Vikrant Rona: ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿ ಮನದ ಮಾತು ತೆರೆದಿಟ್ಟ ಕಿಚ್ಚ ಸುದೀಪ್

Kichcha Sudeep: ‘ವಿಕ್ರಾಂತ್ ರೋಣ’ ಚಿತ್ರದ ಸುದ್ದಿಗೋಷ್ಠಿಗೆ ಕನ್ನಡ ಚಿತ್ರರಂಗದ ಅನೇಕ ತಾರೆಯರು ಹಾಜರಿ ಹಾಕಿದ್ದಾರೆ. ವೇದಿಕೆಯಲ್ಲಿ ಸುದೀಪ್​ ಹೇಳಿದ ಮಾತುಗಳ ಸಾರಾಂಶ ಇಲ್ಲಿದೆ..

Vikrant Rona: ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿ ಮನದ ಮಾತು ತೆರೆದಿಟ್ಟ ಕಿಚ್ಚ ಸುದೀಪ್
ಕಿಚ್ಚ ಸುದೀಪ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 22, 2022 | 4:12 PM

ನಟ ಕಿಚ್ಚ ಸುದೀಪ್​ (Kichcha Sudeep) ಅಭಿನಯದ ‘ವಿಕ್ರಾಂತ್​ ರೋಣ’ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಜೂನ್​ 23ರಂದು ಟ್ರೇಲರ್​ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಾಗಿದೆ. ಇಂದು (ಜೂನ್​ 22) ನಡೆದ ಪ್ರೆಸ್​ ಮೀಟ್​ಗೆ ಅನೇಕ ಗಣ್ಯರು ಆಗಮಿಸಿದ್ದಾರೆ. ‘ವಿಕ್ರಾಂತ್​ ರೋಣ’ ಚಿತ್ರತಂಡದವರು ಮಾತ್ರವಲ್ಲದೇ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಬಂದು ಟ್ರೇಲರ್​ (Vikrant Rona Trailer) ವೀಕ್ಷಿಸಿದ್ದಾರೆ. ರವಿಚಂದ್ರನ್​, ರಮೇಶ್​ ಅರವಿಂದ್​, ಶಿವರಾಜ್​ಕುಮಾರ್​, ಡಾಲಿ ಧನಂಜಯ, ರಕ್ಷಿತ್​ ಶೆಟ್ಟಿ, ರಾಜ್​ ಬಿ. ಶೆಟ್ಟಿ, ರಿಷಬ್​ ಶೆಟ್ಟಿ ಸೇರಿದಂತೆ ಅನೇಕರು ಈ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. 3ಡಿ ಅವತರಣಿಕೆಯಲ್ಲಿ ಟ್ರೇಲರ್​ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯ (Vikrant Rona Press Meet) ವೇದಿಕೆಯಲ್ಲಿ ಕಿಚ್ಚ ಸುದೀಪ್​ ಅವರು ಅನೇಕರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸಿನಿಮಾಗೆ ಜಾಕ್​ ಮಂಜು ಬಂಡವಾಳ ಹೂಡಿದ್ದು, ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಸುದೀಪ್ ಜೊತೆ ಈ ಚಿತ್ರದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ‘ರಾ ರಾ ರಕ್ಕಮ್ಮ..’ ಹಾಡಿನ ಜೊತೆಗೆ ಒಂದು ದೃಶ್ಯದಲ್ಲೂ ನಟಿಸಿದ್ದಕ್ಕಾಗಿ ಅವರಿಗೆ ಸುದೀಪ್​ ಧನ್ಯವಾದ ತಿಳಿಸಿದ್ದಾರೆ. ಟ್ರೇಲರ್​ ಲಾಂಚ್​ಗೆ ಅತಿಥಿಗಳಾಗಿ ಬಂದ ರಿಷಬ್​ ಶೆಟ್ಟಿ, ರಕ್ಷಿತ್​ ಶೆಟ್ಟಿ ಮತ್ತು ರಾಜ್​ ಬಿ. ಶೆಟ್ಟಿ ಅವರ ಪ್ರತಿಭೆಯನ್ನು ಕಿಚ್ಚ ಕೊಂಡಾಡಿದ್ದಾರೆ. ಶಿವರಾಜ್​ಕುಮಾರ್​ ಅವರ ಎನರ್ಜಿಗೆ ಸುದೀಪ್​ ಸಲಾಂ ಎಂದಿದ್ದಾರೆ.

ಇದನ್ನೂ ಓದಿ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
Image
‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ

ಕೊವಿಡ್​ ಭಯ ಇದ್ದಾಗಲೇ ‘ವಿಕ್ರಾಂತ್ ರೋಣ’ ಶೂಟಿಂಗ್​ ನಡೆದಿತ್ತು. ಅಂಥ ಪರಿಸ್ಥಿತಿಯಲ್ಲಿ ಬೆಂಬಲ ನೀಡಿದ ಪತ್ನಿ, ಮಗಳು, ಅಕ್ಕಂದಿರು ಹಾಗೂ ಕುಟುಂಬದ ಎಲ್ಲ ಸದಸ್ಯರಿಗೂ ಸುದೀಪ್​ ಅವರು ಥ್ಯಾಂಕ್ಸ್​ ಹೇಳಿದ್ದಾರೆ. ನಿರ್ಮಾಪಕ ಜಾಕ್​ ಮಂಜು ಅವರ ಸಹಕಾರ, ನಿರ್ದೇಶಕ ಅನೂಪ್​ ಭಂಡಾರಿ ಅವರ ವೃತ್ತಿಪರತೆ, ಕಲಾ ನಿರ್ದೇಶಕ ಶಿವಕುಮಾರ್ ಅವರ ಕೆಲಸವನ್ನು ಮೆಚ್ಚಿ ಸುದೀಪ್​ ಭೇಷ್​ ಎಂದಿದ್ದಾರೆ.

ಇದನ್ನೂ ಓದಿ: Vikranth Rona Press Meet: ಸುದೀಪ್ ಜತೆ​ ‘ವಿಕ್ರಾಂತ್​ ರೋಣ’ ಟ್ರೇಲರ್​ ನೋಡಲು ಬಂದ ಸೆಲೆಬ್ರಿಟಿಗಳು; ಇಲ್ಲಿದೆ ಲೈವ್​ ವಿಡಿಯೋ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:40 pm, Wed, 22 June 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ