AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಕಬ್ಜ’ ಚಿತ್ರದ ಲುಕ್​ ರಿವೀಲ್​ ಮಾಡಿದ ಸುದೀಪ್; ಅಭಿಮಾನಿಗಳು ಫಿದಾ

ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ‘ಮುಕುಂದ ಮುರಾರಿ’ ಚಿತ್ರದ ನಂತರ ಈ ಜೋಡಿ ‘ಕಬ್ಜ’ ಚಿತ್ರದಲ್ಲಿ ಒಂದಾಗಿದೆ.

Kichcha Sudeep: ‘ಕಬ್ಜ’ ಚಿತ್ರದ ಲುಕ್​ ರಿವೀಲ್​ ಮಾಡಿದ ಸುದೀಪ್; ಅಭಿಮಾನಿಗಳು ಫಿದಾ
ಸುದೀಪ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 17, 2021 | 4:47 PM

Share

ರಿಲೀಸ್​​ಗೂ ಮೊದಲೇ ಉಪೇಂದ್ರ (Upendra) ಹಾಗೂ ಸುದೀಪ್ (Kichcha Sudeep) ನಟನೆಯ ‘ಕಬ್ಜ’ (Kabza Movie) ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿತ್ತು. ಸುದೀಪ್ ​ ಅವರು ಈ ಪೋಸ್ಟರ್​ನಲ್ಲಿ ಭಿನ್ನ ಗೆಟಪ್​ ತಾಳಿದ್ದರು. ಈಗ ಈ ಚಿತ್ರದ ಲುಕ್​ಅನ್ನು ಸ್ವತಃ ಕಿಚ್ಚ ಸುದೀಪ್​ ಅವರೇ ಹಂಚಿಕೊಂಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಬ್ಲ್ಯಾಕ್​ಆ್ಯಂಡ್​ ವೈಟ್​ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ.

ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ‘ಮುಕುಂದ ಮುರಾರಿ’ ಚಿತ್ರದ ನಂತರ ಈ ಜೋಡಿ ‘ಕಬ್ಜ’ ಚಿತ್ರದಲ್ಲಿ ಒಂದಾಗಿದೆ. ಖ್ಯಾತ ನಿರ್ದೇಶಕ ಆರ್. ಚಂದ್ರು ಈ ಚಿತ್ರಕ್ಕೆ ಆ್ಯಕ್ಷನ್​ಕಟ್​ ಹೇಳುತ್ತಿದ್ದಾರೆ. ಈ ಕಾರಣಕ್ಕೂ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಈ ಮಧ್ಯೆ, ಸಿನಿಮಾದಲ್ಲಿನ ಸುದೀಪ್​ ಲುಕ್​ ಸಾಕಷ್ಟು ವೈರಲ್​ ಆಗುತ್ತಿದೆ.

ಸುದೀಪ್​ ಅವರು ‘ಕೆಂಪೇಗೌಡ’ ಸಿನಿಮಾ ಶೈಲಿಯಲ್ಲಿ ಗಡ್ಡ ಬಿಟ್ಟಿದ್ದಾರೆ. ಭಿನ್ನ ರೀತಿಯ ಕನ್ನಡಕ ಹಾಕಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅವರು ಈ ಸಿನಿಮಾದಲ್ಲಿ ಭಾರ್ಗವ್​ ಭಕ್ಷಿ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ.

ಎಂ.ಟಿ.ಬಿ ನಾಗರಾಜ್ ‘ಕಬ್ಜ’ ಚಿತ್ರ ಅರ್ಪಿಸುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ಅವರು ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ‘ಕಬ್ಜ’ ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್(ಐ ಸಿನಿಮಾ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರಿದ್ದಾರೆ.

ಇದನ್ನೂ ಓದಿ: ಸುದೀಪ್​, ಉಪೇಂದ್ರ ಅಭಿಮಾನಿಗಳಿಗೆ ‘ಕಬ್ಜಾ’ ಕಡೆಯಿಂದ ಸಿಗುತ್ತಿದೆ ವಿಶೇಷ ಗಿಫ್ಟ್​; ಏನದು?

ಕುಟುಂಬದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು ಸುದೀಪ್, ಗುಡಿಯಲ್ಲಿ ಅಶ್ಲೇಷ ಹಾಗೂ ನಾಗ ಪ್ರತಿಷ್ಠೆ ಪೂಜೆ

Published On - 4:36 pm, Fri, 17 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ