AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ಸುದೀಪ್; ಕಾರಣ ತಿಳಿಸಿ ಪತ್ರ ಬರೆದ ಕಿಚ್ಚ

ಕಿಚ್ಚ ಸುದೀಪ್ ಅವರಿಗೆ ‘ಪೈಲ್ವಾನ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ. ಆದರೆ ಸುದೀಪ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಲು ಸಿದ್ಧರಿಲ್ಲ. ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ಪತ್ರದ ಮೂಲಕ ವಿವರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸುದೀಪ್ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ಸುದೀಪ್; ಕಾರಣ ತಿಳಿಸಿ ಪತ್ರ ಬರೆದ ಕಿಚ್ಚ
Kichcha Sudeep
ಮದನ್​ ಕುಮಾರ್​
|

Updated on:Jan 23, 2025 | 5:19 PM

Share

2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದೆ. ಈ ಪಟ್ಟಿಯಲ್ಲಿ ಸುದೀಪ್ ಅವರು ‘ಅತ್ಯುತ್ತಮ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಚ್ಚರಿ ಏನೆಂದರೆ, ಸುದೀಪ್ ಅವರಿಗೆ ಪ್ರಶಸ್ತಿ ಸ್ವೀಕರಿಸಲು ಇಷ್ಟವಿಲ್ಲ. ‘ಪೈಲ್ವಾನ್’ ಸಿನಿಮಾದಲ್ಲಿನ ತಮ್ಮ ನಟನೆಯನ್ನು ಗುರುತಿಸಿದ್ದಕ್ಕಾಗಿ ಅವರು ಜ್ಯೂರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿದಿದ್ದಾರೆ. ಆದರೆ ತಮ್ಮ ಬದಲು ಬೇರೆ ಕಲಾವಿದರಿಗೆ ಈ ಪ್ರಶಸ್ತಿ ಸಲ್ಲಬೇಕು ಎಂದು ಸುದೀಪ್ ಹೇಳಿದ್ದಾರೆ. ಈ ಬಗ್ಗೆ ಅವರು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಲು ನಾನು ನಿರ್ಧರಿಸಿದ್ದೇನೆ. ಅದಕ್ಕೆ ವಿವಿಧ ವೈಯಕ್ತಿಕ ಕಾರಣಗಳಿವೆ.’

‘ಈ ಕಲೆಗಾಗಿ ತಮ್ಮ ಹೃದಯವನ್ನು ಅರ್ಪಿಸಿದ ಅನೇಕ ಸಮರ್ಥ ನಟರು ಇದ್ದಾರೆ. ನನಗಿಂತಲೂ ಹೆಚ್ಚಾಗಿ ಅವರಿಗೆ ಈ ಗೌರವ ಸಲ್ಲಬೇಕು. ಅವರಲ್ಲಿ ಒಬ್ಬರು ಈ ಗೌರವ ಪಡೆದರೆ ನನಗೆ ಹೆಚ್ಚು ಖುಷಿ ಆಗುತ್ತದೆ. ಜನರನ್ನು ರಂಜಿಸಬೇಕು ಎಂಬ ನನ್ನ ಕೆಲಸದಲ್ಲಿ ಪ್ರಶಸ್ತಿಗಳ ನಿರೀಕ್ಷೆ ಇಲ್ಲ. ಜ್ಯೂರಿಗಳು ನನ್ನನ್ನು ಗುರುತಿಸಿರುವುದು ನನಗೆ ಇನ್ನಷ್ಟು ಉತ್ತೇಜನ ನೀಡಿದೆ.’

‘ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಜ್ಯೂರಿಗಳಿಗೆ ನಾನು ಚಿರಋಣಿ. ಈ ಮನ್ನಣೆಯೇ ನಿಜವಾದ ಪ್ರಶಸ್ತಿ. ನನ್ನ ನಿರ್ಧಾರದಿಂದ ನಿರಾಸೆ ಆಗಿದ್ದರೆ ಜ್ಯೂರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ನಿರ್ಧಾರವನ್ನು ನೀವು ಗೌರವಿಸುತ್ತೀರಿ ಮತ್ತು ನನ್ನನ್ನು ಬೆಂಬಲಿಸುತ್ತೀರಿ ಎಂಬ ನಂಬಿಕೆ ನನಗೆ ಇದೆ. ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ.’

ಇಂತಿ.. ಕಿಚ್ಚ ಸುದೀಪ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:03 pm, Thu, 23 January 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!