AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆಯೇ ಅಬ್ಬರಿಸ್ತಾನೆ ‘ವಿಕ್ರಾಂತ್​ ರೋಣ’; ಮೊದಲ ದಿನದ ಟಿಕೆಟ್​ಗಳು ಸೋಲ್ಡ್​ ಔಟ್​

ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ‘ವಿಕ್ರಾಂತ್​ ರೋಣ’ ಟಿಕೆಟ್​ ಸೋಲ್ಡ್​ ಔಟ್​ ಆಗಿದೆ. ಮೊದಲ ದಿನದ ಬಹುತೇಕ ಎಲ್ಲ ಶೋಗಳು ಸಹ ಹೌಸ್​ಫುಲ್​ ಪ್ರದರ್ಶನ ಕಾಣಲಿವೆ.

ಬೆಳ್ಳಂಬೆಳಗ್ಗೆಯೇ ಅಬ್ಬರಿಸ್ತಾನೆ ‘ವಿಕ್ರಾಂತ್​ ರೋಣ’; ಮೊದಲ ದಿನದ ಟಿಕೆಟ್​ಗಳು ಸೋಲ್ಡ್​ ಔಟ್​
ವಿಕ್ರಾಂತ್​ ರೋಣ ಟಿಕೆಟ್​ ಬುಕಿಂಗ್​
TV9 Web
| Edited By: |

Updated on: Jul 27, 2022 | 11:18 AM

Share

ತುಂಬ ಅದ್ದೂರಿಯಾಗಿ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ. ವಿಶ್ವಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. ಕರ್ನಾಟಕದ ಎಲ್ಲೆಡೆ ಕಿಚ್ಚ ಸುದೀಪ್​ (Kichcha Sudeep) ಅಭಿಮಾನಿಗಳು ಈ ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಗುರುವಾರ (ಜುಲೈ 28) ಮುಂಜಾನೆಯೇ ಹಲವು ಕಡೆಗಳಲ್ಲಿ ‘ವಿಕ್ರಾಂತ್​ ರೋಣ’ ಅಬ್ಬರ ಆರಂಭಿಸಲಿದ್ದಾನೆ. 3ಡಿ ವರ್ಷನ್​ನಲ್ಲಿ ಈ ಚಿತ್ರ ಮೂಡಿಬಂದಿರುವುದರಿಂದ ಹೈಪ್​ ಹೆಚ್ಚಾಗಿದೆ. ಮೊದಲ ದಿನದ ಬಹುತೇಕ ಟಿಕೆಟ್​ಗಳು (Vikrant Rona Tickets) ಸೋಲ್ಡ್​ ಔಟ್​ ಆಗಿವೆ. 3ಡಿಯಲ್ಲಿ ಸಿನಿಮಾ ನೋಡಲು ಪ್ರೇಕ್ಷಕರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಈ ಚಿತ್ರ ಭರ್ಜರಿ ಓಪನಿಂಗ್​ ಪಡೆದುಕೊಳ್ಳುವುದು ಖಚಿತವಾಗಿದೆ.

ಭಾನುವಾರ (ಜುಲೈ 24) ಮಧ್ಯಾಹ್ನದಿಂದಲೇ ‘ವಿಕ್ರಾಂತ್​ ರೋಣ’ ಸಿನಿಮಾದ ಮುಂಗಡ ಟಿಕೆಟ್​ ಬುಕಿಂಗ್​ ಆರಂಭ ಆಯಿತು. ಸಿನಿಪ್ರಿಯರು ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ. ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಟಿಕೆಟ್​ ಸೋಲ್ಡ್​ ಔಟ್​ ಆಗಿದೆ. ಮೊದಲ ದಿನದ ಬಹುತೇಕ ಎಲ್ಲ ಶೋಗಳು ಸಹ ಹೌಸ್​ಫುಲ್​ ಪ್ರದರ್ಶನ ಕಾಣಲಿವೆ. ವೀಕೆಂಡ್​ನಲ್ಲಿ ಈ ಚಿತ್ರ ನೋಡಲು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಥಿಯೇಟರ್​ಗೆ ಬರಲಿದ್ದಾರೆ.

ಅನೂಪ್​ ಭಂಡಾರಿ ಅವರು ನಿರ್ದೇಶನ ಮಾಡಿರುವ ‘ವಿಕ್ರಾಂತ್​ ರೋಣ’ ಸಿನಿಮಾಗೆ ಜಾಕ್​ ಮಂಜು ಬಂಡವಾಳ ಹೂಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಬೃಹತ್​ ಸೆಟ್​ಗಳನ್ನು ಹಾಕಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ. ಸುದೀಪ್​ ಜೊತೆ ಬಾಲಿವುಡ್​ ಬೆಡಗಿ ಜಾಕ್ವೆಲಿನ್​ ಫರ್ನಾಂಡಿಸ್​, ನೀತಾ ಅಶೋಕ್​, ನಿರೂಪ್​ ಭಂಡಾರಿ ಮುಂತಾದ ಕಲಾವಿದರು ನಟಿಸಿದ್ದಾರೆ. ಜಾಕ್ವೆಲಿನ್​ ಫರ್ನಾಂಡಿಸ್ ಹಾಗೂ ಸುದೀಪ್​ ಹೆಜ್ಜೆ ಹಾಕಿರುವ ‘ರಾ ರಾ ರಕ್ಮಮ್ಮ..’ ಹಾಡನ್ನು ದೊಡ್ಡ ಪರದೆಯಲ್ಲಿ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

ಹಲವು ಭಾಷೆಗಳಿಗೆ ಡಬ್​ ಆಗಿ ‘ವಿಕ್ರಾಂತ್​ ರೋಣ’ ರಿಲೀಸ್​ ಆಗುತ್ತಿದೆ. ದಕ್ಷಿಣ ಭಾರತದ ಸಿನಿಮಾಗಳ ಮೇಲೆ ಉತ್ತರ ಭಾರತದ ಮಂದಿ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ಕಾರಣದಿಂದ ದೇಶದ ಹಲವು ನಗರಗಳಿಗೆ ತೆರಳಿ ಸುದೀಪ್​ ಮತ್ತು ಚಿತ್ರತಂಡದವರು ಪ್ರಚಾರ ಮಾಡಿದ್ದಾರೆ. ಹಿಂದಿ ಪ್ರೇಕ್ಷಕರು ಈ ಸಿನಿಮಾಗೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ.

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!