ಸಸ್ಪನ್ಸ್ ಥ್ರಿಲ್ಲರ್ ಕತೆಯುಳ್ಳ ‘ಅನಾವರಣ’ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಿದ ಸುದೀಪ್

Anavarana: ಪ್ರತಿಭಾವಂತರಿಗೆ, ಆತ್ಮೀಯರಿಗೆ, ಸಿನಿಮಾ ನಿರ್ಮಿಸುವ ಹಂಬಲ ಇರುವವರಿಗೆ ಕಿಚ್ಚ ಸುದೀಪ್ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಇದೀಗ ಹೊಸದೊಂದು ತಂಡದ ಟ್ರೈಲರ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದಾರೆ.

ಸಸ್ಪನ್ಸ್ ಥ್ರಿಲ್ಲರ್ ಕತೆಯುಳ್ಳ ‘ಅನಾವರಣ’ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಿದ ಸುದೀಪ್
ಸುದೀಪ್
Follow us
ಮಂಜುನಾಥ ಸಿ.
|

Updated on: Nov 18, 2023 | 8:12 PM

ಪ್ರತಿಭಾವಂತರಿಗೆ, ಆತ್ಮೀಯರಿಗೆ, ಬೆಳೆಯುವ ಹಂಬಲ ಇರುವವರಿಗೆ ನಟ ಸುದೀಪ್ (Sudeep) ಬೆಂಬಲ ನೀಡುತ್ತಲೇ ಬಂದಿದ್ದಾರೆ. ಇದೀಗ ಮತ್ತೊಂದು ಪ್ರತಿಭಾವಂತ ಸಿನಿಮಾ ತಂಡವೊಂದನ್ನು ಸುದೀಪ್ ಬೆಂಬಲಿಸಿದ್ದಾರೆ. ‘ಅನಾವರಣ’ ಹೆಸರಿನ ಸಿನಿಮಾದ ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಪ್ರೀತಿ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಈ ಸಿನಿಮಾದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.

ಟ್ರೈಲರ್ ಅನ್ನು ಬಿಡುಗಡೆ ಮಾಡಿ ವೀಕ್ಷಿಸಿದ ಸುದೀಪ್, ‘ರಾಮಚಂದ್ರ, ಅದ್ವೈತ್ ಪ್ರಭಾಕರ್ ನಿರ್ಮಾಣ ಮಾಡಿರುವ, ಮೊದಲ ಬಾರಿಗೆ ಮಂಜು ಹರಿ ನಿರ್ದೇಶನ ಮಾಡಿರುವ, ಅರ್ಜುನ್ ಯೋಗಿ ನಟನೆಯ ಅನಾವರಣ ಸಿನಿಮಾದ ಟ್ರೇಲರ್ ನೋಡಿದೆ. ಅವರ ತಂಡಕ್ಕೆ ಅವರ ಪರಿಶ್ರಮಕ್ಕೆ ಒಳ್ಳೆದಾಗಲಿ. ಡಿಸೆಂಬರ್ 1ಕ್ಕೆ ಸಿನಿಮಾ ಬಿಡುಗಡೆ ಆಗುತ್ತಿದೆ. ಟ್ರೈಲರ್ ನೋಡ್ತಾ ಇರಬೇಕಾದ್ರೆ ಬಹಳ ಪರಿಚಯಸ್ಥರು ತುಂಬ ಜನ ಸಿನಿಮಾದಲ್ಲಿದ್ದಾರೆ ಅನ್ನಿಸಿತು. ಎಲ್ಲರಿಗೂ ಒಳ್ಳೆದಾಗಲಿ” ಎಂದು ಶುಭ ಹಾರೈಸಿದರು.

ಕೌಟುಂಬಿಕ ಡ್ರಾಮಾದ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಅನಾವರಣ’ ಸಿನಿಮಾ ಡಿಸೆಂಬರ್ 1 ರಂದು ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ. ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಜಂಟಿಯಾಗಿ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಅವರು ರಂಗ ಕಲಾವಿದರಾಗಿದ್ದಾರೆ. ಈಗಾಗಲೇ 40ಕ್ಕೂ ಹೆಚ್ಚು ಕಿರು ಚಿತ್ರಗಳನ್ನು ಮಾಡಿರುವ ಅನುಭವ ಈ ಇಬ್ಬರು ನಿರ್ದೇಶಕರಿಗೆ ಇದೆ.

ಇದನ್ನೂ ಓದಿ:‘ನಿಮ್ಮ ಹಠ ಕಾಣುತ್ತಿಲ್ಲ’; ಎಂದ ಸುದೀಪ್; ‘ನನಗೆ ಅದು ತುಂಬಾ ಕಾಡುತ್ತಿದೆ’ ಎಂದ ಸಂತೋಷ್

‘ನಮ್ಮ ಸಿನಿಮಾ’ ಬ್ಯಾನರ್ ಅಡಿಯಲ್ಲಿ ಅದ್ವೈತ್ ಪ್ರಭಾಕರ್, ಆರ್.ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ಸೇರಿ ಅನಾವರಣ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಯೋಗಿ, ಸಾರಿಕಾ ರಾವ್ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದಾರೆ. ಪತ್ರಕರ್ತ ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರಥಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ, ಯುಕ್ತಾ, ಧರಣಿ ಕುಮಾರ್, ಸಿದ್ದೀ ವಿನಾಯಕ, ಗಿರೀಶ್ ಯು.ಬಿ, ಶಿವರಾಜ್, ರಂಗೋಲಿ ವಿಜಿ, ರಾಜುಹಾಸನ್, ಬೇಬಿ ದೃತಿ ಶುತ್ವ ಮತ್ತು ಅಭಿ ತಾರಾಬಳಗದಲ್ಲಿದ್ದಾರೆ.

ಸಿನಿಮಾಕ್ಕೆ ವೆಂಕಿ ಯುಡಿವಿ ಸಂಕಲನ ಮಾಡಿದ್ದಾರೆ. ಡಾ.ವಿ.ನಾಗೇಂದ್ರ ಪ್ರಸಾದ್ ಮತ್ತು ಶಶಿಕುಮಾರ್ ಬೆಳಕವಾಡಿ ಸಾಹಿತ್ಯ ಒದಗಿಸಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಬಿ.ಆರ್.ಹೇಮಂತ್ ಕುಮಾರ್ ಹಿನ್ನಲೆ ಸಂಗೀತ ನೀಡಿದ್ದಾರೆ. ವಿಶಾಲ್ ಸಿ ಕೃಷ್ಣ ಸಂಗೀತ, ನಂದಕುಮಾರ್ ಛಾಯಾಗ್ರಹಣ, ಮದನ್ ಹರಿಣಿ ಮತ್ತು ರಾಮ್ಜ್ ನೃತ್ಯ ಸಂಯೋಜನೆ ಸಿನಿಮಾಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ