AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕಿಚ್ಚ ಸುದೀಪ್​; ಫೋಟೋ ವೈರಲ್​

Basavaraj Bommai: ಸಿಎಂ ಆಗುವುದಕ್ಕಿಂತಲೂ ಮುನ್ನವೇ ಬಸವರಾಜ ಬೊಮ್ಮಾಯಿ ಅವರು ಸುದೀಪ್​ ಕುಟುಂಬದ ಜೊತೆ ಸ್ನೇಹ ಹೊಂದಿದ್ದರು. ಅಷ್ಟೇ ಅಲ್ಲ, ಸುದೀಪ್​ ವೃತ್ತಿಜೀವನದ ಆರಂಭದ ದಿನಗಳಲ್ಲಿ ಬೊಮ್ಮಾಯಿ ಬೆಂಬಲವಾಗಿ ನಿಂತಿದ್ದರು.

Kichcha Sudeep: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕಿಚ್ಚ ಸುದೀಪ್​; ಫೋಟೋ ವೈರಲ್​
ಸಿಎಂ ಬಸವರಾಜ ಬೊಮ್ಮಾಯಿ, ಕಿಚ್ಚ ಸುದೀಪ್
TV9 Web
| Updated By: ಮದನ್​ ಕುಮಾರ್​|

Updated on:Aug 31, 2021 | 4:30 PM

Share

ನಟ ಕಿಚ್ಚ ಸುದೀಪ್ (Kichcha Sudeep)​ ಅವರು ಸಿನಿಮಾ ಮಾತ್ರವಲ್ಲದೇ ಬೇರೆ ಬೇರೆ ಕ್ಷೇತ್ರಗಳ ಗಣ್ಯರ ಜೊತೆ ಉತ್ತಮ ಒಡನಾಟ ಇಟ್ಟುಕೊಂಡಿದ್ದಾರೆ. ರಾಜಕೀಯದ ಹಲವರ ಜತೆ ಸುದೀಪ್​ ಕ್ಲೋಸ್​ ಆಗಿದ್ದಾರೆ. ಈಗ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅಷ್ಟಕ್ಕೂ ಅವರು ಸಿಎಂ ಭೇಟಿ ಮಾಡಿರುವುದು ಯಾಕೆ ಎಂಬ ಕುತೂಹಲದ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕೂ ಉತ್ತರ ಸಿಕ್ಕಿದೆ. ಇದೊಂದು ಸೌಹಾರ್ದಯುತ ಭೇಟಿ ಮಾತ್ರ ಎನ್ನಲಾಗಿದೆ.

ರಾಜಕೀಯಕ್ಕೂ ಚಿತ್ರರಂಗಕ್ಕೂ ಹತ್ತಿರದ ನಂಟು. ಅಂದಹಾಗೆ, ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗುವುದಕ್ಕಿಂತಲೂ ಮುನ್ನವೇ ಸುದೀಪ್​ ಕುಟುಂಬದ ಜೊತೆ ಅವರು ಸ್ನೇಹ ಹೊಂದಿದ್ದರು. ಅಷ್ಟೇ ಅಲ್ಲ, ಸುದೀಪ್​ ವೃತ್ತಿಜೀವನದ ಆರಂಭದ ದಿನಗಳಲ್ಲಿ ಬಸವರಾಜ ಬೊಮ್ಮಾಯಿ ಬೆಂಬಲವಾಗಿ ನಿಂತಿದ್ದರು. ಆ ಬಗ್ಗೆ ಸುದೀಪ್​ ಅವರು ಇತ್ತೀಚೆಗೆ ಟ್ವೀಟ್​ ಮಾಡಿದ್ದರು.

‘ಇವರ ಸರಳತೆಯನ್ನು ನೋಡಿಕೊಂಡು ನಾವು ಬೆಳೆದಿದ್ದೇವೆ. ಚಿತ್ರರಂಗದಲ್ಲಿ ನನ್ನ ಆರಂಭದ ದಿನಗಳಲ್ಲಿ ಬೆಂಬಲವಾಗಿದ್ದರು. ನಿಮಗೆ ಶುಭವಾಗಲಿ ಮಾಮ’ ಎಂದು ನೂತನ ಸಿಎಂಗೆ ಸುದೀಪ್​ ವಿಶ್​ ಮಾಡಿದ್ದರು. ಈಗ ಅವರನ್ನು ಮತ್ತೆ ಭೇಟಿಯಾಗಿದ್ದು, ಆ ಫೋಟೋ ವೈರಲ್​ ಆಗುತ್ತಿದೆ. ಅಂದಹಾಗೆ, ಕಿಚ್ಚನ ಜನ್ಮದಿನ ಹತ್ತಿರವಾಗುತ್ತಿದೆ. ಸೆ.2ರಂದು ಅವರ ಹುಟ್ಟುಹಬ್ಬ. ಆದರೆ ಕೊರೊನಾ ಕಾರಣದಿಂದ ಅವರು ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಆ ಬಗ್ಗೆ ಇತ್ತೀಚೆಗೆ ‘ಕಿಚ್ಚ ಕ್ರಿಯೇಷನ್​​’ ಟ್ವಿಟರ್​ ಖಾತೆ ಮೂಲಕ ಮಾಹಿತಿ ನೀಡಲಾಗಿತ್ತು.

ಸುದೀಪ್ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾ ತಂಡದಿಂದ ಸೆ.2ರಂದ ಸುದೀಪ್​ ಬರ್ತ್​ಡೇ ಪ್ರಯುಕ್ತ ಹೊಸ ಹಾಡು ಅಥವಾ ಟೀಸರ್​ ಬಿಡುಗಡೆ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ‘ಕೋಟಿಗೊಬ್ಬ 3’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ. ಆ ಸಿನಿಮಾತಂಡದಿಂದಲೂ ಅಭಿಮಾನಿಗಳಿಗೆ ಉಡುಗೊರೆ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

‘ಮಹಾನಾಯಕ ಡಾ. ಬಿ.ಆರ್​. ಅಂಬೇಡ್ಕರ್​’ ಧಾರಾವಾಹಿಗೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಬಲ; ಹೊಸ ಯುಗ ಶುರು

ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ

Published On - 4:30 pm, Tue, 31 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ