ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದ ಕಿಚ್ಚ ಸುದೀಪ್; ಸೆಟ್​ನ ಫೋಟೋ ಲೀಕ್

Kichcha Sudeep: ಪ್ರಕಾಶ್ ರಾಜ್ ಸೇರಿ ಅನೇಕರು ಸುದೀಪ್ ಬಗ್ಗೆ ನೇರವಾದ ಮಾತುಗಳಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಆದರೆ, ಇವುಗಳ ಬಗ್ಗೆ ಸುದೀಪ್ ಅಷ್ಟಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ.

ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದ ಕಿಚ್ಚ ಸುದೀಪ್; ಸೆಟ್​ನ ಫೋಟೋ ಲೀಕ್
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Apr 07, 2023 | 7:50 AM

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಬಿಜೆಪಿಗೆ ಬೆಂಬಲ ಘೋಷಿಸಿದರು. ಮೇ 10ರಂದು ನಡೆಯುವ ಚುನಾವಣೆಯಲ್ಲಿ ಗೆಲ್ಲಲೇಬೇಕು ಎನ್ನುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ಪರ ಸುದೀಪ್ ನಿಂತಿರುವುದು ಕಮಲ ಪಡೆಗೆ ದೊಡ್ಡ ಬಲ ಸಿಕ್ಕಂತೆ ಆಗಿದೆ. ಸುದೀಪ್ (Kichcha Sudeep) ರಾಜಕೀಯ ಪಕ್ಷದ ಪರ ನಿಂತಿರುವ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಹೀಗಿರುವಾಗಲೇ ಸುದೀಪ್ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬಿಗ್ ಬಾಸ್ ರಾಜೀವ್ ನಟನೆಯ ‘ಉಸಿರೇ ಉಸಿರೇ’ ಸಿನಿಮಾದಲ್ಲಿ (Usire Usire Movie) ಕಿಚ್ಚ ಅತಿಥಿ ಪಾತ್ರ ಮಾಡುತ್ತಿದ್ದಾರೆ. ತಮ್ಮ ಭಾಗದ ಶೂಟ್ ಪೂರ್ಣಗೊಳಿಸಲು ಅವರು ಸೆಟ್​ಗೆ ಬಂದಿದ್ದಾರೆ. ಸೆಟ್​ನ ಫೋಟೋ ಅನ್ನು ಕೆಲವರು ಲೀಕ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಅವರು ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಂಡಿದ್ದಕ್ಕೆ ಅನೇಕರು ಅಸಮಾಧಾನ ಹೊರಹಾಕಿದ್ದಾರೆ. ಪ್ರಕಾಶ್ ರಾಜ್ ಸೇರಿ ಅನೇಕರು ಸುದೀಪ್ ಬಗ್ಗೆ ನೇರವಾದ ಮಾತುಗಳಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಆದರೆ, ಇವುಗಳ ಬಗ್ಗೆ ಸುದೀಪ್ ಅಷ್ಟಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಅವರು ‘ಉಸಿರೇ ಉಸಿರೇ’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ.

‘ಉಸಿರೇ ಉಸಿರೇ’ ಚಿತ್ರದ ಹೀರೋ ರಾಜೀವ್ ‘ಕನ್ನಡ ಬಿಗ್​ ಬಾಸ್ ಸೀಸನ್ 8’ರಲ್ಲಿ ಸ್ಪರ್ಧಿಯಾಗಿದ್ದರು. ರಾಜೀವ್ ಹಾಗೂ ಕಿಚ್ಚ ಸುದೀಪ್​ ನಡುವೆ ಒಳ್ಳೆಯ ಗೆಳೆತನವಿದೆ. ಸುದೀಪ್ ಅವರನ್ನು ರಾಜೀವ್ ಪ್ರೀತಿಯಿಂದ ಅಣ್ಣ ಎಂದೇ ಸಂಭೋದಿಸುತ್ತಾರೆ​. ಇಬ್ಬರಿಗೂ ಕ್ರಿಕೆಟ್​ ಮೇಲೆ ಎಲ್ಲಿಲ್ಲದ ಆಸಕ್ತಿ. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆಯೋಕೆ ಸಿಸಿಎಲ್​ ಕೂಡ ಕಾರಣ. ಹೀಗಾಗಿ ರಾಜೀವ್​ ನಟಿಸುತ್ತಿರುವ ‘ಉಸಿರೇ ಉಸಿರೇ’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕೂಡ ಬಣ್ಣ ಹಚ್ಚುತ್ತಿದ್ದಾರೆ. ಸುದೀಪ್ ಅವರು ಈ ಚಿತ್ರಕ್ಕಾಗಿ ಎರಡು ದಿನಗಳ ಕಾಲ್​ಶೀಟ್ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಸುದೀಪ್, ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ, ಜನ ದನಿ ಎದುರಿಸಲು ತಯಾರಾಗಿ: ಪ್ರಕಾಶ್ ರಾಜ್ 

‘ವಿಕ್ರಾಂತ್ ರೋಣ’ ತೆರೆಕಂಡ ಬಳಿಕ ಸುದೀಪ್ ಅವರ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಸುದೀಪ್ ಅವರು ಬ್ಯಾಕ್​ ಟು ಬ್ಯಾಕ್ 3 ಸಿನಿಮಾ ಒಪ್ಪಿಕೊಂಡಿದ್ದಾರೆ. ಚುನಾವಣೆ ಪ್ರಚಾರ ಮುಗಿದ ಬಳಿಕ ಅವರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿಗೆ ಮಾಮ ಅಂತ ಸುದೀಪ್​ ಕರೆಯೋದು ಯಾಕೆ? ಇಲ್ಲಿದೆ ಕಿಚ್ಚ ನೀಡಿದ ವಿವರಣೆ

ಎನ್. ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್ ‘ಉಸಿರೇ ಉಸಿರೇ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಿ.ಎಂ. ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ರಾಜೀವ್​ಗೆ ನಾಯಕಿಯಾಗಿ ಶ್ರೀಜಿತ ಘೋಷ್ ನಟಿಸುತ್ತಿದ್ದು, ಇದು ಅವರ ಕನ್ನಡದ ಚೊಚ್ಚಲ ಚಿತ್ರ. ಖ್ಯಾತ ನಟ ಅಲಿ ಕೂಡ ಈ ಸಿನಿಮಾದಲ್ಲಿದ್ದಾರೆ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ನೀಡುತ್ತಿದ್ದಾರೆ. ಸರವಣನ್ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Fri, 7 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ