ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಇಂದು ವಿಶೇಷ ದಿನ; ‘ವಿಕ್ರಾಂತ್​ ರೋಣ’ ರಿಲೀಸ್ ಯಾವಾಗ?

‘ವಿಕ್ರಾಂತ್ ರೋಣ’ ಚಿತ್ರಕ್ಕಾಗಿ ಸುದೀಪ್​ ಭಿನ್ನ ಅವತಾರ ತಾಳಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಕಾರಣಕ್ಕೆ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಇಂದು ವಿಶೇಷ ದಿನ; ‘ವಿಕ್ರಾಂತ್​ ರೋಣ’ ರಿಲೀಸ್ ಯಾವಾಗ?
ಸುದೀಪ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 07, 2021 | 6:00 AM

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ತೆರೆಕಂಡು ಯಶಸ್ಸು ಪಡೆದುಕೊಂಡಿದೆ. ಈಗ ಸುದೀಪ್​ ಅವರ ಸಂಪೂರ್ಣ ಗಮನ ‘ವಿಕ್ರಾಂತ್​ ರೋಣ’ ಚಿತ್ರದ ಮೇಲಿದೆ. ಈ ಸಿನಿಮಾ ಬಗ್ಗೆ ಸುದೀಪ್​ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಲವು ಬಾರಿ ಅವರು ‘ವಿಕ್ರಾಂತ್​ ರೋಣ’ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದೇ ಇದಕ್ಕೆ ಸಾಕ್ಷಿ. ಹೀಗಾಗಿ, ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ರಿಲೀಸ್​ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಈ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕೊರೆಯುತ್ತಿತ್ತು. ಇದಕ್ಕೆ ಈಗ ಉತ್ತರ ಸಿಗುವ ಸಮಯ ಬಂದಿದೆ. ಇಂದು (ಡಿಸೆಂಬರ್​ 7) ಬೆಳಗ್ಗೆ 11:05ಕ್ಕೆ ವಿಕ್ರಾಂತ್​ ರೋಣ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಲಿದೆ.

‘ವಿಕ್ರಾಂತ್ ರೋಣ’ ಚಿತ್ರಕ್ಕಾಗಿ ಸುದೀಪ್​ ಭಿನ್ನ ಅವತಾರ ತಾಳಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಕಾರಣಕ್ಕೆ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾ ಪೋಸ್ಟರ್​ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಸಿನಿಮಾದ ರಿಲೀಸ್​ ದಿನಾಂಕ ತಿಳಿದುಕೊಳ್ಳುವ ಸಮಯ ಬಂದಿದೆ.

ಮೂಲಗಳ ಪ್ರಕಾರ ಫೆಬ್ರವರಿ ಅಂತ್ಯದ ವೇಳೆಗೆ ‘ವಿಕ್ರಾಂತ್​ ರೋಣ’ ರಿಲೀಸ್​ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ಜನವರಿ ತಿಂಗಳಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಇವೆಲ್ಲವೂ ದೊಡ್ಡ ಬಜೆಟ್​ ಚಿತ್ರಗಳೇ. ಈ ಸಿನಿಮಾ ಸುಗ್ಗಿಯ ಅಬ್ಬರ ಮುಗಿಯೋಕೆ ಕನಿಷ್ಠ ಒಂದು ತಿಂಗಳಾದರೂ ಬೇಕು. ಈ ಕಾರಣಕ್ಕೆ ಫೆಬ್ರವರಿ ಅಂತ್ಯಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​ ಮಾಡಿದರೆ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್​ ಮಾಡಬಹುದು.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್ ಪಾಂಡಿಯನ್​ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಚಿತ್ರ ಮೂಡಿಬರುತ್ತಿದೆ. ವಿಲಿಯಮ್​ ಡೇವಿಡ್​ ಛಾಯಾಗ್ರಹಣ, ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ಗಳು ಸಿಕ್ಕಾಪಟ್ಟೆ ಕೌತುಕ ಮೂಡಿಸಿವೆ. ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್​, ಸಿನಿಮಾ ಪ್ರಿಯರಿಗೆ ಗುಡ್​ ನ್ಯೂಸ್​; ‘83’ ಟೀಮ್​ ಜತೆ ಸೇರಿಕೊಂಡ ಕಿಚ್ಚ ಸುದೀಪ್​

ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ