
ಇನ್ನೇನು ಕೆಲವೇ ದಿನಗಳಲ್ಲಿ ‘ಮಾರ್ಕ್’ ಸಿನಿಮಾ (Mark Kannada Movie) ಬಿಡುಗಡೆ ಆಗಲಿದೆ. ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25ರಂದು ಸಿನಿಮಾ ರಿಲೀಸ್ ಮಾಡಲು ತಯಾರಿ ನಡೆದಿದೆ. ಈಗ ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಲಾಗಿದೆ. ಕಿಚ್ಚ ಸುದೀಪ್ (Kichcha Sudeep) ನಟನೆಯ ಈ ಸಿನಿಮಾ ಮೇಲೆ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದೆ. ಟ್ರೇಲರ್ (Mark Trailer) ನೋಡಿ ಎಲ್ಲರೂ ಮೆಚ್ಚಿಗೆ ಸೂಚಿಸಿದ್ದಾರೆ. ‘ಮಾರ್ಕ್’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅವರ ಆ್ಯಕ್ಷನ್ ಅಬ್ಬರ ಇರಲಿದೆ ಎಂಬುದಕ್ಕೆ ಟ್ರೇಲರ್ ಸಾಕ್ಷಿಯಾಗಿದೆ. ಈ ಸಿನಿಮಾಗೆ ವಿಜಯ್ ಕಾರ್ತಿಕೇಯನ್ ಅವರು ನಿರ್ದೇಶನ ಮಾಡಿದ್ದಾರೆ.
‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಮೂಲಕ ‘ಮಾರ್ಕ್’ ಸಿನಿಮಾ ನಿರ್ಮಾಣ ಆಗಿದೆ. ಈ ಮೊದಲು ಇದೇ ಕಾಂಬಿನೇಷನ್ನಲ್ಲಿ ನಿರ್ಮಾಣ ಆಗಿದ್ದ ‘ಮ್ಯಾಕ್ಸ್’ ಸಿನಿಮಾ ಕೂಡ ಡಿಸೆಂಬರ್ 25ರಂದು ಬಿಡುಗಡೆ ಆಗಿ ಧೂಳೆಬ್ಬಿಸಿತ್ತು. ಈ ವರ್ಷ ಡಿಸೆಂಬರ್ 25ಕ್ಕೆ ‘ಮಾರ್ಕ್’ ಸಿನಿಮಾ ಎಲ್ಲ ಕಡೆಗಳಲ್ಲಿ ಅಬ್ಬರಿಸಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ.
ಅಜನೀಶ್ ಲೋಕನಾಥ್ ಅವರು ‘ಮಾರ್ಕ್’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಈ ಸಿನಿಮಾದ ಕಥೆ ಏನು ಎಂಬುದರ ಬಗ್ಗೆ ಟ್ರೇಲರ್ ಮೂಲಕ ಸುಳಿವು ನೀಡಲಾಗಿದೆ. ಮಕ್ಕಳ ಅಪಹರಣದ ಕಹಾನಿಯನ್ನು ಈ ಸಿನಿಮಾ ಹೊಂದಿದೆ. ಮಕ್ಕಳನ್ನು ಕಿಡ್ನಾಪ್ ಮಾಡುವ ಖಳರಿಗೆ ಮಾರ್ಕ್ ತಕ್ಕ ಪಾಠ ಕಲಿಸುತ್ತಾನೆ. ಅದು ಹೇಗೆ ಎಂಬುದನ್ನು ಚಿತ್ರಮಂದಿರದಲ್ಲಿ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.
ಇದನ್ನೂ ಓದಿ: ಸುದೀಪ್ ಎದುರಲ್ಲೇ ಧ್ರುವಂತ್ ಕಾಲೆಳೆದ ಗಿಲ್ಲಿ ನಟ: ಕೂಡಲೇ ಬಂತು ತಿರುಗೇಟು
ತಮಿಳು ಚಿತ್ರರಂಗದ ಖ್ಯಾತ ನಟ ಯೋಗಿಬಾಬು, ಮಲಯಾಳಂ ಚಿತ್ರರಂಗದ ಶೈನ್ ಟಾಮ್ ಚಾಕೋ ಸೇರಿದಂತೆ ಹಲವು ಸ್ಟಾರ್ ಕಲಾವಿದರು ‘ಮಾರ್ಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಟ್ರೇಲರ್ನಲ್ಲಿ ಎಲ್ಲ ಪಾತ್ರಗಳ ಝಲಕ್ ತೋರಿಸಲಾಗಿದೆ. ಈ ಸಿನಿಮಾ ಖಂಡಿತಾ ಸೂಪರ್ ಹಿಟ್ ಆಗಲಿದೆ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಶೇಖರ್ ಚಂದ್ರ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 12:16 pm, Sun, 7 December 25