‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​

Kichcha Sudeep | Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ ಎಂಬುದು ಕಿಚ್ಚ ಸುದೀಪ್​ ಅಭಿಪ್ರಾಯ.

‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
ಪುನೀತ್​ ರಾಜ್​ಕುಮಾರ್​, ಕಿಚ್ಚ ಸುದೀಪ್​
Follow us
TV9 Web
| Updated By: ಮದನ್​ ಕುಮಾರ್​

Updated on:Aug 24, 2022 | 10:17 AM

ಸೆಪ್ಟೆಂಬರ್ 9 ಯಾವಾಗ ಬರುತ್ತೆ ಎಂದು ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿಮಾನಿಗಳು ಕಾಯುತ್ತಾ ಇದ್ದಾರೆ. ಯಾಕೆಂದರೆ, ಅಂದು ಅವರ ‘ಲಕ್ಕಿ ಮ್ಯಾನ್​’ (Lucky Man Movie) ಸಿನಿಮಾ ಬಿಡುಗಡೆ ಆಗಲಿದೆ. ಅಪ್ಪು ನಿಧನರಾಗುವುದಕ್ಕೂ ಮುನ್ನ ಈ ಚಿತ್ರದಲ್ಲಿ ನಟಿಸಿದ್ದರು. ಅವರನ್ನು ಬೆಳ್ಳಿ ಪರದೆ ಮೇಲೆ ನೋಡಲು ಸಿಗುತ್ತಿರುವ ಅವಕಾಶವನ್ನು ಯಾರೂ ಮಿಸ್​ ಮಾಡಿಕೊಳ್ಳಬೇಡಿ ಎಂದು ಕಿಚ್ಚ ಸುದೀಪ್ (Kichcha Sudeep)​ ಹೇಳಿದ್ದಾರೆ. ಈ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ ಬೆಂಗಳೂರಿನಲ್ಲಿ ಮಂಗಳವಾರ (ಆಗಸ್ಟ್​ 23) ರಾತ್ರಿ ನಡೆಯಿತು. ಆ ಇವೆಂಟ್​ಗೆ ಸುದೀಪ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡಿದ ಅವರು ಪುನೀತ್​ ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡರು.

‘ಈ ಸಿನಿಮಾ ರಿಲೀಸ್​ ಆದಾಗ ಎಲ್ಲರೂ ಎರಡೂ ಕೈಗಳನ್ನು ಚಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಕೂಡ ಇದು ಸಿಗಲ್ಲ. ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಆಗಿತ್ತು. ನಾವೆಲ್ಲರೂ ಅವರನ್ನು ಮಿಸ್​ ಮಾಡಿಕೊಳ್ಳುತ್ತೇವೆ. ಆದರೆ ಟ್ರೇಲರ್​ ನೋಡುವಾಗ ನಾನು ಸ್ಮೈಲ್​ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

‘ಲಕ್ಕಿ ಮ್ಯಾನ್​’ ಸಿನಿಮಾದ ಒಂದು ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾ​ರ್​ ಅವರು ಒಟ್ಟಿಗೆ ಡ್ಯಾನ್ಸ್​ ಮಾಡಿದ್ದಾರೆ. ಅದನ್ನು ದೊಡ್ಡ ಪರದೆಯಲ್ಲಿ ನೋಡುವುದೇ ಒಂದು ಹಬ್ಬ. ಅದಕ್ಕಾಗಿ ಅಭಿಮಾನಿಗಳೆಲ್ಲ ಕಾದಿದ್ದಾರೆ. ಪ್ರಭುದೇವ ಅವರ ಸಹೋದರ ಎಸ್​. ನಾಗೇಂದ್ರ ಪ್ರಸಾದ್​ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪಿ.ಆರ್​. ಮೀನಾಕ್ಷಿ ಸುಂದರಂ, ಆರ್​. ಸುಂದರ ಕಾಮರಾಜ್​ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ
Image
‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ
Image
ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ
Image
Lucky Man Teaser: ‘ನಿನಗೆ 2ನೇ ಚಾನ್ಸ್​ ಕೊಡ್ತೀನಿ’; ಲಕ್ಕಿ ಮ್ಯಾನ್​ಗೆ ದೇವರ ರೂಪದಲ್ಲಿ ವರ ನೀಡಿದ ಪುನೀತ್​ ರಾಜ್​ಕುಮಾರ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

ಆಡಿಯೋ ರಿಲೀಸ್​ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್​ಕುಮಾರ್​, ರಾಕ್​ಲೈನ್​ ವೆಂಕಟೇಶ್​, ಭಾ.ಮಾ. ಹರೀಶ್​, ಸುಂದರ್​ ರಾಜ್​ ಮುಂತಾದವರು ಕೂಡ ಆಗಮಿಸಿದ್ದರು. ಸಹೋದರನ ಚಿತ್ರಕ್ಕೆ ರಾಘಣ್ಣ ಮನಸಾರೆ ಹರಸಿದರು. ಯುವ ರಾಜ್​ಕುಮಾರ್​ ಹಾಗೂ ವಿನಯ್​ ರಾಜ್​ಕುಮಾರ್ ಕೂಡ ಅಪ್ಪು ಬಗ್ಗೆ ಮಾತನಾಡಿದರು. ಈ ಚಿತ್ರಕ್ಕೆ ವಿ2 ವಿಜಯ್​ ವಿಕ್ಕಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್​ ಕೃಷ್ಣ ಜೊತೆ ಸಂಗೀತಾ ಶೃಂಗೇರಿ ಮತ್ತು ರೋಷನಿ ಪ್ರಕಾಶ್​ ಅವರು ನಾಯಕಿಯರಾಗಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:17 am, Wed, 24 August 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ