Kichcha Sudeep: ವಿವಾದ ಮರೆತು ಪಾರ್ಟಿ ಮೂಡ್​ನಲ್ಲಿ ಕಿಚ್ಚ ಸುದೀಪ್

ಸುದೀಪ್ ಪಾರ್ಟಿ ಮೂಡ್​ನಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್​ ತಂಡದ ಸಂದೀಪ್ ಶರ್ಮಾ, ಕೆಸಿ ಕರಿಯಪ್ಪ, ನಿರ್ದೇಶಕ ಕೃಷ್ಣ ಮೊದಲಾದವರ ಜೊತೆ ಸುದೀಪ್ ಪಾರ್ಟಿ ಮಾಡಿದ್ದಾರೆ.

Kichcha Sudeep: ವಿವಾದ ಮರೆತು ಪಾರ್ಟಿ ಮೂಡ್​ನಲ್ಲಿ ಕಿಚ್ಚ ಸುದೀಪ್
ಕ್ರಿಕೆಟರ್​ಗಳ ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Jul 19, 2023 | 11:01 AM

ಕಿಚ್ಚ ಸುದೀಪ್ (Kichcha Sudeep) ಅವರ ಸುತ್ತ ವಿವಾದ ಹುಟ್ಟಿಕೊಂಡಿದೆ. ನಿರ್ಮಾಪಕ ಎಂಎನ್​ ಕುಮಾರ್ ಅವರು ಸುದೀಪ್ ವಿರುದ್ಧ ಸಿಡಿದೆದ್ದಿದ್ದಾರೆ. ಅವರು ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ಜೊತೆಗೆ ಫಿಲ್ಮ್​ ಚೇಂಬರ್ ಎದುರು ಅವರು ಸತ್ಯಾಗ್ರಹ ಕೂಡ ಮಾಡಿದ್ದಾರೆ. ಇತ್ತ ಕಿಚ್ಚ ಸುದೀಪ್ ಅವರು ಪಾರ್ಟಿ ಮೂಡ್​ನಲ್ಲಿದ್ದಾರೆ. ಅವರು ಈ ವಿವಾದಗಳ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಕ್ರಿಕೆಟರ್​ಗಳ ಜೊತೆ ಸುದೀಪ್ ಪಾರ್ಟಿ ಮಾಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಕಿಚ್ಚ ಸುದೀಪ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕುಮಾರ್ ಅವರ ಆರೋಪದಿಂದ ಅವರ ಫ್ಯಾನ್ಸ್​ಗೆ ಬೇಸರ ಆಗಿದೆ. ಕೆಲವರು ಕುಮಾರ್ ವಿರುದ್ಧ ಆಕ್ರೋಶ ಕೂಡ ಹೊರಹಾಕಿದ್ದಾರೆ. ಕುಮಾರ್ ವಿರುದ್ಧ ಸುದೀಪ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸುದೀಪ್ ಅವರು ಈ ಪ್ರಕರಣವನ್ನು ಕೋರ್ಟ್​​ನಲ್ಲೇ ಬಗೆಹರಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಿ, ಅವರು ಈ ಪ್ರಕರಣದಲ್ಲಿ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಜುಲೈ 18ರ ರಾತ್ರಿ ಸುದೀಪ್ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ರಾಜಸ್ಥಾನ್ ರಾಯಲ್ಸ್​ ತಂಡದ ಸಂದೀಪ್ ಶರ್ಮಾ, ಕೆಸಿ ಕರಿಯಪ್ಪ, ಡೆಲ್ಲಿ ಕ್ಯಾಪಿಟಲ್ಸ್ ಪೃಥ್ವಿ ಶಾ ನಿರ್ದೇಶಕ ಕೃಷ್ಣ ಸೇರಿ ಮೊದಲಾದವರ ಜೊತೆ ಸುದೀಪ್ ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಸುದೀಪ್ ಕೂಲ್ ಆಗಿರುವುದನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಸುದೀಪ್ ವಿರುದ್ಧದ ಷಡ್ಯಂತ್ರದ ಹಿಂದೆ ಸೂರಪ್ಪ ಬಾಬು ಕೈವಾಡ? ಎಳೆಎಳೆಯಾಗಿ ಬಿಚ್ಚಿಟ್ಟ ವೀರಕಪುತ್ರ ಶ್ರೀನಿವಾಸ

ಸುದೀಪ್ ಅವರು ‘K46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಮೊದಲ ಗ್ಲಿಂಪ್ಸ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದಲ್ಲದೆ ಸುದೀಪ್ ಅವರು ಇನ್ನೂ ಎರಡು ಸಿನಿಮಾ ಒಪ್ಪಿಕೊಂಡಿದ್ದಾರೆ. ಈಗ ಹುಟ್ಟಿಕೊಂಡಿರುವ ವಿವಾದದಿಂದ ಸಿನಿಮಾ ಕೆಲಸ ಮತ್ತಷ್ಟು ವಿಳಂಬ ಆಗಬಹುದು ಎಂದು ಊಹಿಸಿದ್ದರು. ಆದರೆ, ಈ ಫೋಟೋಗಳನ್ನು ನೋಡಿದ ನಂತರದಲ್ಲಿ ಅಭಿಮಾನಿಗಳು ಚಿಂತೆ ಬಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ