ಮ್ಯಾಕ್ಸ್ ಟ್ರೇಲರ್: ರಗಡ್ ಲುಕ್​ನಲ್ಲಿ ಮಾಸ್ ಆಗಿ ಕಾಣಿಸಿಕೊಂಡ ಕಿಚ್ಚ ಸುದೀಪ್

‘ಮ್ಯಾಕ್ಸ್’ ಸಿನಿಮಾ ಮೇಲೆ ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದರಲ್ಲೂ ಆ್ಯಕ್ಷನ್​ ಇಷ್ಟಪಡುವ ಪ್ರೇಕ್ಷಕರಿಗೆ ಈ ಸಿನಿಮಾದ ಮೇಲೆ ಭಾರಿ ಭರವಸೆ ಇದೆ. ಈ ಚಿತ್ರದ ಟ್ರೇಲರ್​ ಇಂದು (ಡಿಸೆಂಬರ್​ 22) ಬಿಡುಗಡೆ ಆಗಿದೆ. ಮ್ಯಾಕ್ಸಿಮಮ್ ಮಾಸ್​ ಆಗಿ ಸುದೀಪ್ ಅವರು ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಡಿ.25ರಂದು ಈ ಸಿನಿಮಾ ತೆರೆಕಾಣಲಿದೆ.

ಮ್ಯಾಕ್ಸ್ ಟ್ರೇಲರ್: ರಗಡ್ ಲುಕ್​ನಲ್ಲಿ ಮಾಸ್ ಆಗಿ ಕಾಣಿಸಿಕೊಂಡ ಕಿಚ್ಚ ಸುದೀಪ್
Kichcha Sudeep
Follow us
ಮದನ್​ ಕುಮಾರ್​
|

Updated on: Dec 22, 2024 | 10:41 PM

ಕಿಚ್ಚ ಸುದೀಪ್ ಅವರ ಮ್ಯಾಕ್ಸಿಮಮ್ ಮಾಸ್​ ಅವತಾರವನ್ನು ನೋಡಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿದ್ದಾರೆ. ಡಿಸೆಂಬರ್​ 25ರಂದು ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆಗಲಿದ್ದು, ಜನರ ನಿರೀಕ್ಷೆಯನ್ನು ಡಬಲ್ ಮಾಡಲು ಟ್ರೇಲರ್​ ರಿಲೀಸ್ ಮಾಡಲಾಗಿದೆ. ಇಂದು (ಡಿ.22) ಚಿತ್ರದುರ್ಗದಲ್ಲಿ ಪ್ರೀ-ರಿಲೀಸ್​ ಇವೆಂಟ್ ಮಾಡಲಾಗಿದೆ. ಇದೇ ವೇದಿಕೆಯಲ್ಲಿ ಟ್ರೇಲರ್​ ಅನಾವರಣ ಮಾಡಲಾಗಿದೆ. ಈ ಸಿನಿಮಾಗೆ ವಿಜಯ್ ಕಾರ್ತಿಕೇಯ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಅವರ ಮಾಸ್ ಲುಕ್ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದು ಒಂದೇ ರಾತ್ರಿಯಲ್ಲಿ ನಡೆಯುವ ಆ್ಯಕ್ಷನ್ ಕಹಾನಿ. ಈ ಚಿತ್ರದಲ್ಲಿ ಸುದೀಪ್ ಅವರಿಗೆ ಹೀರೋಯಿನ್ ಇಲ್ಲ. ಪಕ್ಕಾ ಆ್ಯಕ್ಷನ್​ ಬಯಸುವ ಪ್ರೇಕ್ಷಕರಿಗೆ ‘ಮ್ಯಾಕ್ಸ್’ ಸಿನಿಮಾದಲ್ಲಿ ಮನರಂಜನೆಯ ಫುಲ್ ಮೀಲ್ಸ್ ಇರಲಿದೆ ಎಂಬುದು ಟ್ರೇಲರ್​ನಲ್ಲೇ ಕಾಣಿಸುತ್ತಿದೆ. ಇನ್ನು, ಖಡಕ್ ಆದಂತಹ ಡೈಲಾಗ್​ಗಳ ಮೂಲಕವೂ ಸುದೀಪ್ ಅವರು ವಿಲನ್​ಗಳಿಗೆ ನಡುಕು ಹುಟ್ಟಿಸಿದ್ದಾರೆ.

ಮ್ಯಾಕ್ಸ್ ಸಿನಿಮಾ ಟ್ರೇಲರ್​:

‘ಮ್ಯಾಕ್ಸ್’ ಸಿನಿಮಾದಲ್ಲಿ ಉಗ್ರಂ ಮಂಜು, ಶರತ್ ಲೋಹಿತಾಶ್ವ, ಸುನಿಲ್, ಪ್ರಮೋದ್ ಶೆಟ್ಟಿ, ವರಲಕ್ಷ್ಮಿ ಶರತ್ ಕುಮಾರ್​, ಸುಧಾ ಬೆಳವಾಡಿ, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಳೆ ಮುಂತಾದವರು ನಟಿಸಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಈ ಚಿತ್ರದ ಬಹುತೇಕ ಶೂಟಿಂಗ್ ಮಹಾಬಲಿಪುರಂನಲ್ಲಿ ನಡೆದಿದೆ. ಕಾಲಿವುಡ್​ನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ಕಿಚ್ಚನ ಚಪ್ಪಾಳೆ ಪಡೆದ ಭವ್ಯಾ; ಮತ್ತೆ ಬದಲಾವಣೆ ತಂದ ಸುದೀಪ್

ಈಗಾಗಲೇ ‘ಮ್ಯಾಕ್ಸ್’ ಸಿನಿಮಾದಿಂದ ಬಂದಿರುವ ಟೀಸರ್​ಗಳೆಲ್ಲವೂ ಧೂಳೆಬ್ಬಿಸಿವೆ. ಹಾಡುಗಳು ಕೂಡ ಸದ್ದು ಮಾಡಿವೆ. ಈಗ ಟ್ರೇಲರ್​ ಟ್ರೆಂಡ್​ ಆಗುತ್ತಿದೆ. ‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ನಟಿಸಿದ ಸಿನಿಮಾ ಇದು. ಒಂದು ಗ್ಯಾಪ್ ಬಳಿಕ ಅವರು ದೊಡ್ಡ ಪರದೆ ಮೇಲೆ ದರ್ಶನ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅಭಿಮಾನಿಗಳಿಗೆ ಈ ಸಿನಿಮಾದ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಮೊದಲ ದಿನ ‘ಮ್ಯಾಕ್ಸ್’ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ತಿಳಿಯಲು ಎಲ್ಲರೂ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು