ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

Kotigobba 3: ದಿನದಿಂದ ದಿನಕ್ಕೆ ಸುದೀಪ್​ ವಯಸ್ಸು ಕಮ್ಮಿ ಆಗುತ್ತಿದೆ ಎಂಬರ್ಥದಲ್ಲಿ ರಮ್ಯಾ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು. ಅದನ್ನು ಸುದೀಪ್​ ಕೂಡ ಗಮನಿಸಿದ್ದು, ‘ಕೋಟಿಗೊಬ್ಬ 3’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?
ಕಿಚ್ಚ ಸುದೀಪ್​ - ರಮ್ಯಾ
Follow us
| Edited By: ಮದನ್​ ಕುಮಾರ್​

Updated on: Oct 11, 2021 | 3:48 PM

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಚಿತ್ರ ಅ.14ರಂದು ಬಿಡುಗಡೆ ಆಗುತ್ತಿದೆ. ಈ ಪ್ರಯುಕ್ತ ಇಂದು (ಅ.11) ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ರಮ್ಯಾ ಬಗ್ಗೆ ಸುದೀಪ್​ ಮಾತನಾಡಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ಟ್ರೇಲರ್​ ಬಿಡುಗಡೆ ಆಗಿತ್ತು. ಅದರಲ್ಲಿ ಸುದೀಪ್​ ಸಾಕಷ್ಟು ಯಂಗ್​ ಆಗಿ ಕಾಣಿಸಿಕೊಂಡಿದ್ದರು. ಅದನ್ನು ಕಂಡು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಅಚ್ಚರಿ ವ್ಯಕ್ತಪಡಿಸಿದ್ದರು. ಆ ಮಾತಿಗೆ ಈಗ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಟ್ರೇಲರ್​ ಅದ್ಭುತವಾಗಿದೆ. ಕಿಚ್ಚ ಸುದೀಪ್​ ಅವರೇ, ನಿಮಗೆ ವಯಸ್ಸು ಆಗುವುದೇ ಇಲ್ಲವಾ?’ ಎಂದು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ರಮ್ಯಾ ಬರೆದುಕೊಂಡಿದ್ದರು. ದಿನದಿಂದ ದಿನಕ್ಕೆ ಸುದೀಪ್​ ವಯಸ್ಸು ಕಮ್ಮಿ ಆಗುತ್ತಿದೆ ಎಂಬರ್ಥದಲ್ಲಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು. ಅದನ್ನು ಸುದೀಪ್​ ಗಮನಿಸಿದ್ದಾರೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಾಯಿತು. ಅದಕ್ಕೆ ಕಿಚ್ಚ ಸೂಕ್ತ ಉತ್ತರ ನೀಡಿದ್ದಾರೆ.

‘ರಮ್ಯಾ ಬರೆದುಕೊಂಡಿದ್ದನ್ನು ನಾನೂ ನೋಡಿದೆ. ಕೊನೆಯದಾಗಿ ನಟನೆ ಮಾಡಿದ ಮೇಲೆ ಅವರು ನನ್ನ ಬಗ್ಗೆ ಟ್ವೀಟ್​ ಮಾಡಿ ಎಷ್ಟೋ ವರ್ಷಗಳೇ ಆಗಿತ್ತು. ಕೊನೆಗೂ ಚಾಲೆಂಜಿಂಗ್​ ಆಗಿ ತೆಗೆದುಕೊಂಡು ಈಗ ಪೋಸ್ಟ್ ಮಾಡಿದ್ದಾರೆ. ಸಿನಿಮಾ ಬಿಟ್ಟು ಅವರು ರಾಜಕೀಯದಲ್ಲಿ ಇದ್ದರು. ಆದರೂ ಕೂಡ ನಮ್ಮ ಬಗ್ಗೆ ಪೋಸ್ಟ್​ ಮಾಡಿರುವುದು ಖುಷಿಯ ವಿಚಾರ’ ಎಂದು ಸುದೀಪ್ ಹೇಳಿದ್ದಾರೆ.

‘ನಾವು ಇಂದು ದೈಹಿಕವಾಗಿ ಹೇಗೆ ಇದ್ದೇವೆ ಎಂಬುದು ಒಂದು ರೀತಿಯ ಇನ್ವೆಸ್ಟ್​ಮೆಂಟ್​. ಸಿನಿಮಾದಲ್ಲಿ ಹೆಸರು ಮಾಡಿದ್ದೇವೆ ಎಂದಮಾತ್ರಕ್ಕೆ ಅದನ್ನು ಬೇಕಾಬಿಟ್ಟಿ ಬಳಸಿಕೊಳ್ಳೋಕೆ ಆಗಲ್ಲ. ನಾವು ಹೆಂಗಿದ್ದರೂ ಓಕೆ ಎಂದುಕೊಳ್ಳಬಾರದು. ಹೊಸಬರು ಕೆಲವರು ನನಗಿಂತ ಹೆಚ್ಚು ವಯಸ್ಸಾದಂತೆ ಕಾಣುತ್ತಾರೆ. ಅದೇ ರೀತಿ, 55 ವರ್ಷ ಆದವರೂ ನಮಗಿಂತ ಚಿಕ್ಕವರ ರೀತಿ ಕಾಣುತ್ತಾರೆ. ಇವರಿಬ್ಬರೂ ಕೂಡ ನಮಗೆ ಸ್ಫೂರ್ತಿ ನೀಡುತ್ತಾರೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

‘ರಂಗ ಎಸ್​ಎಸ್​ಎಲ್​ಸಿ’, ‘ಜಸ್ಟ್​ ಮಾತ್​ ಮಾತಲ್ಲಿ’, ‘ಮುಸ್ಸಂಜೆ ಮಾತು’ ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್​ ನಟಿಸಿದ್ದರು. ಮತ್ತೆ ಅವರು ತೆರೆಮೇಲೆ ಜೋಡಿಯಾಗಿ ಕಾಣಿಸಿಕೊಳ್ಳಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

ಇದನ್ನೂ ಓದಿ:

ರಮ್ಯಾ ಬರೆದ ಚಿತ್ರ ನೋಡಿ ತಲೆ ಕೆರೆದುಕೊಂಡ ಫ್ಯಾನ್ಸ್​; ಜೀವನದ ಅರ್ಥ ವಿವರಿಸಿದ ಗೆರೆಗಳು​

ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್​ ಪಡೆದ ಸುದೀಪ್​; ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​

ತಾಜಾ ಸುದ್ದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ