಾಂತ್ ರೋಣ’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ದೊಡ್ಡ ಕ್ಯಾನ್ವಾಸ್ನಲ್ಲಿ ಸಿನಿಮಾ ತಯಾರಾಗುತ್ತಿದೆ. ಸದ್ಯ ಕೊರೊನಾ ವೈರಸ್ ಎರಡನೇ ಅಲೆಯ ಕಾರಣದಿಂದ ಚಿತ್ರದ ಕೆಲಸಗಳು ಸ್ಥಗಿತಗೊಂಡಿವೆ. ಈ ನಡುವೆ ‘ವಿಕ್ರಾಂತ್ ರೋಣ’ ಸಿನಿಮಾದ ಒಂದು ಪೋಸ್ಟರ್ ಗಮನ ಸೆಳೆದಿದೆ.
ಅರೆರೆ, ಹೇಳದೇ ಕೇಳದೇ ‘ವಿಕ್ರಾಂತ್ ರೋಣ’ ಸಿನಿಮಾ ತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಆಗಿದೆಯೇ? ಹಾಗೇನೂ ಇಲ್ಲ. ಇದು ಫ್ಯಾನ್ಮೇಡ್ ಪೋಸ್ಟರ್. ಅಂದರೆ, ಅಭಿಮಾನಿಗಳೇ ವಿನ್ಯಾಸಗೊಳಿಸಿರುವ ಪೋಸ್ಟರ್. ಅದನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳಲಾಗಿದೆ. ಈ ಪೋಸ್ಟರ್ ಕಂಡು ಸ್ವತಃ ಕಿಚ್ಚ ಸುದೀಪ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅವರು ‘ಅದ್ಭುತವಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಎಷ್ಟು ಕ್ರೇಜ್ ಇದೆ ಎಂಬುದಕ್ಕೆ ಈ ಪೋಸ್ಟರ್ ಸಾಕ್ಷಿ ಒದಗಿಸುತ್ತಿದೆ. ಹೈದರಾಬಾದ್ನಲ್ಲಿ ದೊಡ್ಡ ಕಾಡಿನ ಸೆಟ್ ಹಾಕಿ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಕಳೆದ ವರ್ಷ ಲಾಕ್ಡೌನ್ ಸಡಿಲವಾದಾಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿತ್ತು. ವಿಶ್ವದ ಅತಿ ಎತ್ತರದ ಕಟ್ಟಡ ‘ಭುರ್ಜ್ ಖಲೀಫಾ’ ಮೇಲೆ ‘ವಿಕ್ರಾಂತ್ ರೋಣ’ ಟೈಟಲ್ ಲಾಂಚ್ ಆಗಿದ್ದು, ಸ್ಯಾಂಡಲ್ವುಡ್ ಪಾಲಿಗೆ ಒಂದು ಮೈಲಿಗಲ್ಲಾಗಿತ್ತು.
Awesomeeeee https://t.co/7gtSnDQmHK
— Kichcha Sudeepa (@KicchaSudeep) May 30, 2021
ಶಾಲಿನಿ ಮಂಜುನಾಥ್ ಮತ್ತು ಅಲಂಕಾರ್ ಪಾಂಡಿಯನ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅದ್ದೂರಿ ಬಜೆಟ್ನಲ್ಲಿ ಚಿತ್ರ ಮೂಡಿಬರುತ್ತಿದೆ. ವಿಲಿಯಮ್ ಡೇವಿಡ್ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್ ಮತ್ತು ಟೀಸರ್ಗಳು ಸಿಕ್ಕಾಪಟ್ಟೆ ಕೌತುಕ ಮೂಡಿಸಿವೆ. ಸುದೀಪ್ ಜೊತೆ ನೀತಾ ಅಶೋಕ್, ನಿರೂಪ್ ಭಂಡಾರಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.
ಇದನ್ನೂ ಓದಿ:
Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ
Kichcha Sudeep: ಕೊರೊನಾದಿಂದ ಸುದೀಪ್ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?