‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ

ಕಿಚ್ಚ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಆದರೆ ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ವಿಳಂಬ ಆಗಿದೆ. ಈ ಚಿತ್ರ ಯಾವಾಗ ಬಿಡುಗಡೆ ಆಗಲಿದೆ ಎಂದು ಫ್ಯಾನ್ಸ್ ಕೇಳುತ್ತಲೇ ಇದ್ದಾರೆ. ಈ ನಡುವೆ ಚಿತ್ರತಂಡದಿಂದ ಬಿಗ್ ಅಪ್​ಡೇಟ್​ ನೀಡಲು ಸಿದ್ಧತೆ ನಡೆದಿದೆ. ಆ ಕುರಿತು ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ
ಕಿಚ್ಚ ಸುದೀಪ್

Updated on: Nov 24, 2024 | 7:51 PM

ನವೆಂಬರ್ 27ರಂದು ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಬಹು ಮುಖ್ಯವಾದ ಘೋಷಣೆ ಆಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ‘ವಿ. ಕ್ರಿಯೇಷನ್ಸ್’ ಮೂಲಕ ಕಾಲಿವುಡ್​ನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ‘ಮ್ಯಾಕ್ಸ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ ಟೈಟಲ್​ ಟ್ಯಾಕ್ಸ್ ಸಖತ್ ಸದ್ದು ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದೆ. ಈಗ ರಿಲೀಸ್​ ಡೇಟ್​ ಬಗ್ಗೆ ಮಾಹಿತಿ ಸಿಗಬಹುದು ಎಂದು ಕಿಚ್ಚ ಸುದೀಪ್ ಅವರ ಫ್ಯಾನ್ಸ್ ನಿರೀಕ್ಷಿಸಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್​ ಅವರು ನಟಿಸಿದ ಸಿನಿಮಾ ಇದು. ‘ಮ್ಯಾಕ್ಸ್’ ಚಿತ್ರಕ್ಕೆ ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರೀಕರಣ ಮಾಡಲಾಗಿದೆ. ಬಹುಪಾಲು ಶೂಟಿಂಗ್ ತಮಿಳುನಾಡಿನಲ್ಲಿ ನಡೆದಿದೆ. ಈ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದಾರೆ. ರಿಲೀಸ್ ದಿನಾಂಕದ ಬಗ್ಗೆ ಗುಡ್​ ನ್ಯೂಸ್​ ಸಿಗಲಿ ಎಂಬುದು ಫ್ಯಾನ್ಸ್ ಆಸೆ.

ಇದನ್ನೂ ಓದಿ: ‘ಪುಣ್ಯಾತ್ಮರು ಯಾವಾಗ ದೊಡ್ಮನಸ್ಸು ಮಾಡ್ತಾರೋ ಗೊತ್ತಿಲ್ಲ’; ‘ಬಿಗ್ ಬಾಸ್’ ವೇದಿಕೆ ಮೇಲೆ  ‘ಮ್ಯಾಕ್ಸ್’ ರಿಲೀಸ್ ಬಗ್ಗೆ ಸುದೀಪ್ ಮಾತು

ಒಂದು ಹೊಸ ಪೋಸ್ಟರ್​ ಮೂಲಕ ಈ ಬಗ್ಗೆ ಮಾಹಿತಿ ತಿಳಿಸಲಾಗಿದೆ. ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ‘ದೊಡ್ಡ ಅನೌನ್ಸ್​ಮೆಂಟ್​ ಸಲುವಾಗಿ ಸಿದ್ಧರಾಗಿ’ ಎಂದು ಈ ಪೋಸ್ಟರ್​ನಲ್ಲಿ ಬರೆಯಲಾಗಿದೆ. ಆದಷ್ಟು ಬೇಗ ‘ಮ್ಯಾಕ್ಸ್’ ಸಿನಿಮಾವನ್ನು ನೋಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಸಖತ್ ಮಾಸ್​ ಆಗಿ ‘ಮ್ಯಾಕ್ಸ್’ ಸಿನಿಮಾ ಸಿದ್ಧವಾಗಿದೆ. ಅದಕ್ಕೆ ಟೀಸರ್​ ಸಾಕ್ಷಿಯಾಗಿದೆ. ವಿಜಯ್ ಕಾರ್ತಿಕೇಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್ ಜೊತೆ ವರಲಕ್ಷ್ಮೀ ಶರತ್ ಕುಮಾರ್, ಪ್ರಮೋದ್ ಶೆಟ್ಟಿ, ಸಂಯುಕ್ತಾ ಹೊರನಾಡು ಮುಂತಾದವರು ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us