AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ವಿಕ್ರಾಂತ್​ ರೋಣ’ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಶುರು; ಕಿಚ್ಚನ ಅಭಿಮಾನಿಗಳಿಗೆ ಸೂಪರ್​ ಸಂಡೆ

Vikrant Rona Ticket Booking: ಕಿಚ್ಚ ಸುದೀ​ಪ್​ ಅಭಿಮಾನಿಗಳ ವಲಯದಲ್ಲಿ ‘ವಿಕ್ರಾಂತ್​ ರೋಣ’ ಚಿತ್ರದ ಕ್ರೇಜ್​ ಜೋರಾಗಿದೆ. ಬಿಡುಗಡೆಗೆ ನಾಲ್ಕು ದಿನ ಇರುವಾಗಲೇ ಮುಂಗಡ ಟಿಕೆಟ್​ ಬುಕಿಂಗ್​ ಆರಂಭ ಆಗಿದೆ.

Kichcha Sudeep: ‘ವಿಕ್ರಾಂತ್​ ರೋಣ’ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಶುರು; ಕಿಚ್ಚನ ಅಭಿಮಾನಿಗಳಿಗೆ ಸೂಪರ್​ ಸಂಡೆ
ಕಿಚ್ಚ ಸುದೀಪ್
TV9 Web
| Edited By: |

Updated on: Jul 24, 2022 | 12:00 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರ ಮುಂಚೂಣಿಯಲ್ಲಿದೆ. ಈ ಸಿನಿಮಾ ನೋಡಲು ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಮೊದಲ ದಿನ ಮೊದಲ ಶೋ ನೋಡಬೇಕು ಎಂಬ ಆಸೆ ಎಲ್ಲರಿಗೂ ಇದೆ. ಆದಷ್ಟು ಬೇಗ ಟಿಕೆಟ್​ ಬುಕ್​ ಮಾಡಬೇಕು ಎಂದುಕೊಂಡು ಕಾಯುತ್ತಿದ್ದ ಸಿನಿಪ್ರಿಯರಿಗೆ ಕಿಚ್ಚ ಸುದೀಪ್ (Kichcha Sudeep)​ ಕಡೆಯಿಂದ ಈಗ ಗುಡ್​ ನ್ಯೂಸ್​ ಸಿಕ್ಕಿದೆ. ಭಾನುವಾರ (ಜುಲೈ 24) ಮಧ್ಯಾಹ್ನ 12 ಗಂಟೆಯಿಂದ ಮುಂಗಡ ಟಿಕೆಟ್​ ಬುಕಿಂಗ್ (Vikrant Rona Ticket Booking) ಶುರುವಾಗಿದೆ. ಕನ್ನಡ ವರ್ಷನ್​ ಬುಕಿಂಗ್​ಗೆ ಮೊದಲು ಅವಕಾಶ ನೀಡಲಾಗಿದೆ. ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಕಾಯ್ದಿರಿಸಲು ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ಜುಲೈ 28ರಂದು ‘ವಿಕ್ರಾಂತ್​ ರೋಣ’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ‘ವಿಕ್ರಾಂತ್​ ರೋಣ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅವರು ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬೃಹತ್​ ಸೆಟ್​ಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಸಿನಿಮಾ 3ಡಿ ಅವತರಣಿಕೆಯಲ್ಲಿ ಮೂಡಿಬರುತ್ತಿರುವುದು ವಿಶೇಷ. ಆ ಕಾರಣದಿಂದಲೂ ಅಭಿಮಾನಿಗಳ ವಲಯದಲ್ಲಿ ಸಖತ್​ ಹೈಪ್​ ಸೃಷ್ಟಿ ಆಗಿದೆ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿರುವುದು ಮಾತ್ರವಲ್ಲದೇ, ಒಂದು ಪ್ರಮುಖ ದೃಶ್ಯದಲ್ಲೂ ನಟಿಸಿದ್ದಾರೆ. ‘ರಾ ರಾ ರಕ್ಕಮ್ಮ..’ ಸಾಂಗ್​ ಈಗಾಗಲೇ ಸೂಪರ್​ ಹಿಟ್​ ಆಗಿದೆ. ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಲು ಈ ಹಾಡಿನ ಕೊಡುಗೆ ದೊಡ್ಡದಿದೆ. ನಿರೂಪ್​ ಭಂಡಾರಿ, ನೀತಾ ಅಶೋಕ್​ ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಮಾತ್ರ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ಮಲಯಾಳಂ, ತೆಲುಗು ಮುಂತಾದ ಭಾಷೆಗಳಿಗೆ ‘ವಿಕ್ರಾಂತ್​ ರೋಣ’ ಡಬ್​ ಆಗಿದೆ. ವಿಶ್ವಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಚಿತ್ರವನ್ನು ಭರ್ಜರಿಯಾಗಿ ಬರಮಾಡಿಕೊಳ್ಳಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಎಲ್ಲ ಥಿಯೇಟರ್​ಗಳ ಮುಂಭಾಗದಲ್ಲೂ ಸುದೀಪ್​ ಅವರ ಕಟೌಟ್​ಗಳು ರಾರಾಜಿಸುತ್ತಿವೆ. ಕೆಲವು ಕಡೆಗಳಲ್ಲಿ ಸುದೀಪ್​ ಮತ್ತು ಪುನೀತ್​ ಅವರ ಜೋಡಿ ಕಟೌಟ್​ ನಿಲ್ಲಿಸಲಾಗುತ್ತಿರುವುದು ವಿಶೇಷ.

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು