Mark Trailer: ‘ಮಾರ್ಕ್’ ಕಥೆ ಬಗ್ಗೆ ಸುಳಿವು ನೀಡಿದ ಟ್ರೇಲರ್: ಕಿಚ್ಚ ಸುದೀಪ್ ಸಿಕ್ಕಾಪಟ್ಟೆ ಮಾಸ್
Kichcha Sudeep: ಈ ಮೊದಲು ಬಿಡುಗಡೆ ಆಗಿದ್ದ ‘ಮಾರ್ಕ್’ ಚಿತ್ರದ ಇಂಟ್ರೋ ಟೀಸರ್ ತುಂಬಾ ಮಾಸ್ ಆಗಿತ್ತು. ಈಗ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಕಿಚ್ಚ ಸುದೀಪ್ ಅವರು ಆ್ಯಕ್ಷನ್ ಮೂಲಕ ಅಬ್ಬರಿಸಿದ್ದಾರೆ. ಟ್ರೇಲರ್ ನೋಡಿದ ಬಳಿಕ ‘ಮಾರ್ಕ್’ ಸಿನಿಮಾ ಮೇಲಿದ್ದ ನಿರೀಕ್ಷೆ ಡಬಲ್ ಆಗಿದೆ.

ಇನ್ನೇನು ಕೆಲವೇ ದಿನಗಳಲ್ಲಿ ‘ಮಾರ್ಕ್’ ಸಿನಿಮಾ (Mark Kannada Movie) ಬಿಡುಗಡೆ ಆಗಲಿದೆ. ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25ರಂದು ಸಿನಿಮಾ ರಿಲೀಸ್ ಮಾಡಲು ತಯಾರಿ ನಡೆದಿದೆ. ಈಗ ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಲಾಗಿದೆ. ಕಿಚ್ಚ ಸುದೀಪ್ (Kichcha Sudeep) ನಟನೆಯ ಈ ಸಿನಿಮಾ ಮೇಲೆ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದೆ. ಟ್ರೇಲರ್ (Mark Trailer) ನೋಡಿ ಎಲ್ಲರೂ ಮೆಚ್ಚಿಗೆ ಸೂಚಿಸಿದ್ದಾರೆ. ‘ಮಾರ್ಕ್’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅವರ ಆ್ಯಕ್ಷನ್ ಅಬ್ಬರ ಇರಲಿದೆ ಎಂಬುದಕ್ಕೆ ಟ್ರೇಲರ್ ಸಾಕ್ಷಿಯಾಗಿದೆ. ಈ ಸಿನಿಮಾಗೆ ವಿಜಯ್ ಕಾರ್ತಿಕೇಯನ್ ಅವರು ನಿರ್ದೇಶನ ಮಾಡಿದ್ದಾರೆ.
‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಮೂಲಕ ‘ಮಾರ್ಕ್’ ಸಿನಿಮಾ ನಿರ್ಮಾಣ ಆಗಿದೆ. ಈ ಮೊದಲು ಇದೇ ಕಾಂಬಿನೇಷನ್ನಲ್ಲಿ ನಿರ್ಮಾಣ ಆಗಿದ್ದ ‘ಮ್ಯಾಕ್ಸ್’ ಸಿನಿಮಾ ಕೂಡ ಡಿಸೆಂಬರ್ 25ರಂದು ಬಿಡುಗಡೆ ಆಗಿ ಧೂಳೆಬ್ಬಿಸಿತ್ತು. ಈ ವರ್ಷ ಡಿಸೆಂಬರ್ 25ಕ್ಕೆ ‘ಮಾರ್ಕ್’ ಸಿನಿಮಾ ಎಲ್ಲ ಕಡೆಗಳಲ್ಲಿ ಅಬ್ಬರಿಸಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ.
‘ಮಾರ್ಕ್’ ಸಿನಿಮಾದ ಟ್ರೇಲರ್:
ಅಜನೀಶ್ ಲೋಕನಾಥ್ ಅವರು ‘ಮಾರ್ಕ್’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಈ ಸಿನಿಮಾದ ಕಥೆ ಏನು ಎಂಬುದರ ಬಗ್ಗೆ ಟ್ರೇಲರ್ ಮೂಲಕ ಸುಳಿವು ನೀಡಲಾಗಿದೆ. ಮಕ್ಕಳ ಅಪಹರಣದ ಕಹಾನಿಯನ್ನು ಈ ಸಿನಿಮಾ ಹೊಂದಿದೆ. ಮಕ್ಕಳನ್ನು ಕಿಡ್ನಾಪ್ ಮಾಡುವ ಖಳರಿಗೆ ಮಾರ್ಕ್ ತಕ್ಕ ಪಾಠ ಕಲಿಸುತ್ತಾನೆ. ಅದು ಹೇಗೆ ಎಂಬುದನ್ನು ಚಿತ್ರಮಂದಿರದಲ್ಲಿ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.
ಇದನ್ನೂ ಓದಿ: ಸುದೀಪ್ ಎದುರಲ್ಲೇ ಧ್ರುವಂತ್ ಕಾಲೆಳೆದ ಗಿಲ್ಲಿ ನಟ: ಕೂಡಲೇ ಬಂತು ತಿರುಗೇಟು
ತಮಿಳು ಚಿತ್ರರಂಗದ ಖ್ಯಾತ ನಟ ಯೋಗಿಬಾಬು, ಮಲಯಾಳಂ ಚಿತ್ರರಂಗದ ಶೈನ್ ಟಾಮ್ ಚಾಕೋ ಸೇರಿದಂತೆ ಹಲವು ಸ್ಟಾರ್ ಕಲಾವಿದರು ‘ಮಾರ್ಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಟ್ರೇಲರ್ನಲ್ಲಿ ಎಲ್ಲ ಪಾತ್ರಗಳ ಝಲಕ್ ತೋರಿಸಲಾಗಿದೆ. ಈ ಸಿನಿಮಾ ಖಂಡಿತಾ ಸೂಪರ್ ಹಿಟ್ ಆಗಲಿದೆ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಶೇಖರ್ ಚಂದ್ರ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 12:16 pm, Sun, 7 December 25




