ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಈ ಪೋಸ್ಟರ್​ ಸಾಕ್ಷಿ ಒದಗಿಸುತ್ತಿದೆ. ಅದನ್ನು ಕಂಡು ಸುದೀಪ್​ ಅವರು ‘ಅದ್ಭುತವಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ
ವಿಕ್ರಾಂತ್​ ರೋಣ, ಕಿಚ್ಚ ಸುದೀಪ್​
Edited By:

Updated on: May 30, 2021 | 4:30 PM

ಕೊವಿಡ್​-19 ಹಾವಳಿ ಹೆಚ್ಚುವುದಕ್ಕೂ ಮುನ್ನ ನಟ ಕಿಚ್ಚ ಸುದೀಪ್​ ಅವರು ಅನೇಕ ಸಿನಿಮಾ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ವಿಕ್ರಾಂತ್​ ರೋಣ’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ದೊಡ್ಡ ಕ್ಯಾನ್ವಾಸ್​ನಲ್ಲಿ ಸಿನಿಮಾ ತಯಾರಾಗುತ್ತಿದೆ. ಸದ್ಯ ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ ಚಿತ್ರದ ಕೆಲಸಗಳು ಸ್ಥಗಿತಗೊಂಡಿವೆ. ಈ ನಡುವೆ ‘ವಿಕ್ರಾಂತ್ ರೋಣ’ ಸಿನಿಮಾದ ಒಂದು ಪೋಸ್ಟರ್​ ಗಮನ ಸೆಳೆದಿದೆ.

ಅರೆರೆ, ಹೇಳದೇ ಕೇಳದೇ ‘ವಿಕ್ರಾಂತ್​ ರೋಣ’ ಸಿನಿಮಾ ತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆಯೇ? ಹಾಗೇನೂ ಇಲ್ಲ. ಇದು ಫ್ಯಾನ್​ಮೇಡ್​ ಪೋಸ್ಟರ್​. ಅಂದರೆ, ಅಭಿಮಾನಿಗಳೇ ವಿನ್ಯಾಸಗೊಳಿಸಿರುವ ಪೋಸ್ಟರ್​. ಅದನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ಪೋಸ್ಟರ್​ ಕಂಡು ಸ್ವತಃ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅವರು ‘ಅದ್ಭುತವಾಗಿದೆ’ ಎಂದು ಟ್ವೀಟ್​ ಮಾಡಿದ್ದಾರೆ.

ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಈ ಪೋಸ್ಟರ್​ ಸಾಕ್ಷಿ ಒದಗಿಸುತ್ತಿದೆ. ಹೈದರಾಬಾದ್​ನಲ್ಲಿ ದೊಡ್ಡ ಕಾಡಿನ ಸೆಟ್​ ಹಾಕಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಕಳೆದ ವರ್ಷ ಲಾಕ್​ಡೌನ್​ ಸಡಿಲವಾದಾಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿತ್ತು. ವಿಶ್ವದ ಅತಿ ಎತ್ತರದ ಕಟ್ಟಡ ‘ಭುರ್ಜ್​ ಖಲೀಫಾ’ ಮೇಲೆ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ಆಗಿದ್ದು, ಸ್ಯಾಂಡಲ್​ವುಡ್​ ಪಾಲಿಗೆ ಒಂದು ಮೈಲಿಗಲ್ಲಾಗಿತ್ತು.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್ ಪಾಂಡಿಯನ್​ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಚಿತ್ರ ಮೂಡಿಬರುತ್ತಿದೆ. ವಿಲಿಯಮ್​ ಡೇವಿಡ್​ ಛಾಯಾಗ್ರಹಣ, ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ಗಳು ಸಿಕ್ಕಾಪಟ್ಟೆ ಕೌತುಕ ಮೂಡಿಸಿವೆ. ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ:

Kichcha Sudeep: ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಸುದೀಪ್​; ಅಗತ್ಯ ವಸ್ತುಗಳ ಜತೆ ಪತ್ರ ತಲುಪಿಸಿದ ಕಿಚ್ಚ

Kichcha Sudeep: ಕೊರೊನಾದಿಂದ ಸುದೀಪ್​ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us