Kichcha Sudeep: ‘ಹೊಂಬಾಳೆ ಫಿಲ್ಮ್ಸ್​’ ಜತೆ ಕಿಚ್ಚ ಸುದೀಪ್​ ಸಿನಿಮಾ? ಅಚ್ಚರಿ ಹುಟ್ಟುಹಾಕಿದೆ ಈ ಫೋಟೋ

Hombale Films | Karthik Gowda: ಕಿಚ್ಚ ಸುದೀಪ್​ ಮತ್ತು ಕಾರ್ತಿಕ್​ ಗೌಡ ಅವರು ಜೊತೆಯಾಗಿ ಪೋಸ್​ ನೀಡಿದ್ದಾರೆ. ಸದ್ಯಕ್ಕಂತೂ ಈ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

Kichcha Sudeep: ‘ಹೊಂಬಾಳೆ ಫಿಲ್ಮ್ಸ್​’ ಜತೆ ಕಿಚ್ಚ ಸುದೀಪ್​ ಸಿನಿಮಾ? ಅಚ್ಚರಿ ಹುಟ್ಟುಹಾಕಿದೆ ಈ ಫೋಟೋ
ಕಿಚ್ಚ ಸುದೀಪ್, ಕಾರ್ತಿಕ್ ಗೌಡ
Follow us
TV9 Web
| Updated By: ಮದನ್​ ಕುಮಾರ್​

Updated on:Oct 06, 2022 | 12:31 PM

ಭಾರತೀಯ ಚಿತ್ರರಂಗದಲ್ಲಿ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಸಾಕಷ್ಟು ಜನಪ್ರಿಯತೆ ಪಡೆದಿದೆ. ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ‘ಕಾಂತಾರ’ ರೀತಿಯ ಸಿನಿಮಾಗಳ ಮೂಲಕ ದೇಶಾದ್ಯಂತ ಈ ಸಂಸ್ಥೆಯ ಪ್ರತಿಷ್ಠೆ ಹೆಚ್ಚಿದೆ. ‘ಸಲಾರ್​’, ‘ಧೂಮಂ’ ಮುಂತಾದ ಸಿನಿಮಾಗಳಿಗೆ ‘ಹೊಂಬಾಳೆ ಫಿಲ್ಮ್ಸ್​’ ಬಂಡವಾಳ ಹೂಡುತ್ತಿದೆ. ಈಗ ಕಿಚ್ಚ ಸುದೀಪ್​ (Kichcha Sudeep) ನಟನೆಯ ಹೊಸ ಚಿತ್ರ ಕೂಡ ಇದೇ ಬ್ಯಾನರ್​ ಮೂಲಕ ನಿರ್ಮಾಣ ಆಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ  (Karthik Gowda) ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸುದೀಪ್​ ಜೊತೆ ಪೋಸ್​ ನೀಡಿದ್ದಾರೆ. ‘ಹೊಸ ಆರಂಭಕ್ಕೆ ಕಿಚ್ಚ ಸುದೀಪ್​ ಸರ್​’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ.

ಚಿತ್ರರಂಗದಲ್ಲಿ ಇಂಥ ಫೋಟೋಗಳು ಕಾರಣ ಇಲ್ಲದೇ ಅಪ್​ಲೋಡ್​ ಆಗುವುದಿಲ್ಲ. ಹಾಗಾಗಿ, ಸುದೀಪ್​ ಅವರು ‘ಹೊಂಬಾಳೆ ಫಿಲ್ಮ್ಸ್​’ ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಸದ್ಯಕ್ಕಂತೂ ಈ ಫೋಟೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ
Image
Dhoomam: ‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ‘ಧೂಮಂ’; ಫಹಾದ್​ ಫಾಸಿಲ್​-ಪವನ್​ ಕುಮಾರ್​ ಚಿತ್ರದ ಶೀರ್ಷಿಕೆ ಬಹಿರಂಗ
Image
Prabhas: ‘ಸಲಾರ್​’ ನೋಡಲು ಇನ್ನೂ 1 ವರ್ಷ ಕಾಯಬೇಕು; ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’
Image
KGF Chapter 2: 100 ದಿನ ಪೂರೈಸಿದ ‘ಕೆಜಿಎಫ್​: ಚಾಪ್ಟರ್​ 2’; ಪ್ರೇಕ್ಷಕರಿಗೆ ‘ಹೊಂಬಾಳೆ ಫಿಲ್ಮ್ಸ್​’ ಧನ್ಯವಾದ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ಈ ವರ್ಷ ತೆರೆಕಂಡಿತು. ಆ ಬಳಿಕ ಅವರು ನಟಿಸುವ ಹೊಸ ಚಿತ್ರ ಯಾವುದು ಎಂಬ ಬಗ್ಗೆ ಇನ್ನೂ ಅಪ್​ಡೇಟ್​ ಸಿಕ್ಕಿಲ್ಲ. ಅದಕ್ಕೂ ಮುನ್ನವೇ ಕಾರ್ತಿಕ್​ ಗೌಡ ಜೊತೆ ಅವರು ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣ ಆಗಿದೆ.

ಈಗ ಪ್ಯಾನ್​ ಇಂಡಿಯಾ ಸಿನಿಮಾಗಳದ್ದೇ ಹವಾ. ಅಷ್ಟು ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಬೇಕು ಎಂದರೆ ದೊಡ್ಡ ನಿರ್ಮಾಣ ಸಂಸ್ಥೆಗಳೇ ಮುಂದೆ ಬರಬೇಕು. ಕಿಚ್ಚ ಸುದೀಪ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಮುಂಬರುವ ಎಲ್ಲ ಸಿನಿಮಾಗಳೂ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ತಯಾರಾಗುವುದು ಗ್ಯಾರಂಟಿ. ಹಾಗಾಗಿ ‘ಹೊಂಬಾಳೆ ಫಿಲ್ಮ್ಸ್​’ ಜತೆ ಅವರು ಸಿನಿಮಾ ಮಾಡುತ್ತಾರೆ ಎಂದು ಎಲ್ಲರೂ ಊಹಿಸುತ್ತಿದ್ದಾರೆ.

ಕಿಚ್ಚ ಸುದೀಪ್​ ಅವರು ಅನೌನ್ಸ್​ ಮಾಡಲಿರುವ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆದಷ್ಟು ಬೇಗ ಸಿಹಿ ಸುದ್ದಿ ಸಿಗಲಿದೆ ಎಂಬ ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:20 pm, Thu, 6 October 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್