ಕಿಚ್ಚ ಸುದೀಪ್​ ಬಿಡುಗಡೆ ಮಾಡಿದ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್

|

Updated on: Dec 28, 2023 | 12:59 PM

ಈವರೆಗೂ ಪೋಸ್ಟರ್​ಗಳ ಮೂಲಕ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಈಗ ಟೀಸರ್ ಅನಾವರಣ ಆಗಿದೆ. ಕಿಚ್ಚ ಸುದೀಪ್ ಅವರು ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ದಿಗಂತ್​ ನಟನೆಯ ಈ ಸಿನಿಮಾಗೆ ಸಮರ್ಥ್ ಬಿ. ಕಡಕೊಳ್ ಅವರು ನಿರ್ದೇಶನ ಮಾಡಿದ್ದಾರೆ.

ಕಿಚ್ಚ ಸುದೀಪ್​ ಬಿಡುಗಡೆ ಮಾಡಿದ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್
ದಿಗಂತ್​ ಮಂಚಾಲೆ
Follow us on

ಎಡಗೈ ಬಳಸುವ ಜನರ ಕಥೆಯನ್ನೇ ಕೇಂದ್ರವಾಗಿ ಇಟ್ಟುಕೊಂಡು ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಸಿನಿಮಾ ಮಾಡಲಾಗಿದೆ. ಇದರಲ್ಲಿ ಎಡಗೈ ಬಳಸುವವರ ಜೀವನ ಶೈಲಿ ಕುರಿತು ಹೇಳಲಾಗುವುದು. ನಟ ದಿಗಂತ್ ಮಂಚಾಲೆ (Diganth Manchale) ಅವರು ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ಹೊಸ ನಟಿ ಧನು ಹರ್ಷ ಅವರು ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಭಜರಂಗಿ ಲೋಕಿ, ರಾಧಿಕಾ ನಾರಾಯಣ್ ಮುಂತಾದವರು ಅಭಿನಯಿಸಿದ್ದಾರೆ. ಒಂದು ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಳ್ಳಲಿದ್ದಾರೆ. ದಿಗಂತ್​ ಅವರ ಜನ್ಮದಿನದ ಪ್ರಯುಕ್ತ ಇಂದು (ಡಿಸೆಂಬರ್​ 28) ಕಿಚ್ಚ ಸುದೀಪ್​ (Kichcha Sudeep) ಅವರು ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಿದ್ದಾರೆ.

ಇಷ್ಟು ದಿನಗಳ ಕಾಲ ಪೋಸ್ಟರ್​ಗಳ ಮೂಲಕ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಈಗ ಟೀಸರ್ ಅನಾವರಣ ಆಗಿದೆ. ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಟೀಸರ್​ನಲ್ಲಿ ಅನೇಕ ಕುತೂಹಲಕಾರಿ ಅಂಶಗಳಿವೆ. ಎಡಗೈ ಬಳಸುವ ವ್ಯಕ್ತಿಯ ತೊಂದರೆಗಳನ್ನು ಇದರಲ್ಲಿ ಕಟ್ಟಿಕೊಡಲಾಗಿದೆ. ಒಂದಷ್ಟು ಟ್ವಿಸ್ಟ್​ಗಳಿಂದ ಕೂಡಿರುವ ಈ ಟೀಸರ್​ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಸಮರ್ಥ್ ಬಿ. ಕಡಕೊಳ್ ಅವರು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದು. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ, ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳನ್ನು ಈ ಸಿನಿಮಾ ಹೊಂದಿದೆ. ‘ಹೈಫನ್ ಪಿಕ್ಚರ್ಸ್’ ಮತ್ತು ‘ಗುರುದತ್ ಗಾಣಿಗ ಫಿಲ್ಮ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಕೆಸಿಸಿ ಯಶಸ್ವಿ, ಧನ್ಯವಾದ ಹೇಳಿದ ಸುದೀಪ್, ಗೀತಕ್ಕನಿಗೂ ವಿಶೇಷ ಥ್ಯಾಂಕ್ಸ್

ದಿನ ನಿತ್ಯ ಎಲ್ಲ ಕೆಲಸಕ್ಕೆ ಎಡಗೈ ಬಳಕೆ ಮಾಡುವ ಜನರ ಸಮಸ್ಯೆಗಳ ಕುರಿತು ಈ ಸಿನಿಮಾ ಮಾಡಲಾಗಿದೆ. ಪ್ರತಿ ದಿನ ಅವರು ಎದುರಿಸುವ ಸಮಸ್ಯೆಗಳನ್ನು ಆಧರಿಸಿ ಈ ಚಿತ್ರದ ಕಥೆ ಸಿದ್ಧವಾಗಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಫೆಬ್ರವರಿಯಲ್ಲಿ ಈ ಸಿನಿಮಾ ಬಿಡುಗಡೆ ಆಗುವ ನಿರೀಕ್ಷೆ ಇದೆ. ಈ ಸಿನಿಮಾಗೆ ಅಭಿಮನ್ಯು ಸದಾನಂದ್ ಅವರು ಛಾಯಾಗ್ರಹಣ ಮಾಡಿದ್ದಾರೆ. ರಾಹುಲ್ ವಿ. ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಅವರು ಸಂಭಾಷಣೆ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.