ಸುದೀಪ್ ಜನ್ಮದಿನ: ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂದ ಮ್ಯಾಕ್ಸ್​

‘ಮ್ಯಾಕ್ಸಿಮಮ್ ಮಾಸ್’ ಹಾಡಿಗೆ ಖ್ಯಾತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕೊಟ್ಟಿದ್ದಾರೆ. ಚೇತನ್ ಗಂಧರ್ವ ಅವರು ಈ ಹಾಡನ್ನು ಹಾಡಿದ್ದಾರೆ. ಈ ಹಾಡಿನ ಲಿರಿಕಲ್​ ಸಾಂಗ್ ಗಮನ ಸೆಳೆಯುತ್ತಿದೆ. ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂಬ ಸಾಲುಗಳಿಂದ ಈ ಹಾಡು ಆರಂಭ ಆಗುತ್ತದೆ.

ಸುದೀಪ್ ಜನ್ಮದಿನ: ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂದ ಮ್ಯಾಕ್ಸ್​
ಸುದೀಪ್

Updated on: Sep 02, 2024 | 8:44 AM

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ ಪ್ರಯುಕ್ತ ‘ಮ್ಯಾಕ್ಸ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ‘ಮ್ಯಾಕ್ಸಿಮಮ್ ಮಾಸ್’ ಸಾಂಗ್ ರಿಲೀಸ್ ಆಗಲಿದೆ. ಈ ಸಾಂಗ್​ನಲ್ಲಿರೋ ಪಂಚಿಂಗ್​ ಡೈಲಾಗ್​ಗಳು ಗಮನ ಸೆಳೆದಿವೆ.

‘ಮ್ಯಾಕ್ಸಿಮಮ್ ಮಾಸ್’ ಹಾಡನ್ನು ಬರೆದಿದ್ದು ನಿರ್ದೇಶಕ ಅನೂಪ್ ಭಂಡಾರಿ ಅವರು. ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂಬ ಸಾಲುಗಳಿಂದ ಈ ಹಾಡು ಆರಂಭ ಆಗುತ್ತದೆ. ‘ಪಂಜ ಎತ್ತಿ ಬಿಟ್ಟ ಅಂದ್ರೆ ಒಂದೂವರೆ ಟನ್ ಬಾಸ್, ರಟ್ಟೇಲ್ ಬಾಳ್ ಬಲ ಎದೆಲ್ ಇದೆ ದಮ್ ಬಾಸ್’ ಎಂಬ ಸಾಲುಗಳು ಗಮನ ಸೆಳೆದಿವೆ.

‘ಮ್ಯಾಕ್ಸಿಮಮ್ ಮಾಸ್’ ಹಾಡಿಗೆ ಖ್ಯಾತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕೊಟ್ಟಿದ್ದಾರೆ. ಚೇತನ್ ಗಂಧರ್ವ ಅವರು ಈ ಹಾಡನ್ನು ಹಾಡಿದ್ದಾರೆ. ಎಂಸಿ ಬಿಜ್ಜು ಹಾಡಿಗೆ ರ‍್ಯಾಪ್ ಮಾಡಿದ್ದಾರೆ. ಈ ಹಾಡು ಸದ್ಯ ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ರಿಲೀಸ್ ಆಗಿದೆ. ಈ ಸಾಂಗ್ ರಿಲೀಸ್ ಆದ ಸ್ವಲ್ಪ ಹೊತ್ತಲ್ಲಿ ಸಾವಿರಾರು ಬಾರಿ ವೀಕ್ಷಣೆ ಕಂಡಿದೆ. ಸುದೀಪ್ ಜನ್ಮದಿನಕ್ಕೆ ಈ ಸಾಂಗ್ ರಿಲೀಸ್ ಆಗಿರೋದು ವಿಶೇಷ.

YouTube video player

ಇದನ್ನೂ ಓದಿ: ಮಧ್ಯರಾತ್ರಿ ಹೇಗಿತ್ತು ನೋಡಿ ಕಿಚ್ಚ ಸುದೀಪ್ ಬರ್ತ್​ಡೇ ಸೆಲೆಬ್ರೇಷನ್

ಸುದೀಪ್ ಅವರ ನಟನೆಯ ‘ಮ್ಯಾಕ್ಸ್’ ಸಿನಿಮಾ ಈಗಲೇ ರಿಲೀಸ್ ಆಗಬೇಕಿತ್ತು. ಆದರೆ, ಕನ್ನಡದಲ್ಲಿ ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಕಾರಣದಿಂದ ಸುದೀಪ್ ಅವರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ ಎನ್ನುವ ಮಾತಿದೆ. ಇದನ್ನು ಸುದೀಪ್ ಕೂಡ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:43 am, Mon, 2 September 24

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us