‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​

ವಿಕ್ರಾಂತ್​ ರೋಣ ಸಿನಿಮಾದ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಅವರ ಹೊಸ ಫೋಟೋಗಳು ಪಡ್ಡೆಗಳ ಎದೆಬಡಿತ ಹೆಚ್ಚಿಸಿವೆ. ‘ನೀವು ಕೆಟ್ಟವರಲ್ಲ; ಸಮಾಜ ಕೆಟ್ಟದ್ದು’ ಎಂದು ಈ ಫೋಟೋಗೆ ಜಾಕ್ವೆಲಿನ್​ ಕ್ಯಾಪ್ಷನ್​ ನೀಡಿದ್ದಾರೆ. ಅದು ಎಲ್ಲರ ಕೌತುಕಕ್ಕೆ ಕಾರಣ ಆಗಿದೆ.

‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​
‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​
Follow us
TV9 Web
| Updated By: ಮದನ್​ ಕುಮಾರ್​

Updated on: Jul 23, 2021 | 11:45 AM

ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರು ಇತ್ತೀಚೆಗೆ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರದ ಮೂಲಕ ಸುದ್ದಿ ಆಗಿದ್ದರು. ಈ ಸಿನಿಮಾದಲ್ಲಿ ಕಿಚ್ಚ ಸುದೀಪ್​ (Kichcha Sudeep) ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಅವರು ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಈಗ ಅವರ ಹಾಟ್​ ಫೋಟೋಗಳು ವೈರಲ್​ ಆಗಿವೆ. ಇದನ್ನು ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ​ಅದಕ್ಕೆ ಕಾರಣ ಅವರ ಬ್ಯಾಕ್​ಲೆಸ್​ ಅವತಾರ. ಸೋಶಿಯಲ್​ ಮೀಡಿಯಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಹಂಚಿಕೊಂಡಿರುವ ಈ ಫೋಟೋಗಳಿಗೆ ಭರ್ಜರಿ ಲೈಕ್ಸ್​ ಸಿಗುತ್ತಿದೆ.

ಹಿಂದಿ ಚಿತ್ರರಂಗದಲ್ಲಿ ದೊಡ್ಡಮಟ್ಟದ ಜನಪ್ರಿಯತೆ ಪಡೆದಿರುವ ಈ ಶ್ರೀಲಂಕಾ ಚೆಲುವೆಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಕಿಚ್ಚ ಸುದೀಪ್​ ಜೊತೆ ಹಾಡಿನ ಚಿತ್ರೀಕರಣದಲ್ಲಿ ಇತ್ತೀಚೆಗೆ ಪಾಲ್ಗೊಂಡಿದ್ದರು. ಅವರ ಪಾತ್ರಕ್ಕೆ ಇನ್ನೂ ಡಬ್ಬಿಂಗ್​ ಆಗುವುದು ಬಾಕಿ ಇದೆ. ಈಗ ಸೋಶಿಯಲ್​ ಮೀಡಿಯಾ ಮೂಲಕ ಜಾಕ್ವೆಲಿನ್​ ಧೂಳೆಬ್ಬಿಸುತ್ತಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋ ಹಂಚಿಕೊಂಡ ಕೆಲವೇ ನಿಮಿಷಗಳಲ್ಲಿ 7 ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. 7 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ‘ನೀವು ಕೆಟ್ಟವರಲ್ಲ; ಸಮಾಜ ಕೆಟ್ಟದ್ದು’ ಎಂದು ಈ ಫೋಟೋಗೆ ಜಾಕ್ವೆಲಿನ್​ ಕ್ಯಾಪ್ಷನ್​ ನೀಡಿದ್ದಾರೆ. ಅದು ಎಲ್ಲರ ಕೌತುಕಕ್ಕೆ ಕಾರಣ ಆಗಿದೆ. ಅದರ ಹೊರತಾಗಿ ಈ ಫೋಟೋಶೂಟ್​ ಬಗ್ಗೆ ಅವರು ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಕಿಚ್ಚ ಸುದೀಪ್​ ಜೊತೆ ವಿಕ್ರಾಂತ್​ ರೋಣ ಸಿನಿಮಾದ ಶೂಟಿಂಗ್​ನಲ್ಲಿ ಭಾಗವಹಿಸಿದ ಬಳಿಕ ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಜಾಕ್ವೆಲಿನ್​ ಖುಷಿ ಹಂಚಿಕೊಂಡಿದ್ದರು. ನಿರ್ದೇಶಕ ಅನೂಪ್ ಭಂಡಾರಿಯ ಕಾರ್ಯವೈಖರಿಗೆ ಅವರು ಮೆಚ್ಚುಗೆ ಸೂಚಿಸಿದ್ದರು. ‘ಖಂಡಿತವಾಗಿಯೂ ವಿಕ್ರಾಂತ್​ ರೋಣ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಹೆಮ್ಮೆ ತರಲಿದೆ’ ಎಂದು ಅವರು ಭವಿಷ್ಯ ನುಡಿದಿದ್ದರು.

ಜಾಕ್ವೆಲಿನ್​ ಫರ್ನಾಂಡಿಸ್ ಆಗಮನದಿಂದಾಗಿ ವಿಕ್ರಾಂತ್​ ರೋಣ ಸಿನಿಮಾದ ಮೆರುಗು ಹೆಚ್ಚಿದೆ. ‘ಜಾಕ್ವೆಲಿನ್​ ಅವರೇ ನಿಮಗೆ ಚಂದನವನಕ್ಕೆ ಸ್ವಾಗತ. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತು. ನಿಮ್ಮ ಪಾತ್ರದ ಹೆಸರು ಮತ್ತು ಫಸ್ಟ್​ಲುಕ್​ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಪ್ರೇಕ್ಷಕರಿಗೆ ಇದು ಖಂಡಿತ ಇಷ್ಟವಾಗಲಿದೆ ಎಂಬ ನಂಬಿಕೆ ನನಗಿದೆ. ಡಬ್ಬಿಂಗ್​ ಸ್ಟುಡಿಯೋದಲ್ಲಿ ಮತ್ತೆ ಭೇಟಿ ಆಗೋಣ. ಅಲ್ಲಿಯವರೆಗೆ ಸ್ವಲ್ಪ ಜೋಪಾನ’ ಎಂದು ಅನೂಪ್​ ಭಂಡಾರಿ ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

ಜಾಕ್ವೆಲಿನ್ ಜೊತೆಗಿನ ನೆಚ್ಚಿನ ಚಿತ್ರಗಳನ್ನು ಹಂಚಿಕೊಂಡ ಕಿಚ್ಚ ಸುದೀಪ್

‘ವಿಕ್ರಾಂತ್​ ರೋಣ’ ಬಜೆಟ್​ ಎಷ್ಟು? ನಂಬರ್​ ಹೇಳುವ ಬದಲು ನಿರ್ದೇಶಕರು ಹೇಳಿದ್ದೇ ಬೇರೆ​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ