Kichcha Sudeep: ‘ಕೋಟಿಗೊಬ್ಬ 3’ ಚಿತ್ರದ ಓಟಿಟಿ ರಿಲೀಸ್​ ಬಗ್ಗೆ ಬಹುಕೋಟಿ ಗಾಸಿಪ್​; ಚಿತ್ರತಂಡದ ಸ್ಪಷ್ಟನೆ ಏನು?

Kotigobba 3: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಕೋಟಿಗೊಬ್ಬ 3’ ಏಪ್ರಿಲ್​ 29ರಂದು ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ವೈರಸ್​ ಹೆಚ್ಚಾದ ಕಾರಣ ಲಾಕ್​ಡೌನ್​ ಜಾರಿ ಮಾಡಿರುವುದರಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

Kichcha Sudeep: ‘ಕೋಟಿಗೊಬ್ಬ 3’ ಚಿತ್ರದ ಓಟಿಟಿ ರಿಲೀಸ್​ ಬಗ್ಗೆ ಬಹುಕೋಟಿ ಗಾಸಿಪ್​; ಚಿತ್ರತಂಡದ ಸ್ಪಷ್ಟನೆ ಏನು?
ಕೋಟಿಗೊಬ್ಬ 3 ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: May 18, 2021 | 8:49 AM

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಯಾವಾಗ ಈ ಚಿತ್ರ ರಿಲೀಸ್​ ಆಗುತ್ತೆ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ. ಆದರೆ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿತ್ರಮಂದಿರಗಳಲ್ಲಿ ರಿಲೀಸ್​ ಮಾಡುವುದು ಸದ್ಯಕ್ಕಂತೂ ಸಾಧ್ಯವಿಲ್ಲ. ಇದೇ ಗ್ಯಾಪ್​ನಲ್ಲಿ ಕೆಲವು ಗಾಸಿಪ್​ಗಳು ಕೂಡ ಹರಿದಾಡುತ್ತಿವೆ. ಅದೆಕ್ಕೆಲ್ಲ ಈಗ ನಿರ್ಮಾಪಕ ಸೂರಪ್ಪ ಬಾಬ ಅವರಿಂದಲೇ ಸ್ಪಷ್ಟನೆ ಸಿಕ್ಕಿದೆ.

ಲಾಕ್​ಡೌನ್​ ಸಂದರ್ಭ ಆಗಿರುವುದರಿಂದ ಅನೇಕ ಸಿನಿಮಾಗಳು ಓಟಿಟಿ ಪ್ಲಾಟ್​ಫಾರ್ಮ್​ನ ಮೊರೆ ಹೋಗುತ್ತಿವೆ. ಇತ್ತೀಚೆಗೆ ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರ ಓಟಿಟಿಯಲ್ಲಿ ತೆರೆಕಂಡಿತು. ಅದೇ ರೀತಿ ಕೋಟಿಗೊಬ್ಬ 3 ಸಿನಿಮಾ ಕೂಡ ನೇರವಾಗಿ ಆನ್​ಲೈನ್​ನಲ್ಲಿ ರಿಲೀಸ್​ ಆಗಲಿದೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ. ಓಟಿಟಿ ಕಂಪನಿಯೊಂದರಿಂದ 35 ಕೋಟಿ ರೂ.ಗಳಿಗೆ ಆಫರ್​ ಬಂದಿದೆ ಎಂಬ ಮಾಹಿತಿ ಹರಿದಾಡಿದೆ. ಆದರೆ ಅದನ್ನು ನಿರ್ಮಾಪಕ ಸೂರಪ್ಪ ಬಾಬು ತಳ್ಳಿಹಾಕಿದ್ದಾರೆ.

ತಮ್ಮ ಚಿತ್ರವು ಥಿಯೇಟರ್​ನಲ್ಲಿ 100 ಕೋಟಿ ರೂ. ಗಳಿಸುವ ಸಾಮರ್ಥ್ಯ ಹೊಂದಿರುವಾಗ ಕೇವಲ 35 ಕೋಟಿ ರೂ.ಗಳಿಗೆ ಓಟಿಟಿಯಲ್ಲಿ ರಿಲೀಸ್​ ಮಾಡುವುದು ಸಾಧ್ಯವೇ ಇಲ್ಲ ಎಂದು ಮಾಧ್ಯಮಗಳಿಗೆ ಸೂರಪ್​ ಬಾಬು ಪ್ರತಿಕ್ರಿಯೆ ನೀಡಿದ್ದಾರೆ. ಆ ಮೂಲಕ ಯಾವುದೇ ಕಾರಣಕ್ಕೂ ‘ಕೋಟಿಗೊಬ್ಬ 3’ ಚಿತ್ರ ಓಟಿಟಿಯಲ್ಲಿ ಬಿಡುಗಡೆ ಆಗುವುದಿಲ್ಲ ಎಂಬುದು ಸ್ಪಷ್ಟವಾದಂತಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ವರ್ಷ ಏಪ್ರಿಲ್​ 29ರಂದು ಈ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ವೈರಸ್​ ಹೆಚ್ಚಾದ ಕಾರಣ ಲಾಕ್​ಡೌನ್​ ಜಾರಿ ಮಾಡಿರುವುದರಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಈ ಚಿತ್ರದಲ್ಲಿ ಸುದೀಪ್​ ಅವರ ಗೆಟಪ್​ ಗಮನ ಸೆಳೆಯುತ್ತಿದೆ. ಅವರಿಗೆ ಜೋಡಿಯಾಗಿ ಮಡೊನ್ನಾ ಸೆಬಾಸ್ಟಿಯನ್​ ನಟಿಸಿದ್ದಾರೆ. ಚಿತ್ರದ ‘ಪಟಾಕಿ ಪೋರಿಯೋ..’ ಹಾಡಿನಲ್ಲಿ ನಟಿ ಆಶಿಕಾ ರಂಗನಾಥ್​ ಹೆಜ್ಜೆ ಹಾಕಿದ್ದಾರೆ. ಶ್ರದ್ಧಾ ದಾಸ್​, ರವಿಶಂಕರ್​, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್​ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ:

Kichcha Sudeep: ಕೊರೊನಾದಿಂದ ಸುದೀಪ್​ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?

‘ಗಂಡನ ಪ್ರಾಣ ಉಳಿಸಿದ್ರು ಸುದೀಪಣ್ಣ’; ಕಣ್ಣೀರು ಹಾಕುತ್ತ ಕಿಚ್ಚನಿಗೆ ಧನ್ಯವಾದ ತಿಳಿಸಿದ ಅಭಿಮಾನಿ ಸೌಮ್ಯ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್