Max Release Date: ಡಿಸೆಂಬರ್​ 25ಕ್ಕೆ ಬಿಡುಗಡೆ ಆಗಲಿದೆ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ

Max Movie Update: ಕಿಚ್ಚ ಸುದೀಪ್​ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ನಿರ್ಮಾಪಕರು ಗುಡ್​ ನ್ಯೂಸ್​ ನೀಡಿದ್ದಾರೆ. ಡಿಸೆಂಬರ್​ 25ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಹಲವು ತಿಂಗಳಿನಿಂದ ಕಾಯುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಸುದೀಪ್​ ಅವರು ‘ಮ್ಯಾಕ್ಸ್​’ ಸಿನಿಮಾದಲ್ಲಿ ತುಂಬ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.

Max Release Date: ಡಿಸೆಂಬರ್​ 25ಕ್ಕೆ ಬಿಡುಗಡೆ ಆಗಲಿದೆ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ
ಕಿಚ್ಚ ಸುದೀಪ್​

Updated on: Nov 27, 2024 | 4:14 PM

ಕಲೈಪುಲಿ ಎಸ್. ಧಾನು ನಿರ್ಮಾಣ ಮಾಡಿರುವ ‘ಮ್ಯಾಕ್ಸ್’ ಸಿನಿಮಾಗೆ ವಿಜಯ್ ಕಾರ್ತಿಕೇಯ ಅವರು ಆ್ಯಕ್ಷನ್​-ಕಟ್ ಹೇಳಿದ್ದಾರೆ. ಕಿಚ್ಚ ಸುದೀಪ್​ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾ ತಂಡದಿಂದ ಒಂದು ಅಪ್​ಡೇಟ್​ ಸಿಕ್ಕಿದೆ. ‘ಸರೆಗಮ ಕನ್ನಡ’ ಯೂಟ್ಯೂಬ್​​ನಲ್ಲಿ ಟೀಸರ್​ ಬಿಡುಗಡೆ ಮಾಡುವ ಮೂಲಕ ರಿಲೀಸ್​ ಡೇಟ್​ ಬಗ್ಗೆ ಅಪ್​ಡೇಟ್​ ನೀಡಲಾಗಿದೆ. ನವೆಂಬರ್​ 27ರಂದು ‘ಮ್ಯಾಕ್ಸ್​’ ಸಿನಿಮಾ ಬಗ್ಗೆ ದೊಡ್ಡ ಅನೌನ್ಸ್​ಮೆಂಟ್​ ಆಗಲಿದೆ ಎಂದು ನಿರ್ಮಾಪಕರು ಇತ್ತೀಚೆಗೆ ತಿಳಿಸಿದ್ದರು. ಅದರಂತೆ, ಇಂದು ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 25ರಂದು ವಿಶ್ವಾದ್ಯಂತ ‘ಮ್ಯಾಕ್ಸ್’ ಸಿನಿಮಾ ರಿಲೀಸ್​ ಆಗಲಿದೆ.

2022ರ ಜುಲೈನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ತೆರೆಕಂಡಿತ್ತು. ಆ ಬಳಿಕ ಸುದೀಪ್​ ಅಭಿನಯದ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ. ಇಷ್ಟು ದೊಡ್ಡ ಗ್ಯಾಪ್ ಆಗಿದ್ದಕ್ಕೆ ಸುದೀಪ್ ಅವರ ಅಭಿಮಾನಿಗಳಿಗೆ ಬೇಸರ ಇದೆ. ‘ವಿಕ್ರಾಂತ್ ರೋಣ’ ಬಳಿಕ ಸುದೀಪ್​ ಒಪ್ಪಿಕೊಂಡ ಸಿನಿಮಾ ‘ಮ್ಯಾಕ್ಸ್​’. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಕಳೆದ ವರ್ಷವೇ ಬಿಡುಗಡೆ ಆಗಬೇಕಿತ್ತು. ಆದರೆ ಒಂದಷ್ಟು ಕಾರಣಗಳಿಂದಾಗಿ ಸಿನಿಮಾದ ಬಿಡುಗಡೆ ತಡವಾಯಿತು.

‘ಮ್ಯಾಕ್ಸ್’ ಸಲುವಾಗಿ ಸುದೀಪ್​ ಅವರು ಸಾಕಷ್ಟು ಸಮಯ ಮೀಸಲಿಟ್ಟರು. ಈ ಸಿನಿಮಾದ ಬಹುಪಾಲು ಚಿತ್ರೀಕರಣ ನಡೆದಿರುವುದು ತಮಿಳುನಾಡಿನಲ್ಲಿ. ಅಲ್ಲದೇ, ನಿರ್ಮಾಪಕರು ಕೂಡ ತಮಿಳು ಚಿತ್ರರಂಗದವರು. ಕನ್ನಡದ ಕಲಾವಿದರು, ಕನ್ನಡದ ತಂತ್ರಜ್ಞರು ‘ಮ್ಯಾಕ್ಸ್​’ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಮಾಸ್​ ಆಗಿ ಮೂಡಿಬಂದಿರುವ ‘ಮ್ಯಾಕ್ಸ್’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಅಜನೀಶ್​ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಶೇಖರ್​ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ.

MAX - Release Date Announcement | Baadshah Kichcha Sudeep | Vijay Kartikeyaa | B Ajaneesh Loknath

ಸಂಯುಕ್ತಾ ಹೊರನಾಡು, ಪ್ರಮೋದ್​ ಶೆಟ್ಟಿ, ವರಲಕ್ಷ್ಮಿ ಶರತ್​ಕುಮಾರ್​, ಸುನಿಲ್ ಮುಂತಾದವರು ‘ಮ್ಯಾಕ್ಸ್’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಸುದೀಪ್​ ಅವರು ಸಿಕ್ಕಾಪಟ್ಟೆ ಮಾಸ್ ಪಾತ್ರವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​ಗಳು ಧೂಳೆಬ್ಬಿಸಿದ್ದವು. ‘ಮ್ಯಾಕ್ಸಿಮಮ್​ ಮಾಸ್​..’ ಹಾಡು ಕೂಡ ಸಖತ್​ ಸದ್ದು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us