ಕಿಚ್ಚನಿಗೆ ಸಲ್ಲು ಸಾಥ್​; ಹಿಂದಿಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್

Vikrant Rona: ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ.

ಕಿಚ್ಚನಿಗೆ ಸಲ್ಲು ಸಾಥ್​; ಹಿಂದಿಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 16, 2022 | 5:20 PM

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona Movie) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗುತ್ತಿದೆ. ಮೇ ಮೂರನೇ ವಾರದಿಂದ ಚಿತ್ರದ ಬಗ್ಗೆ ಹೊಸಹೊಸ ಅಪ್​ಡೇಟ್​ ನೀಡುವ ಬಗ್ಗೆ ಚಿತ್ರದ ನಿರ್ಮಾಪಕ ಜಾಕ್ ಮಂಜು (Jack Manju) ಹೇಳಿದ್ದರು. ಅಂತೆಯೇ ಇಂದು (ಮೇ 16) ಚಿತ್ರದ ಬಗ್ಗೆ ಎಗ್ಸೈಟಿಂಗ್ ಅಪ್​ಡೇಟ್​ ಸಿಕ್ಕಿದೆ. ಈ ಚಿತ್ರವನ್ನು ಹಿಂದಿಯಲ್ಲಿ ಸಲ್ಮಾನ್ ಖಾನ್ ವಿತರಣೆ ಮಾಡಲಿದ್ದಾರೆ. ಈ ಚಿತ್ರದ ಅಪ್​ಡೇಟ್​ ಕೇಳಿ ಫ್ಯಾನ್ಸ್ ಸಖತ್​ ಥ್ರಿಲ್ ಆಗಿದ್ದಾರೆ.

ಸಲ್ಮಾನ್ ಖಾನ್ ಹಾಗೂ ಸುದೀಪ್ ನಡುವೆ ಒಳ್ಳೆಯ ಗೆಳೆತನವಿದೆ. ‘ದಬಾಂಗ್ 3’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಹೀಗಾಗಿ, ಇವರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ನಂತರವೂ ಮುಂದುವರಿದಿದೆ. ಸಲ್ಮಾನ್ ಖಾನ್​ ಅವರು ಸುದೀಪ್​ಗೆ ಕಾರನ್ನು ಗಿಫ್ಟ್ ಮಾಡಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿದ್ದವು. ಈಗ ‘ವಿಕ್ರಾಂತ್ ರೋಣ’ ಚಿತ್ರವನ್ನು ಸಲ್ಲು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿದ್ದಾರೆ. ಇದರಿಂದ ಸಿನಿಮಾಗೆ ದೊಡ್ಡ ಬಲ ಸಿಕ್ಕಂತೆ ಆಗಿದೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ
Image
ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್​

ಸೆಪ್ಟೆಂಬರ್​ 2 ಕಿಚ್ಚ ಸುದೀಪ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್​ ರೋಣ’ ಸಿನಿಮಾದ ಫಸ್ಟ್​ ಗ್ಲಿಂಪಸ್​ ರಿಲೀಸ್​ ಆಗಿತ್ತು. ಇದನ್ನು ಸಲ್ಮಾನ್ ಖಾನ್​ ವೀಕ್ಷಣೆ ಮಾಡಿದ್ದರು.  ಈ ವಿಡಿಯೋದ ಲಿಂಕ್​​ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದ ಅವರು​ ‘ಸುದೀಪ್​ ಬೆಸ್ಟ್​ ವಿಶಸ್​’ ಎಂದು ಬರೆದುಕೊಂಡಿದ್ದರು. ಈಗ ಅವರೇ ಹಿಂದಿಯಲ್ಲಿ ಸಿನಿಮಾ ಪ್ರೆಸೆಂಟ್ ಮಾಡುತ್ತಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್​’ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

ಸುದೀಪ್​ ಅವರಿಗೆ ಬೇರೆ ಬೇರೆ ಭಾಷೆಯ ಸೆಲೆಬ್ರಿಟಿಗಳ ಜೊತೆಗೆ ನಂಟು ಇದೆ. ಆ ಎಲ್ಲ ಸೆಲೆಬ್ರಿಟಿಗಳು ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತ ಬಂದಿದ್ದಾರೆ. ಏ.2ರಂದು ಈ ಸಿನಿಮಾದ ಟೀಸರ್ ರಿಲೀಸ್​ ಆಗಿತ್ತು. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್​ ಲಾಲ್​, ಹಿಂದಿಯಲ್ಲಿ ಸಲ್ಮಾನ್​ ಖಾನ್​, ತೆಲುಗಿನಲ್ಲಿ ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ಇಂಗ್ಲಿಷ್​ನಲ್ಲಿ ವೀರೇಂದ್ರ ಸೆಹ್ವಾಗ್​ ಅವರು ಟೀಸರ್​ ಬಿಡುಗಡೆ ಮಾಡಿದ್ದರು. ಎಲ್ಲರಿಗೂ ಕಿಚ್ಚ ಸುದೀಪ್​ ಅವರು ಧನ್ಯವಾದ ಅರ್ಪಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:10 pm, Mon, 16 May 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ