‘ಮಾರ್ಕ್’ ಸಿನಿಮಾ ಅದ್ದೂರಿ ಟೀಸರ್: ಆ್ಯಕ್ಷನ್ ದೃಶ್ಯಗಳಲ್ಲಿ ಅಬ್ಬರಿಸಿದ ಕಿಚ್ಚ ಸುದೀಪ್
ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25ರಂದು ‘ಮಾರ್ಕ್’ ಸಿನಿಮಾ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಕಿಚ್ಚ ಸುದೀಪ್ ಅಭಿನಯದ ಈ ಸಿನಿಮಾದ ಮೇಲೆ ಸಖತ್ ನಿರೀಕ್ಷೆ ಇದೆ. ಈಗ ಟೀಸರ್ ಹೊರಬಂದಿದೆ. ‘ಸತ್ಯಜ್ಯೋತಿ ಫಿಲ್ಮ್ಸ್’ ಹಾಗೂ ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜತೆಯಾಗಿ ಈ ‘ಮಾರ್ಕ್’ ಚಿತ್ರವನ್ನು ನಿರ್ಮಿಸಿವೆ.

ನಟ ಕಿಚ್ಚ ಸುದೀಪ್ ಅವರ ಹೊಸ ಸಿನಿಮಾ ‘ಮಾರ್ಕ್’ (Mark Movie) ಬಗ್ಗೆ ಸಖತ್ ನಿರೀಕ್ಷೆ ಇದೆ. ‘ಮ್ಯಾಕ್ಸ್’ ಬಳಿಕ ಬರುತ್ತಿರುವ ಸಿನಿಮಾ ಆದ್ದರಿಂದ ಹೈಪ್ ಹೆಚ್ಚಿದೆ. ಈಗ ‘ಮಾರ್ಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಸಖತ್ ಆ್ಯಕ್ಷನ್ ಮೂಲಕ ಕಿಚ್ಚ ಸುದೀಪ್ (Kichcha Sudeep) ಅವರು ಅಬ್ಬರಿಸಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ‘ಮಾರ್ಕ್’ ಸಿನಿಮಾವನ್ನು ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಕಾದಿದ್ದಾರೆ. ಸುದೀಪ್ ಫ್ಯಾನ್ಸ್ ಬಳಗದಲ್ಲಿ ‘ಮಾರ್ಕ್’ ಟೀಸರ್ (Mark Movie Teaser) ಭರ್ಜರಿ ವೈರಲ್ ಆಗುತ್ತಿದೆ.
ಈಗಾಗಲೇ ‘ಮಾರ್ಕ್’ ಸಿನಿಮಾದ ಸೈಕೋ ಸೈತಾನ್ ಹಾಡನ್ನ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಅದಕ್ಕೂ ಮೊದಲು ಬಿಡುಗಡೆ ಆಗಿದ್ದ ಟೈಟಲ್ ಟೀಸರ್ ಕೂಡ ಜನಮೆಚ್ಚುಗೆ ಗಳಿಸಿತ್ತು. ಟೀಸರ್ ಹೇಗೆ ಇರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ನವೆಂಬರ್ 7ರಂದು ಟೀಸರ್ ಬಿಡುಗಡೆ ಆಗಿದ್ದು, ಸುದೀಪ್ ಅವರ ಆ್ಯಕ್ಷನ್ ಅಬ್ಬರ ನೋಡಿ ಅಭಿಮಾನಿಗಳಿಗೆ ಥ್ರಿಲ್ ಆಗಿದೆ.
ಕಾಲಿವುಡ್ ಡೈರೆಕ್ಟರ್ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ ಮೋಡಿ ಮಾಡಿತ್ತು. ಈಗ ಮತ್ತೆ ಅವರಿಬ್ಬರು ‘ಮಾರ್ಕ್’ ಸಿನಿಮಾದ ಮೂಲಕ ರಂಜಿಸಲು ಬರುತ್ತಿದ್ದಾರೆ. ‘ಮ್ಯಾಕ್ಸ್’ ರೀತಿಯೇ ಈ ಬಾರಿ ಕೂಡ ಪೊಲೀಸ್ ಆಫೀಸರ್ ಪಾತ್ರದಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.
‘ಮಾರ್ಕ್’ ಸಿನಿಮಾ ಟೀಸರ್:
‘ಮ್ಯಾಕ್ಸ್’ ಸಿನಿಮಾದಲ್ಲಿ ವಿಜಯ್ ಕಾರ್ತಿಕೇಯ ಅವರು ಒಂದು ರಾತ್ರಿಯಲ್ಲಿ ನಡೆಯುವ ಕಥೆಯನ್ನು ತುಂಬ ಚೆನ್ನಾಗಿ ತೋರಿಸಿದ್ದರು. ಈ ಬಾರಿ ‘ಮಾರ್ಕ್’ ಸಿನಿಮಾದಲ್ಲಿ ಕೂಡ ಅಂಥದ್ದೇ ಪ್ರಯತ್ನ ನಡೆದಿದೆ. ಮತ್ತಷ್ಟು ರೋಚಕವಾದ ಕಥೆಯನ್ನು ನಿರ್ದೇಶಕರು ಪ್ರೇಕ್ಷಕರ ಮುಂದೆ ಇಡುತ್ತಿದ್ದಾರೆ. ಸುದೀಪ್ ಅವರ ಗೆಟಪ್ ಗಮನ ಸೆಳೆಯುತ್ತಿದೆ. ಹೈಪ್ ಹೆಚ್ಚಲು ಅದು ಕೂಡ ಕಾರಣ ಆಗಿದೆ.
ಇದನ್ನೂ ಓದಿ: ‘45’ ಸಿನಿಮಾ ಎದುರು ‘ಮಾರ್ಕ್’: ಸುದೀಪ್ ಜೊತೆ ಮಾತನಾಡಿದ್ದೇನೆಂದ ಅರ್ಜುನ್ ಜನ್ಯ
‘ಮಾರ್ಕ್’ ಸಿನಿಮಾಗೆ ಶೇಖರ್ ಚಂದ್ರ ಅವರು ಛಾಯಾಗ್ರಹಣ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಈ ಸಿನಿಮಾದಲ್ಲಿ ಅಜಯ್ ಮಾರ್ಕಂಡೆ ಎಂಬ ಪಾತ್ರವನ್ನು ಸುದೀಪ್ ಮಾಡಿದ್ದಾರೆ. ಈ ಪಾತ್ರಕ್ಕಾಗಿ ಅವರು ಹೇರ್‌ಸ್ಟೈಲ್ ಬದಲಿಸಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ (ಡಿ.25) ‘ಮಾರ್ಕ್’ ಸಿನಿಮಾ ಅಬ್ಬರಿಸಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




