
ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಇಂದು ವಿಶೇಷ ದಿನ. ಟೀಸರ್ ಹಾಗೂ ಪೋಸ್ಟರ್ ಮೂಲಕ ಗಮನ ಸೆಳೆದ ‘ವಿಕ್ರಾಂತ್ ರೋಣ’ ಸಿನಿಮಾದ (Vikrant Rona Movie) ‘ರಾ ರಾ ರಕ್ಕಮ್ಮ..’ ಹಾಡಿನ (Ra Ra Rakkamma Song) ಲಿರಿಕಲ್ ವಿಡಿಯೋ ರಿಲೀಸ್ ಆಗಿದೆ. ಇದು ಅವರ ಫ್ಯಾನ್ಸ್ಗೆ ಸಖತ್ ಇಷ್ಟವಾಗಿದೆ. ಕಿಕ್ ಕೊಡುವ ರೀತಿಯಲ್ಲಿ ಈ ಹಾಡನ್ನು ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಈ ಹಾಡಿನಿಂದ ಚಿತ್ರಕ್ಕೆ ಒಳ್ಳೆಯ ಮೈಲೇಜ್ ಸಿಗುವ ಸೂಚನೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸಿದ್ದಾರೆ. ವಿಶೇಷ ಹಾಡಿನಲ್ಲಿ ಅವರು ಸುದೀಪ್ ಜೊತೆ ಸೇರಿ ಹೆಜ್ಜೆ ಹಾಕಿದ್ದಾರೆ. ಕೈಯಲ್ಲಿ ಸಾರಾಯಿ ಬಾಟಲಿ ಹಿಡಿದು, ಗ್ಲಾಮರಸ್ ಆದಂತಹ ಕಾಸ್ಟ್ಯೂಮ್ ಧರಿಸಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದ ಪೋಸ್ಟರ್ ಈ ಮೊದಲು ರಿಲೀಸ್ ಆಗಿತ್ತು. ಈಗ ಅವರ ಕುರಿತು ಸಿದ್ಧವಾದ ಹಾಡಿನ ಲಿರಿಕಲ್ ಸಾಂಗ್ ಸಖತ್ ಸದ್ದು ಮಾಡುತ್ತಿದೆ. ಈ ಮೂಲಕ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಂತೆ ಆಗಿದೆ.
ಸಾಂಗ್ ಹಿಟ್ ಆದರೆ ಚಿತ್ರದ ಮೈಲೇಜ್ ಹೆಚ್ಚುತ್ತದೆ. ಈ ಮೊದಲು ಈ ರೀತಿ ಆದ ಸಾಕಷ್ಟು ಉದಾಹರಣೆಗಳು ಇವೆ. ಈಗಾಗಲೇ ‘ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈಗ ರಿಲೀಸ್ ಆದ ‘ರಾ ರಾ ರಕ್ಕಮ್ಮ’ ಹಾಡಿನಿಂದ ಚಿತ್ರಕ್ಕೆ ಒಳ್ಳೆಯ ಹೈಪ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು, ಇದೊಂದು ಪಾರ್ಟಿ ಸಾಂಗ್ ರೀತಿ ಇದ್ದು, ಕುಣಿದು ಎಂಜಾಯ್ ಮಾಡುವವರಿಗೆ ಬೇಗ ಇಷ್ಟವಾಗುತ್ತದೆ.
ಸಾಮಾನ್ಯವಾಗಿ ಎಲ್ಲಾ ಭಾಷೆಗಳಲ್ಲಿ ಸಾಂಗ್ ಏಕ ಕಾಲದಲ್ಲಿ ರಿಲೀಸ್ ಮಾಡಲಾಗುತ್ತದೆ. ಆದರೆ, ‘ವಿಕ್ರಾಂತ್ ರೋಣ’ ಬೇರೆ ತಂತ್ರ ಬಳಸಿದೆ. ‘ರಾ ರಾ ರಕ್ಕಮ್ಮ..’ ಸಾಂಗ್ ಇಂದು ರಿಲೀಸ್ ಆಗಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಅನುಕ್ರಮವಾಗಿ ಮೇ 24, ಮೇ 25, ಮೇ 26 ಹಾಗೂ ಮೇ 27ರಂದು ಮಧ್ಯಾಹ್ನ 1.05 ಗಂಟೆಗೆ ಬಿಡುಗಡೆ ಆಗಲಿದೆ.
‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಜೊತೆ ನಿರೂಪ್ ಭಂಡಾರಿ, ನೀತಾ ಅಶೋಕ್, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ಈ ಸಿನಿಮಾ ರಿಲೀಸ್ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್’ ಬ್ಯಾನರ್ ಮೂಲಕ ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಪಕರಾಗಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:28 pm, Mon, 23 May 22