
ಭಾರತೀಯ ಚಿತ್ರರಂಗದಲ್ಲಿ ‘ಹೊಂಬಾಳೆ ಫಿಲ್ಮ್ಸ್’ (Hombale Films) ಸಂಸ್ಥೆ ಸಾಕಷ್ಟು ಜನಪ್ರಿಯತೆ ಪಡೆದಿದೆ. ‘ಕೆಜಿಎಫ್: ಚಾಪ್ಟರ್ 2’ ಹಾಗೂ ‘ಕಾಂತಾರ’ ರೀತಿಯ ಸಿನಿಮಾಗಳ ಮೂಲಕ ದೇಶಾದ್ಯಂತ ಈ ಸಂಸ್ಥೆಯ ಪ್ರತಿಷ್ಠೆ ಹೆಚ್ಚಿದೆ. ‘ಸಲಾರ್’, ‘ಧೂಮಂ’ ಮುಂತಾದ ಸಿನಿಮಾಗಳಿಗೆ ‘ಹೊಂಬಾಳೆ ಫಿಲ್ಮ್ಸ್’ ಬಂಡವಾಳ ಹೂಡುತ್ತಿದೆ. ಈಗ ಕಿಚ್ಚ ಸುದೀಪ್ (Kichcha Sudeep) ನಟನೆಯ ಹೊಸ ಚಿತ್ರ ಕೂಡ ಇದೇ ಬ್ಯಾನರ್ ಮೂಲಕ ನಿರ್ಮಾಣ ಆಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ (Karthik Gowda) ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸುದೀಪ್ ಜೊತೆ ಪೋಸ್ ನೀಡಿದ್ದಾರೆ. ‘ಹೊಸ ಆರಂಭಕ್ಕೆ ಕಿಚ್ಚ ಸುದೀಪ್ ಸರ್’ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ.
ಚಿತ್ರರಂಗದಲ್ಲಿ ಇಂಥ ಫೋಟೋಗಳು ಕಾರಣ ಇಲ್ಲದೇ ಅಪ್ಲೋಡ್ ಆಗುವುದಿಲ್ಲ. ಹಾಗಾಗಿ, ಸುದೀಪ್ ಅವರು ‘ಹೊಂಬಾಳೆ ಫಿಲ್ಮ್ಸ್’ ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಸದ್ಯಕ್ಕಂತೂ ಈ ಫೋಟೋ ವೈರಲ್ ಆಗುತ್ತಿದೆ.
ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಈ ವರ್ಷ ತೆರೆಕಂಡಿತು. ಆ ಬಳಿಕ ಅವರು ನಟಿಸುವ ಹೊಸ ಚಿತ್ರ ಯಾವುದು ಎಂಬ ಬಗ್ಗೆ ಇನ್ನೂ ಅಪ್ಡೇಟ್ ಸಿಕ್ಕಿಲ್ಲ. ಅದಕ್ಕೂ ಮುನ್ನವೇ ಕಾರ್ತಿಕ್ ಗೌಡ ಜೊತೆ ಅವರು ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣ ಆಗಿದೆ.
ಈಗ ಪ್ಯಾನ್ ಇಂಡಿಯಾ ಸಿನಿಮಾಗಳದ್ದೇ ಹವಾ. ಅಷ್ಟು ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಬೇಕು ಎಂದರೆ ದೊಡ್ಡ ನಿರ್ಮಾಣ ಸಂಸ್ಥೆಗಳೇ ಮುಂದೆ ಬರಬೇಕು. ಕಿಚ್ಚ ಸುದೀಪ್ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಮುಂಬರುವ ಎಲ್ಲ ಸಿನಿಮಾಗಳೂ ಪ್ಯಾನ್ ಇಂಡಿಯಾ ಮಟ್ಟದಲ್ಲೇ ತಯಾರಾಗುವುದು ಗ್ಯಾರಂಟಿ. ಹಾಗಾಗಿ ‘ಹೊಂಬಾಳೆ ಫಿಲ್ಮ್ಸ್’ ಜತೆ ಅವರು ಸಿನಿಮಾ ಮಾಡುತ್ತಾರೆ ಎಂದು ಎಲ್ಲರೂ ಊಹಿಸುತ್ತಿದ್ದಾರೆ.
ಕಿಚ್ಚ ಸುದೀಪ್ ಅವರು ಅನೌನ್ಸ್ ಮಾಡಲಿರುವ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಆದಷ್ಟು ಬೇಗ ಸಿಹಿ ಸುದ್ದಿ ಸಿಗಲಿದೆ ಎಂಬ ಫ್ಯಾನ್ಸ್ ಕಾದಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:20 pm, Thu, 6 October 22