Max Movie: ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಯಾವಾಗ? ಸಿಹಿಸುದ್ದಿ ಕೊಟ್ಟ ಕಿಚ್ಚ ಸುದೀಪ್

|

Updated on: Jun 17, 2024 | 8:06 AM

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಅವರು ಒಂದು ಬ್ರೇಕ್ ಪಡೆದಿದ್ದರು. ರಾಜಕೀಯ ಪ್ರಚಾರದಲ್ಲೂ ಭಾಗಿ ಆದರು. ಹೀಗಾಗಿ, ಅವರ ಸಿನಿಮಾ ತೆರೆಮೇಲೆ ಬರದೆ ಎರಡು ವರ್ಷಗಳು ಕಳೆದಿವೆ. ಈಗ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

Max Movie: ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಯಾವಾಗ? ಸಿಹಿಸುದ್ದಿ ಕೊಟ್ಟ ಕಿಚ್ಚ ಸುದೀಪ್
ಸುದೀಪ್
Follow us on

ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಮಾಧ್ಯಮದ ಎದುರು ಬಂದಿರಲಿಲ್ಲ. ಇತ್ತೀಚೆಗೆ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಲಾಂಚ್​ಗೆ ಅವರು ಆಗಮಿಸಿದ್ದರು. ಕಾರ್ತಿಕ್ ತಂಡಕ್ಕೆ ಅವರು ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಆ ಬಳಿಕ ಮಾಧ್ಯಮದ ಜೊತೆ ಮಾತಿಗೆ ಸಿಕ್ಕರು. ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ ಅವರು ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು. ಇದೇ ವೇಳೆ ಅವರು ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಸಿನಿಮಾ ರಿಲೀಸ್ ಯಾವಾಗ ಎನ್ನುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಅವರು ಒಂದು ಬ್ರೇಕ್ ಪಡೆದಿದ್ದರು. ರಾಜಕೀಯ ಪ್ರಚಾರದಲ್ಲೂ ಭಾಗಿ ಆದರು. ಹೀಗಾಗಿ, ಅವರ ಸಿನಿಮಾ ತೆರೆಮೇಲೆ ಬರದೆ ಎರಡು ವರ್ಷಗಳು ಕಳೆದಿವೆ. ಈಗ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಸಿನಿಮಾ ಆಗಸ್ಟ್​ ವೇಳೆಗೆ ರಿಲೀಸ್ ಆಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಚಿತ್ರದ ಡಬ್ಬಿಂಗ್ ಕೆಲಸ ಪೂರ್ಣಗೊಂಡಿದೆಯಂತೆ. ‘ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಆಗಸ್ಟ್​ನಲ್ಲಿ ಸಿನಿಮಾ ಬರಬಹುದು ಅಂದುಕೊಂಡಿದ್ದೇವೆ’ ಎಂದಿದ್ದಾರೆ ಸುದೀಪ್. ಕೆಲಸ ಸ್ವಲ್ಪ ವಿಳಂಬ ಆದರೂ ಸೆಪ್ಟೆಂಬರ್ ವೇಳೆಗೆ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಇದನ್ನೂ ಓದಿ: ಭರ್ಜರಿ ಅಪ್​ಡೇಟ್ ಕೊಟ್ಟ ಸುದೀಪ್: ‘ಮ್ಯಾಕ್ಸ್’ ಸಿನಿಮಾ ಚಿತ್ರೀಕರಣ ಮುಕ್ತಾಯ

‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಅವರು ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್​ಕುಮಾರ್, ಸಂಯುಕ್ತಾ ಹೊರನಾಡು, ಸುಕೃತಾ ವಾಘ್ಲೆ, ಪ್ರಮೋದ್ ಶೆಟ್ಟಿ, ಇಳವರಸು ಮೊದಲಾದವರು ನಟಿಸಿದ್ದಾರೆ. ಕಲೈಪುಲಿ ಎಸ್​. ಧನು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಿಚ್ಚ ಸುದೀಪ್ ಅವರು ಈ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.