Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮನ್ನು ಹೊರಗಿನವರನ್ನಾಗಿ ಮಾಡಬೇಡಿ, ತುಳುನಾಡು ಕರ್ನಾಟಕದಲ್ಲೇ ಇದೆ’; ಸುದೀಪ್ ಹೀಗೆ ಹೇಳಿದ್ದೇಕೆ?

‘ಪ್ರತಿ ಬಾರಿ ಇಲ್ಲಿಗೆ ಕರೆದಾಗ ಬಹಳ ಖುಷಿ ಆಗುತ್ತದೆ. ಈ ಊರಿನ ಬಗ್ಗೆ ಗೊತ್ತಿರೋದು ಎಂದರೆ ಅವರು ಸ್ವಾಭಿಮಾನಿಗಳು. ಬಹಳ ಸುಲಭವಾಗಿ ಯಾರನ್ನೂ ಇಷ್ಟಪಡಲ್ಲ. ಅಂಥಹುದರಲ್ಲಿ ಮನಸ್ಸಲ್ಲಿ ನನಗೆ ಸಣ್ಣ ಜಾಗ ಕೊಟ್ಟಿದ್ದೀರಿ. ಅದು ಪೀಠಕ್ಕಿಂತ ದೊಡ್ಡದು’ ಎಂದರು ಸುದೀಪ್.

‘ನಮ್ಮನ್ನು ಹೊರಗಿನವರನ್ನಾಗಿ ಮಾಡಬೇಡಿ, ತುಳುನಾಡು ಕರ್ನಾಟಕದಲ್ಲೇ ಇದೆ’; ಸುದೀಪ್ ಹೀಗೆ ಹೇಳಿದ್ದೇಕೆ?
ಸುದೀಪ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: May 28, 2024 | 8:09 AM

ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದರು. ಅವರು ಗೆಳೆಯನ ರೆಸ್ಟೋರೆಂಟ್​ನ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಅವರು ‘ಯಕ್ಷ ಧ್ರುವ ಪಟ್ಲ ಫೌಂಡೇಶನ್​’ ಆಯೋಜಿಸಿದ್ದ ‘ಯಕ್ಷ ಧ್ರುವ ಪಟ್ಲ ಸಂಭ್ರಮ 2024’ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರನ್ನು ಸನ್ಮಾನಿಸಲಾಯಿತು. ಸುದೀಪ್ ಅವರ ತಾಯಿ ಮಂಗಳೂರಿನವರು. ಹೀಗಾಗಿ, ಅವರಿಗೆ ಮಂಗಳೂರಿನ ಬಗ್ಗೆ ವಿಶೇಷ ಪ್ರೀತಿ ಇದೆ. ಆ ಊರಿನ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ವೇದಿಕೆ ಮೇಲಿದ್ದವರು ನಮ್ಮ ತುಳುನಾಡಿಗೆ ನಮ್ಮ ತುಳುನಾಡಿಗೆ ಎಂದು ನಮ್ಮನ್ನು ಹೊರಗಿನವರನ್ನಾಗಿ ಮಾಡುತ್ತಿದ್ದಾರೆ. ತುಳುನಾಡು ಕರ್ನಾಕಟದಲ್ಲೇ ಇದೆ. ಕರ್ನಾಟಕ ನಮ್ಮ ಹೃದಯದಲ್ಲಿದೆ. ನಾವು ಅರ್ಧ ಈಕಡೆಯವರು ಎಂದು ನಿರೂಪಕರು ಹೇಳಿದರು. ನಮ್ಮ ತಂದೆಗೆ ಇಡೀ ಕರ್ನಾಟಕದಲ್ಲಿ ಮಂಗಳೂರಿನ ಹುಡುಗಿ ಇಷ್ಟ ಆಯ್ತು’ ಎಂದರು ಸುದೀಪ್.

‘ಪ್ರತಿ ಬಾರಿ ಇಲ್ಲಿಗೆ ಕರೆದಾಗ ಬಹಳ ಖುಷಿ ಆಗುತ್ತದೆ. ಈ ಊರಿನ ಬಗ್ಗೆ ಗೊತ್ತಿರೋದು ಎಂದರೆ ಅವರು ಸ್ವಾಭಿಮಾನಿಗಳು. ಬಹಳ ಸುಲಭವಾಗಿ ಯಾರನ್ನೂ ಇಷ್ಟಪಡಲ್ಲ. ಅಂಥಹುದರಲ್ಲಿ ಮನಸ್ಸಲ್ಲಿ ನನಗೆ ಸಣ್ಣ ಜಾಗ ಕೊಟ್ಟಿದ್ದೀರಿ. ಅದು ಪೀಠಕ್ಕಿಂತ ದೊಡ್ಡದು. ನಿಮ್ಮ ಗೌರವ ಸ್ವೀಕರಿಸಿಲ್ಲ ಎಂದುಕೊಳ್ಳಬೇಡಿ. ಅದನ್ನು ಸ್ವೀಕರಿಸಿದ್ರೆ ನಾನು ಅದಕ್ಕಾಗಿಯೇ ಬಂದೆ ಎಂದುಕೊಳ್ಳುತ್ತಾರೆ. ನಾನು ಬಂದಿದ್ದು ನನ್ನ ಸ್ನೇಹಿತರಿಗೆ’ ಎಂದರು ಸುದೀಪ್.

‘ನನ್ನ ತಾಯಿ ತುಳು ಚೆನ್ನಾಗಿ ಮಾತಾಡ್ತಾರೆ. ನನಗೆ ಜಾಸ್ತಿ ತುಳು ಬರಲ್ಲ. ಕನ್ನಡ ಚಿತ್ರರಂಗಕ್ಕೆ ನಿಮ್ಮವರು ತುಂಬಾ ಜನ ಬಂದಿದ್ದಾರೆ. ಇದರಿಂದ ಕನ್ನಡ ಯಾವುದು, ತುಳು ಯಾವುದು ಅನ್ನೋದು ತಿಳಿಯುತ್ತಿಲ್ಲ’ ಎಂದು ಹಾಸ್ಯ ಮಾಡಿದರು. ತುಳು ಚಿತ್ರರಂಗದಿಂದ ಕನ್ನಡ ಚಿತ್ರರಂಗಕ್ಕೆ ಬಂದು ಉತ್ತಮ ಸಿನಿಮಾ ನೀಡುತ್ತಿರುವವರ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದರು.

ವೇದಿಕೆಯ ಮೇಲೆ ಕರಾವಳಿ ಕಲೆಯನ್ನು ತೋರಿಸಲಾಯಿತು. ಇದನ್ನು ಸುದೀಪ್ ಮೆಚ್ಚಿಕೊಂಡರು. ‘ಬಾದ್​ಶಾ, ಅಭಿನಯ ಚಕ್ರವರ್ತಿ ಎಂದು ನೀವು ನನ್ನನ್ನು ಕರೆಯುತ್ತೀರಿ. ಆದರೆ, ಹೊರಗೆ ಹೋಗಿ ನೋಡಿದಾಗಲೇ ನಾವೆಷ್ಟು ಚಿಕ್ಕವರು ಅನ್ನೋದು ಗೊತ್ತಾಗುತ್ತದೆ. ಈ ಕಲಾವಿದರ ಮುಂದೆ ನಾವು ಚಿಕ್ಕವರು. ನನ್ನನ್ನು ವೇದಿಕೆಗೆ ಕರೆದಿದ್ದಕ್ಕೆ ಧನ್ಯವಾದ’ ಎಂದರು ಸುದೀಪ್.

ಇದನ್ನೂ ಓದಿ: ‘ನಿಮ್ಮತ್ರ ಲ್ಯಾಂಬೋರ್ಗಿನಿ ಕಾರಿರಲಿ, ರಸ್ತೆಗೆ ಇಳಿದಾಗ..’ ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?

ಕಿಚ್ಚ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಸಿನಿಮಾದ ಶೂಟಿಂಗ್ ಚೆನ್ನೈ ಸಮೀಪ ನಡೆದಿದೆ. ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಈ ವರ್ಷವೇ ಅವರ ಈ ಸಿನಿಮಾ ತೆರೆಗೆ ಬರೋ ಸಾಧ್ಯತೆ ಇದೆ. ಮುಂದೆ ಅವರು ಯಾವ ಸಿನಿಮಾ ಕೈಗೆತ್ತಿಕೊಳ್ಳುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!