
ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗುತ್ತಿದೆ. ಮೇ ಮೂರನೇ ವಾರದಿಂದ ಚಿತ್ರದ ಬಗ್ಗೆ ಹೊಸಹೊಸ ಅಪ್ಡೇಟ್ ನೀಡುವ ಬಗ್ಗೆ ಚಿತ್ರದ ನಿರ್ಮಾಪಕ ಜಾಕ್ ಮಂಜು (Jack Manju) ಹೇಳಿದ್ದರು. ಅಂತೆಯೇ ಇಂದು (ಮೇ 16) ಚಿತ್ರದ ಬಗ್ಗೆ ಎಗ್ಸೈಟಿಂಗ್ ಅಪ್ಡೇಟ್ ಸಿಕ್ಕಿದೆ. ಈ ಚಿತ್ರವನ್ನು ಹಿಂದಿಯಲ್ಲಿ ಸಲ್ಮಾನ್ ಖಾನ್ ವಿತರಣೆ ಮಾಡಲಿದ್ದಾರೆ. ಈ ಚಿತ್ರದ ಅಪ್ಡೇಟ್ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.
ಸಲ್ಮಾನ್ ಖಾನ್ ಹಾಗೂ ಸುದೀಪ್ ನಡುವೆ ಒಳ್ಳೆಯ ಗೆಳೆತನವಿದೆ. ‘ದಬಾಂಗ್ 3’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಹೀಗಾಗಿ, ಇವರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ನಂತರವೂ ಮುಂದುವರಿದಿದೆ. ಸಲ್ಮಾನ್ ಖಾನ್ ಅವರು ಸುದೀಪ್ಗೆ ಕಾರನ್ನು ಗಿಫ್ಟ್ ಮಾಡಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿದ್ದವು. ಈಗ ‘ವಿಕ್ರಾಂತ್ ರೋಣ’ ಚಿತ್ರವನ್ನು ಸಲ್ಲು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿದ್ದಾರೆ. ಇದರಿಂದ ಸಿನಿಮಾಗೆ ದೊಡ್ಡ ಬಲ ಸಿಕ್ಕಂತೆ ಆಗಿದೆ.
ಸೆಪ್ಟೆಂಬರ್ 2 ಕಿಚ್ಚ ಸುದೀಪ್ ಬರ್ತ್ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್ ರೋಣ’ ಸಿನಿಮಾದ ಫಸ್ಟ್ ಗ್ಲಿಂಪಸ್ ರಿಲೀಸ್ ಆಗಿತ್ತು. ಇದನ್ನು ಸಲ್ಮಾನ್ ಖಾನ್ ವೀಕ್ಷಣೆ ಮಾಡಿದ್ದರು. ಈ ವಿಡಿಯೋದ ಲಿಂಕ್ಅನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದ ಅವರು ‘ಸುದೀಪ್ ಬೆಸ್ಟ್ ವಿಶಸ್’ ಎಂದು ಬರೆದುಕೊಂಡಿದ್ದರು. ಈಗ ಅವರೇ ಹಿಂದಿಯಲ್ಲಿ ಸಿನಿಮಾ ಪ್ರೆಸೆಂಟ್ ಮಾಡುತ್ತಿದ್ದಾರೆ.
‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಜೊತೆ ನಿರೂಪ್ ಭಂಡಾರಿ, ನೀತಾ ಅಶೋಕ್, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ಈ ಸಿನಿಮಾ ರಿಲೀಸ್ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್’ ಬ್ಯಾನರ್ ಮೂಲಕ ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಪಕರಾಗಿದ್ದಾರೆ.
ಸುದೀಪ್ ಅವರಿಗೆ ಬೇರೆ ಬೇರೆ ಭಾಷೆಯ ಸೆಲೆಬ್ರಿಟಿಗಳ ಜೊತೆಗೆ ನಂಟು ಇದೆ. ಆ ಎಲ್ಲ ಸೆಲೆಬ್ರಿಟಿಗಳು ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತ ಬಂದಿದ್ದಾರೆ. ಏ.2ರಂದು ಈ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್ ಲಾಲ್, ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಇಂಗ್ಲಿಷ್ನಲ್ಲಿ ವೀರೇಂದ್ರ ಸೆಹ್ವಾಗ್ ಅವರು ಟೀಸರ್ ಬಿಡುಗಡೆ ಮಾಡಿದ್ದರು. ಎಲ್ಲರಿಗೂ ಕಿಚ್ಚ ಸುದೀಪ್ ಅವರು ಧನ್ಯವಾದ ಅರ್ಪಿಸಿದ್ದರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:10 pm, Mon, 16 May 22