ಕಿಚ್ಚ ಸುದೀಪ್ ಬರ್ತ್ಡೇ ಅನೂಪ್ ಭಂಡಾರಿ ಜೊತೆಗಿನ ಹೊಸ ಸಿನಿಮಾ ಅನೌನ್ಸ್
ಕಿಚ್ಚ ಸುದೀಪ್ ಹಾಗೂ ಅನುಪ್ ಭಂಡಾರಿ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಅವರು ಮತ್ತೆ ಒಂದಾಗಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಸಿನಿಮಾ ಕುರಿತ ಅಧಿಕೃತ ಮಾಹಿತಿ ಸಿಗಲಿದೆ. ಸದ್ಯ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ಅನೂಪ್ ಭಂಡಾರಿ ಅವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದರು. ಈಗ ಅವರು ಮತ್ತೊಮ್ಮೆ ಕಿಚ್ಚನ ಜೊತೆ ಕೈ ಜೋಡಿಸಿದ್ದಾರೆ. ಸುದೀಪ್ ಬರ್ತ್ಡೇ ದಿನ ಹೊಸ ಸಿನಿಮಾ ಘೋಷಣೆ ಆಗಲಿದೆ. ಈ ಬಗ್ಗೆ ಅನೂಪ್ ಭಂಡಾರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದು ‘ಬಿಲ್ಲ ರಂಗ ಭಾಷ’ ಸಿನಿಮಾ ಕುರಿತ ಅಪ್ಡೇಟ್ ಇರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.
ಅನೂಪ್ ಭಂಡಾರಿ ಅವರು ‘ರಂಗಿ ತರಂಗ’ ಸಿನಿಮಾ ಮೂಲಕ ಎಲ್ಲರ ಮೆಚ್ಚುಗೆ ಪಡೆದರು. ಆ ಬಳಿಕ ‘ರಾಜರಥ’ ಹೆಸರಿನ ಸಿನಿಮಾ ಮಾಡಿದರು. ಇದಾದ ಬಳಿಕ ಸುದೀಪ್ ಜೊತೆ ಸೇರಿ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮಾಡಿದರು. ಈ ಚಿತ್ರ ಯಶಸ್ಸು ಕಂಡ ಬಳಿಕ ಮತ್ತೊಮ್ಮೆ ಅವರು ಅನೂಪ್ ಜೊತೆ ಕೆಲಸ ಮಾಡಲು ಮುಂದಾಗಿದ್ದಾರೆ.
It’s an honour to be associating with @KicchaSudeep sir once again. There is another exciting collaboration and an exciting announcement on Sep 2nd @ 10 AM. ಸುದೀಪ್ ಸರ್ ಹುಟ್ಟುಹಬ್ಬದ ದಿನ ಮತ್ತೆ ಭೇಟಿ ಆಗೋಣ! Be Ready Boys #BRBMovie pic.twitter.com/xsitXPyNjR
— Anup Bhandari (@anupsbhandari) August 29, 2024
ಅನೂಪ್ ಹಾಗೂ ಸುದೀಪ್ ಮತ್ತೊಮ್ಮೆ ಒಂದಾಗುತ್ತಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿರಲಿಲ್ಲ. ಸೆಪ್ಟೆಂಬರ್ 2ರಂದು ಸುದೀಪ್ ಸಿನಿಮಾ ಕುರಿತ ಅಧಿಕೃತ ಮಾಹಿತಿ ಸಿಗಲಿದೆ. ಸುದೀಪ್ ಅವರಿಗೆ ಸೆಪ್ಟೆಂಬರ್ 2ರಂದು ಜನ್ಮದಿನ. ಈ ವಿಶೇಷ ದಿನದಂದು ಸುದೀಪ್ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಸಿಗೋ ಸಾಧ್ಯತೆ ಇದೆ. ‘ಬಿಲ್ಲ ರಂಗ ಭಾಷಾ’ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಇದನ್ನೂ ಓದಿ: ‘ಈಗ 2’ ಮಾಡೋದು ಯಾವಾಗ? ಸುದೀಪ್ ಇರ್ತಾರಾ? ನಾನಿ ಕೊಟ್ಟರು ಉತ್ತರ
ಸದ್ಯ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಯಶಸ್ಸು ಕಾಣಲಿ ಎಂದು ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆಯೂ ಏನಾದರೂ ಅಪ್ಡೇಟ್ ಸಿಗಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:48 am, Thu, 29 August 24