Vikrant Rona Teaser: ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಘೋಷಣೆ; ಯುಗಾದಿ ಕಿಚ್ಚನ ಅಭಿಮಾನಿಗಳಿಗೆ ಮತ್ತಷ್ಟು ವಿಶೇಷ!

Kichcha Sudeep | Anup Bhandari: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಈಗಾಗಲೇ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಅಭಿಮಾನಿಗಳು ಚಿತ್ರತಂಡದಿಂದ ಅಪ್ಡೇಟ್​ಗೆ ಕಾದಿದ್ದರು. ಇದೀಗ ಚಿತ್ರತಂಡ ಹೊಸ ಸುದ್ದಿ ನೀಡಿದೆ.

Vikrant Rona Teaser: ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಘೋಷಣೆ; ಯುಗಾದಿ ಕಿಚ್ಚನ ಅಭಿಮಾನಿಗಳಿಗೆ ಮತ್ತಷ್ಟು ವಿಶೇಷ!
‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಕಿಚ್ಚ ಸುದೀಪ್​, ಜಾಕ್ವೆಲಿನ್​ ಫರ್ನಾಂಡಿಸ್​
Follow us
TV9 Web
| Updated By: shivaprasad.hs

Updated on:Mar 29, 2022 | 10:35 AM

‘ವಿಕ್ರಾಂತ್ ರೋಣ’ (Vikrant Rona) ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಮೂಡಿಸುತ್ತಿರುವ ಚಿತ್ರ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್​ಗಳು ನಿರೀಕ್ಷೆಯನ್ನು ನೂರ್ಮಡಿಗೊಳಿಸಿದ್ದವು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲಿ ಚಿತ್ರ ತೆರೆಕಾಣಬೇಕಿತ್ತು. ಆದರೆ ಹಲವು ಅನಿವಾರ್ಯ ಕಾರಣದಿಂದ ರಿಲೀಸ್ ಮುಂದೂಡಲಾಗಿದೆ. ಆದರೆ ಚಿತ್ರತಂಡ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಇಂದು (ಮಾ.29) ಚಿತ್ರತಂಡ ಹೊಸ ಅಪ್ಡೇಟ್ ನೀಡುವುದಾಗಿ ಘೋಷಿಸಿತ್ತು. ಅದರಂತೆ ಹೊಸ ಸಮಾಚಾರ ಹಂಚಿಕೊಂಡಿದೆ. ನಿರ್ದೇಶಕ ಅನೂಪ್ ಭಂಡಾರಿ ಟ್ವೀಟ್ ಮಾಡಿ, ಯುಗಾದಿಗೆ ಸಂಭ್ರಮಿಸಲು ಅಭಿಮಾನಿಗಳಿಗೆ ಮತ್ತೊಂದು ಕಾರಣ ನೀಡಿದ್ದಾರೆ. ‘ಏಪ್ರಿಲ್ 2ರಂದು ಬೆಳಗ್ಗೆ 9.55ಕ್ಕೆ ವಿಕ್ರಾಂತ್ ರೋಣದ ರಿಲೀಸ್ ಟೀಸರ್ ಬಿಡುಗಡೆ ಮಾಡುತ್ತೇವೆ’ ಎಂದು ಅನೂಪ್ ಟ್ವೀಟ್ ಮೂಲಕ ಘೋಷಿಸಿದ್ದಾರೆ.

ಅನೂಪ್ ಭಂಡಾರಿ ಟ್ವೀಟ್:

‘ವಿಕ್ರಾಂತ್ ರೋಣ’ ಇಂಗ್ಲೀಷ್ ಅವತರಣಿಕೆಗೆ ಧ್ವನಿ ನೀಡಿರುವ ಕಿಚ್ಚ:

ವಿಕ್ರಾಂತ್ ರೋಣ ಇಂಗ್ಲೀಷ್​ನಲ್ಲೂ ತೆರೆಗೆ ಬರುತ್ತಿದೆ. ವಿಶೇಷವೆಂದರೆ ಇಂಗ್ಲೀಷ್​ನಲ್ಲಿ ತಮ್ಮ ಪಾತ್ರಕ್ಕೆ ಸುದೀಪ್ ಅವರೇ ಧ್ವನಿ ನೀಡಿದ್ದಾರೆ. ‘ಕನ್ನಡದ ಸೂಪರ್ ಸ್ಟಾರ್ ಒಬ್ಬರು ತಮ್ಮ ಇಂಗ್ಲೀಷ್ ಚಿತ್ರಕ್ಕೆ ತಮ್ಮದೇ ಧ್ವನಿ ನೀಡುತ್ತಿರೋದು ಇದೇ ಮೊದಲ ಬಾರಿ. ಅಷ್ಟೇ ಅಲ್ಲ, ಭಾರತ ಮಟ್ಟದಲ್ಲೂ ಇಂತಹ ನಾಯಕರ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ’ ಎಂದು ಈ ಹಿಂದೆ ಟ್ವೀಟ್ ಮಾಡಿ ಸಂಭ್ರಮ ಹಂಚಿಕೊಂಡಿದ್ದರು ಅನೂಪ್ ಭಂಡಾರಿ. ಮಲಯಾಳಂ ಬಿಟ್ಟು ಉಳಿದ ಎಲ್ಲಾ ಭಾಷೆಗಳಲ್ಲೂ ಸ್ವತಃ ಸುದೀಪ್ ಧ್ವನಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ಹಿಂದೆ ಚಿತ್ರತಂಡ ‘ವಿಕ್ರಾಂತ್ ರೋಣ’ ಚಿತ್ರದ ಪ್ರಚಾರ ಕಾರ್ಯ ಹೇಗಿರಲಿದೆ ಎಂಬ ಮಾಹಿತಿ ಹಂಚಿಕೊಂಡಿತ್ತು. ಜತೆಗೆ ಚಿತ್ರದ ಹಾಡುಗಳು ಹಾಗೂ ಅವುಗಳ ಬಿಡುಗಡೆ ಸರದಿಯ ಮ್ಯಾಪ್ ಹಂಚಿಕೊಳ್ಳಲಾಗಿತ್ತು. ಅದರಂತೆ ಇದೀಗ ಟೀಸರ್​ನ ಮೊದಲ ಅಪ್ಡೇಟ್ ಬಂದಿದೆ. ಇದರ ಬೆನ್ನಲ್ಲೇ ಮತ್ತಷ್ಟು ಅಪ್ಡೇಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು.

‘ವಿಕ್ರಾಂತ್ ರೋಣ’ ಬಿಡುಗಡೆ ಹಾದಿಯ ನಕಾಶೆ ಹೀಗಿದೆ:

ವಿಕ್ರಾಂತ್ ರೋಣ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಕೂಡ ಕಾಣಿಸಿಕೊಂಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ.

ಇದನ್ನೂ ಓದಿ:

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ

KGF 2: ಅಧೀರನ ಫ್ಯಾನ್ ಅಂತೆ ರಾಕಿ! ಸಂಜಯ್ ದತ್ ಬಗ್ಗೆ ಯಶ್ ವಿಶೇಷ ಮಾತು

Published On - 10:11 am, Tue, 29 March 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ