AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಹೆಸರಿಗೆ ಫ್ಯಾನ್ಸ್ ಕಳಂಕ ತಂದಿಲ್ಲ’; ಬರ್ತ್​ಡೇ ದಿನ ಸುದೀಪ್ ನೇರಮಾತು

ಕಿಚ್ಚ ಸುದೀಪ್ ಅವರ ಜನ್ಮದಿನದ ಪ್ರಯುಕ್ತ ಇಂದು (ಸೆಪ್ಟೆಂಬರ್ 2) ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಫ್ಯಾನ್ಸ್ ಭೇಟಿಗೆ ಸಮಯ ನಿಗದಿ ಆಗಿತ್ತು. ಕಿಚ್ಚ ಸುದೀಪ್ ಅವರನ್ನು ನೋಡಲು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಅವರ ಎದುರು ಸುದೀಪ್ ಮಾತನಾಡಿದ್ದಾರೆ.

‘ನನ್ನ ಹೆಸರಿಗೆ ಫ್ಯಾನ್ಸ್ ಕಳಂಕ ತಂದಿಲ್ಲ’; ಬರ್ತ್​ಡೇ ದಿನ ಸುದೀಪ್ ನೇರಮಾತು
Sudeep
ರಾಜೇಶ್ ದುಗ್ಗುಮನೆ
|

Updated on:Sep 02, 2024 | 2:51 PM

Share

ಕಿಚ್ಚ ಸುದೀಪ್ ಅವರು ಅನೇಕರಿಗೆ ಮಾದರಿ. ನಟನೆಯ ಜೊತೆಗೆ ಅವರಿಂದ ಅನೇಕ ಒಳ್ಳೆಯ ಕೆಲಸಗಳು ಆಗುತ್ತಿವೆ. ಅದೇ ರೀತಿ ಅವರ ಅಭಿಮಾನಿಗಳು ಕೂಡ ಸಾಮಾಜಿಕ ಕೆಲಸ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಸುದೀಪ್ ಹೆಸರಲ್ಲಿ ಅಭಿಮಾನಿಗಳು ಬೋರ್​ವೆಲ್ ತೆಗೆಸಿದ್ದಾರೆ. ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸುದೀಪ್ ಅವರು ಬರ್ತ್​ಡೇ ದಿನ ಮಾತನಾಡಿದ್ದಾರೆ. ಅವರು ಅಭಿಮಾನಿಗಳ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಬೆಂಗಳೂರಿನ ಜಯನಗರದ ಎಂಇಸ್ ಮೈದಾನದಲ್ಲಿ ಕಿಚ್ಚ ಸುದೀಪ್ ಅವರ ಬರ್ತ್​ಡೇ ಆಚರಣೆಗೆ ಸ್ಥಳ ನಿಯೋಜನೆ ಮಾಡಲಾಗಿತ್ತು. ಅಲ್ಲಿಗೆ ತೆರಳಿದ ಸುದೀಪ್ ಮಾತನಾಡಿದರು. ‘ನಾನು ಮೇಕಪ್​ ಹಾಕೋದು ಅಭಿಮಾನಿಗಳಿಗೋಸ್ಕರ. ಎಲ್ಲಿಯವರೆಗೆ ನೋಡೋಕೆ ಇಷ್ಟಪಡುತ್ತಿರೋ ಅಲ್ಲಿಯವರೆಗೆ ನಿಮಗೋಸ್ಕರ ದುಡಿಯುತ್ತೇನೆ’ ಎಂದಿದ್ದಾರೆ ಸುದೀಪ್.

‘ನನ್ನಿಂದ ಅವರು ಒಳ್ಳೆಯ ಕೆಲಸ ಮಾಡುತ್ತಾರೆ. ಅವರು ಮಾಡಿರೋ ಕೆಲಸ ಅವರ ತಂದೆ ತಾಯಿಗೆ, ಊರಿನವರಿಗೆ ಈ ಶ್ರೇಯಸ್ಸು ಸಲ್ಲುತ್ತದೆ. ನಾವು ಬೆಳೆಯುತ್ತೇವೆ ಅನ್ನೋದು ತಪ್ಪಲ್ಲ. ಯಾವ ವಾತಾವರಣದಲ್ಲಿ ಬೆಳೆಯುತ್ತೇವೆ ಅನ್ನೋದು ಮುಖ್ಯವಾಗುತ್ತದೆ. ಅವರು ಒಳ್ಳೆಯ ಕೆಲಸ ಮಾಡ್ತಿರೋದು ನಾನು ಹೇಳಿದೆ ಅಂತಲ್ಲ, ಅವರಲ್ಲಿ ಒಳ್ಳೆತನ ಇದೆ. ಅದಕ್ಕಾಗಿ ನಾವಿಷ್ಟು ಒಳ್ಳೆಯವರು’ ಎಂದಿದ್ದಾರೆ ಸುದೀಪ್.

‘ನಾನು ಸಂಪಾದನೆ ಮಾಡಿರುವ ಹೆಸರಿಗೆ ಕಳಂಕ ತರುವ ಕೆಲಸವನ್ನು ಫ್ಯಾನ್ಸ್ ಮಾಡಿಲ್ಲ. ಸಿನಿಮಾ ಎಲ್ಲರೂ ಮಾಡುತ್ತಾರೆ. ಆದರೆ, ಯಶಸ್ಸು ನಂದು ಮಾತ್ರವಲ್ಲ. ವ್ಯಕ್ತಿತ್ವದಲ್ಲಿ ದೊಡ್ಡವರಾಗಬೇಕಾದರೆ ಸಿನಿಮಾ ಮಾತ್ರ ಸಾಕಾಗಲ್ಲ. ನನ್ನ ಕುಟುಂಬ, ಗೆಳೆಯರು ಎಲ್ಲರೂ ಮುಖ್ಯವಾಗುತ್ತಾರೆ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: ‘ನಾ ಕಂಡ ಕನಸನ್ನು ಸುದೀಪ್ ಈಡೇರಿಸಿದ್ದಾನೆ’; ಸಂಜೀವ್ ಖುಷಿಯಿಂದ ಹೇಳಿದ್ದ ಮಾತಿದು

‘ಮ್ಯಾಕ್ಸ್’ ಸಿನಿಮಾ ರಿಲೀಸ್ ಯಾವಾಗ ಎನ್ನುವ ಕುತೂಹಲ ಇದೆ. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ತಾಳಿದವನು ಬಾಳಿಯಾನು. ಸಿನಿಮಾ ಮಾಡೋದಷ್ಟೇ ನನ್ನ ಕೆಲಸ. ಸಿನಿಮಾ ವಿಳಂಬ ಆಗಿದ್ದಕ್ಕೆ ಕ್ಷಮೆ ಇರಲಿ. ಸಿನಿಮಾ ಎಂದಾಗ ಸಾಕಷ್ಟು ಮಂದಿ ಇದರಲ್ಲಿ ಭಾಗಿ ಇರುತ್ತಾರೆ’ ಎಂದಿದ್ದಾರೆ ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:51 pm, Mon, 2 September 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!