Vikrant Rona Box Office Collection: ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಮೊದಲ ದಿನವೇ ಭರ್ಜರಿ ಕಮಾಯಿ
Vikrant Rona Day 1 Collection Report: ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಮೊದಲ ದಿನ (ಜುಲೈ 28) ಉತ್ತಮ ಕಲೆಕ್ಷನ್ ಆಗಿದೆ. ಶುಕ್ರವಾರ ಮತ್ತು ವೀಕೆಂಡ್ ದಿನಗಳಲ್ಲಿ ಇನ್ನೂ ಹೆಚ್ಚಿನ ಬಿಸ್ನೆಸ್ ಆಗುವ ನಿರೀಕ್ಷೆ ಇದೆ.
ಕನ್ನಡ ಚಿತ್ರರಂಗದಲ್ಲಿ ಒಂದಕ್ಕಿಂತ ಒಂದು ದೊಡ್ಡ ಸಿನಿಮಾಗಳು ಸದ್ದು ಮಾಡುತ್ತಿವೆ. ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ (Vikrant Rona) ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಧೂಳೆಬ್ಬಿಸುತ್ತಿದೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಸಿನಿಮಾ ಗುರುವಾರ (ಜುಲೈ 28) ಗ್ರ್ಯಾಂಡ್ ಆಗಿ ರಿಲೀಸ್ ಆಯಿತು. ಮೊದಲ ದಿನವೇ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳು ಮುಗಿಬಿದ್ದು ನೋಡಿದ್ದಾರೆ. ಅಪಾರ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ. ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಂಡಿದೆ. ಮೊದಲ ದಿನ ‘ವಿಕ್ರಾಂತ್ ರೋಣ’ ಬಾಕ್ಸ್ ಆಫೀಸ್ ಕಲೆಕ್ಷನ್ (Vikrant Rona Box Office Collection) ಎಷ್ಟು ಆಗಿರಬಹುದು? ಈ ಕುತೂಹಲದ ಪ್ರಶ್ನೆ ಎಲ್ಲರ ಮನದಲ್ಲೂ ಇದೆ. ಒಂದು ಅಂದಾಜಿನ ಪ್ರಕಾರ ಈ ಸಿನಿಮಾ ಬರೋಬ್ಬರಿ 20ರಿಂದ 22 ಕೋಟಿ ರೂಪಾಯಿ ಕಮಾಯಿ ಮಾಡಿರುವ ಸಾಧ್ಯತೆ ಇದೆ. ಈ ಕುರಿತು ಚಿತ್ರದ ನಿರ್ಮಾಪಕರ ಕಡೆಯಿಂದ ಇನ್ನಷ್ಟೇ ಅಧಿಕೃತ ಹೇಳಿಕೆ ಹೊರಬೀಳಬೇಕಿದೆ.
ಹಲವು ವಿಶೇಷತೆಗಳೊಂದಿಗೆ ಮೂಡಿಬಂದ ‘ವಿಕ್ರಾಂತ್ ರೋಣ’ ಸಿನಿಮಾವನ್ನು ನೋಡಲು ಸುದೀಪ್ ಅಭಿಮಾನಿಗಳು ಅನೇಕ ತಿಂಗಳಿಂದ ಕಾದಿದ್ದರು. ಟಿಕೆಟ್ ಬುಕಿಂಗ್ ಓಪನ್ ಆಗುತ್ತಿದ್ದಂತೆಯೇ ಸಿನಿಪ್ರಿಯರು ಮುಗಿಬಿದ್ದ ಕಾರಣ ಮೊದಲ ದಿನದ ಬಹುತೇಕ ಟಿಕೆಟ್ಗಳು ಸೋಲ್ಡ್ ಔಟ್ ಆದವು. ಇದರ ಪರಿಣಾಮವಾಗಿ ಗುರುವಾರ ಅತ್ಯುತ್ತಮ ಕಮಾಯಿ ಆಗಿದೆ.
ಬಾಕ್ಸ್ ಆಫೀಸ್ ಟ್ರೇಡ್ ವಿಶ್ಲೇಷಕರು ‘ವಿಕ್ರಾಂತ್ ರೋಣ’ ಸಿನಿಮಾದ ಕಲೆಕ್ಷನ್ ಬಗ್ಗೆ ಅಂದಾಜಿಸಿದ್ದಾರೆ. ಕರ್ನಾಟಕದಿಂದ ಸುಮಾರು 16 ಕೋಟಿ ರೂಪಾಯಿ ಸಂಗ್ರಹ ಆಗಿರಬಹುದು. ಆಂಧ್ರ, ತೆಲಂಗಾಣ, ತಮಿಳುನಾಡು ಹಾಗೂ ಹಿಂದಿ ಭಾಷಿಕ ರಾಜ್ಯಗಳ ಕಲೆಕ್ಷನ್ ಕೂಡ ಸೇರಿಸಿದರೆ ಒಟ್ಟು 20ರಿಂದ 22 ಕೋಟಿ ರೂಪಾಯಿ ಆದಾಯ ಬಂದಿರಬಹುದು ಎಂದು ಹೇಳಲಾಗುತ್ತಿದೆ. ಚಿತ್ರತಂಡದ ಕಡೆಯಿಂದಲೇ ಪಕ್ಕಾ ಮಾಹಿತಿ ಸಿಗಲಿ ಎಂದು ಎಲ್ಲರೂ ಕಾಯುತ್ತಿದ್ದಾರೆ.
#VikrantRona Day 1 (Thursday) Early Estimates.#Karnataka – 14.85 Cr#AP #Telangana – 2.2 Cr#TamilNadu – 1 Cr#Kerala – 0.15 Cr#RestofIndia – 3 Cr Total – 21.2 Cr#Hindi Belts should start firing over the weekend as there is good demand for tickets building up.@KicchaSudeep
— Abhishek Parihar (@BlogDrive) July 28, 2022
#OrmaxCinematix FBO (First-Day Box Office Forecast) for today’s major Kannada release Vikrant Rona (Karnataka state only) #FBO pic.twitter.com/vZxT1OJdrg
— Ormax Media (@OrmaxMedia) July 28, 2022
ನಿರ್ಮಾಪಕ ಜಾಕ್ ಮಂಜು ಅವರು ಅದ್ದೂರಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನೂಪ್ ಭಂಡಾರಿ ಅವರು ‘ರಂಗತರಂಗ’ ರೀತಿಯಲ್ಲಿ ಮತ್ತೊಮ್ಮೆ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದ್ದಾರೆ. ನೀತಾ ಅಶೋಕ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್ ಮುಂತಾದವರಿಂದಾಗಿ ಚಿತ್ರದ ಮೆರುಗು ಹೆಚ್ಚಿದೆ. ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ ಹಾಗೂ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಕೂಡ ‘ವಿಕ್ರಾಂತ್ ರೋಣ’ ಚಿತ್ರದ ಪ್ಲಸ್ ಪಾಯಿಂಟ್ ಆಗಿದೆ.