Kichcha Sudeep: ಗೊಂದಲದಲ್ಲಿದೆಯಾ ಸುದೀಪ್ ಕ್ಯಾಂಪೇನ್ ಪ್ಲಾನ್? ಸುದೀಪ್ ಬಿಜೆಪಿ ಪರ ಪ್ರಚಾರಕ್ಕೆ ಇಳಿಯೋದು ಯಾವಾಗ?

ಏಪ್ರಿಲ್ 14ರಿಂದ ಸುದೀಪ್ ಪ್ರಚಾರಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಈವರೆಗೆ ಕ್ಯಾಂಪೇನ್​ಗೆ ಇಳಿದಿಲ್ಲ.

Kichcha Sudeep: ಗೊಂದಲದಲ್ಲಿದೆಯಾ ಸುದೀಪ್ ಕ್ಯಾಂಪೇನ್ ಪ್ಲಾನ್? ಸುದೀಪ್ ಬಿಜೆಪಿ ಪರ ಪ್ರಚಾರಕ್ಕೆ ಇಳಿಯೋದು ಯಾವಾಗ?
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Apr 18, 2023 | 7:36 AM

ಚುನಾವಣಾ ದಿನಾಂಕ ಘೋಷಣೆ ಆದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದವು. ರಾಜಕೀಯ ನಾಯಕರು ಸ್ಟಾರ್ ಹೀರೋಗಳನ್ನು ಕರೆತರಲು ಪ್ಲ್ಯಾನ್ ರೂಪಿಸಿದರು. ಕಿಚ್ಚ ಸುದೀಪ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಹೇಳಿದರು. ಆದರೆ, ಈವರೆಗೆ ಸುದೀಪ್ (Kichcha Sudeep) ಕಣಕ್ಕೆ ಇಳಿದಿಲ್ಲ. ಸುದೀಪ್ ಚುನಾವಣಾ ಕ್ಯಾಂಪೇನ್ ಗೊಂದಲದಲ್ಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಚುನಾವಣೆಗೆ ಇನ್ನು ಕೆಲವೇ ಕೆಲವು ದಿನ ಉಳಿದುಕೊಂಡಿದೆ. ಹೀಗಿದ್ದರೂ ಅವರು ಪ್ರಚಾರಕ್ಕೆ ಏಕೆ ಇಳಿದಿಲ್ಲ ಎನ್ನುವ ಪ್ರಶ್ನೆ ಮೂಡಿದೆ.

ಏ.14ರಿಂದ ಪ್ರಚಾರ ಮಾಡ್ತಾರೆ ಎನ್ನಲಾಗಿತ್ತು..

ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ ಬೆನ್ನಲ್ಲೇ ಕಮಲ ಪಾಳಯಕ್ಕೆ ಬಲ ಸಿಕ್ಕಂತೆ ಆಗಿದೆ. ‘ಸಿಎಂ ಹೇಳಿದವರ ಪರವಾಗಿ ನಾನು ಪ್ರಚಾರ ಮಾಡ್ತೀನಿ’ ಎಂದು ಸುದೀಪ್ ಭರವಸೆ ನೀಡಿದ್ದಾರೆ. ಏಪ್ರಿಲ್ 14ರಿಂದ ಸುದೀಪ್ ಪ್ರಚಾರಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಈವರೆಗೆ ಕ್ಯಾಂಪೇನ್​ಗೆ ಇಳಿದಿಲ್ಲ.

ಇಂದಿನಿಂದ ಪ್ರಚಾರ?

ಸುದೀಪ್ ಅವರು ಇಂದಿನಿಂದ (ಏಪ್ರಿಲ್ 18) ನಿರಂತರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಧೋಳ ಹಾಗು ಬೀಳಗಿ ಕ್ಷೇತ್ರಗಳಲ್ಲಿ ಸುದೀಪ್ ಮತಬೇಟೆಗೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಸುದೀಪ್, ಅಪಪ್ರಚಾರದ ವಿರುದ್ಧ ಮುನ್ನೆಚ್ಚರಿಕೆ ಎಂದ ನಟ

ಇನ್ನೂ ಗೊಂದಲದಲ್ಲಿದ್ದಾರೆ ಸುದೀಪ್​?

ಕೆಲ ಮೂಲಗಳ ಮಾಹಿತಿ ಪ್ರಕಾರ ಸುದೀಪ್ ಕೊಂಚ ಗೊಂದಲದಲ್ಲಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯಲ್ಲಿ ಪ್ರಚಾರ ಮಾಡಬೇಕು ಎಂಬುದಕ್ಕೆ ಇನ್ನೂ ರೂಟ್ ಮ್ಯಾಪ್ ಫಿಕ್ಸ್ ಆಗಿಲ್ಲ ಎಂಬುದು ಕೆಲವು ಮೂಲಗಳು ಮಾಹಿತಿ. ಪ್ರಚಾರಕ್ಕೆ ತೆರಳಿದಾಗ ಸುದೀಪ್ ರೋಡ್ ಶೋ ಮಾಡುತ್ತಾರಾ ಅಥವಾ ಮಾತಿನ ಮೂಲಕ ಮತಯಾಚನೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಚುನಾವಣೆ ಬಳಿಕ 3 ಸಿನಿಮಾ ಘೋಷಣೆ

ಈಗಾಗಲೇ ಸುದೀಪ್ ಮೂರು ಸಿನಿಮಾ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ. ಸದ್ಯ ಇದರ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಚುನಾವಣೆಯ ಅಬ್ಬರ ಮುಗಿದ ಬಳಿಕ ಅವರು ಈ ಸಿನಿಮಾಗಳನ್ನು ಘೋಷಿಸಲಿದ್ದಾರೆ ಎನ್ನಲಾಗುತ್ತಿದೆ. ‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಬ್ರೇಕ್ ಪಡೆದಿದ್ದಾರೆ. ವೃತ್ತಿಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ